ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಬೈಂದೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ನಾರಾಯಣ ಹೆಗ್ಡೆ ಆಯ್ಕೆಯಾಗಿದ್ದಾರೆ. ಇಂದು ನೂತನ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಿತು.
ಈ ಸಂದರ್ಭದಲ್ಲಿ ನಿರ್ದೇಶಕರಾದ ವೆಂಕ್ಟ ಪೂಜಾರಿ, ಅರುಣ ಕುಮಾರ್, ಎಮ್. ಎಚ್. ಗುರುದತ್ತ, ಡಿ. ಸದಾಶಿವ ಶೇರುಗಾರ, ಹೆರಿಯ ದೇವಾಡಿಗ, ವಸಂತ ಕುಮಾರ್ ಶೆಟ್ಟಿ, ಚಿಕ್ಕು ಪೂಜಾರಿ, ನಾಗರಾಜ ಶೆಟ್ಟಿ, ಸತೀಶ, ಶಂಕರ ನಾಯ್ಕ, ಜ್ಯೋತಿ ಪೂಜಾರಿ, ಎಚ್.ವಿಜಯ ಶೇರುಗಾರ್ ಉಪಸ್ಥಿತರಿದ್ದರು.
ಸಹಕಾರ ಇಲಾಖೆಯ ಸ್ವಾಮಿ ಚುನಾವಣಾಧಿಕಾರಿಯಾಗಿ ಭಾಗವಹಿಸಿ, ಆಯ್ಕೆ ಪ್ರಕ್ರಿಯೆ ನಡೆಸಿಕೊಟ್ಟರು. ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಕೆ. ಬಾಬು ಶೆಟ್ಟಿ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಿ ಶುಭ ಹಾರೈಸಿದರು.
ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಪ್ರತಾಪಚಂದ್ರ ಶೆಟ್ಟಿ ವಂದಿಸಿದರು.