ಮದರ್ ತೆರೇಸಾ ಶಿಕ್ಷಣ ಸಂಸ್ಥೆಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‌ ಕರ್ನಾಟಕ ರಾಜ್ಯ ಆಯುಕ್ತರ ಭೇಟಿ

Click Here

Call us

Call us

Call us

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಶಂಕರನಾರಾಯಣ:
ಪ್ರತಿಷ್ಠಿತ ವಿದ್ಯಾಸಂಸ್ಥೆಗಳಲ್ಲೊಂದಾದ ಮದರ್ ತೆರೇಸಾ ಶಿಕ್ಷಣ ಸಂಸ್ಥೆಗೆ ಭಾರತ್ ಸ್ಕೌಟ್ಸ್  ಮತ್ತು ಗೈಡ್ಸ್ ರಾಜ್ಯ ಆಯುಕ್ತರಾದ ಪಿ. ಜಿ. ಆರ್. ಸಿಂಧ್ಯಾ ಅವರು ಭೇಟಿ ನೀಡಿ, ಸ್ಕೌಟ್ಸ್ ಮತ್ತು ಗೈಡ್ಸ್ ದ್ಯೇಯೋದ್ದೇಶದ ಕುರಿತು ವಿಸ್ತೃತವಾದ ಮಾಹಿತಿಯನ್ನು ನೀಡಿ, ವಿದ್ಯಾರ್ಥಿಗಳೊಂದಿಗೆ ತಮ್ಮ ಸುಧೀರ್ಘ ಅನುಭವವನ್ನು ಹಂಚಿಕೊಂಡರು.

Call us

Click Here

ಮದರ್ ತೆರೇಸಾ ಶಿಕ್ಷಣ ಸಂಸ್ಥೆಯು ಆಯೋಜಿಸಿದ ಸನ್ಮಾನವನ್ನು ಸ್ವೀಕರಿಸಿ ಮಾತನಾಡಿ, ಆಡಳಿತ ಮಂಡಳಿಯು ಮದರ್ ತೆರೇಸಾರವರ ಆದರ್ಶ ಮೌಲ್ಯಗಳಿಂದ ಪ್ರೇರಿತರಾಗಿ ಮಂಗಳೂರಿನಿಂದ ಬಂದು ಕುಗ್ರಾಮವಾದ  ಶಂಕರನಾರಾಯಣದಲ್ಲಿ ಕಳೆದ 26 ವರ್ಷಗಳ ಹಿಂದೆ  ಶಿಕ್ಷಣ ಸಂಸ್ಥೆಯನ್ನು ಆರಂಭಿಸಿ ಇಂದು ಹೆಮ್ಮರವಾಗಿ ಬೆಳೆದು ಜಿಲ್ಲೆಯಲ್ಲೇ ಗುಣಮಟ್ಟದ ಶಿಕ್ಷಣ ಸಂಸ್ಥೆಯಾಗಿ ಬೆಳೆದು ನಿಲ್ಲಲು ಕಾರಣಿಕರ್ತರಾದ ಶಮಿತಾ ರಾವ್ ಮತ್ತು ರೆನಿಟಾ ಲೋಬೊ ಅವರ ಸಾಂಘಿಕ ಪರಿಶ್ರಮ ನಿಜಕ್ಕೂ ಪ್ರಶಂಸನೀಯ ಎಂದರು.

ಸ್ಕೌಟ್ ಮತ್ತು ಗೈಡ್ಸ್ ನ ಸಮಾಜಮುಖಿ ಕಾರ್ಯಗಳು ವಿದ್ಯಾರ್ಥಿಗಳಿಗೆ ಸಾಮಾಜಿಕ ಸೇವಾ ಮನೋಭಾವನೆ ಬೆಳೆಸುವಲ್ಲಿ ಸಹಕಾರಿಯಾಗುತ್ತದೆ ಜೀವನದಲ್ಲಿ ಶಿಸ್ತನ್ನು ಅಳವಡಿಸಿಕೊಳ್ಳಲು ವಿದ್ಯಾರ್ಥಿಗಳಿಗೆ ಮುಕ್ತ ಅವಕಾಶವನ್ನು ಸ್ಕೌಟ್ಸ್ ಮತ್ತು ಗೈಡ್ಸ್ ಕಲ್ಪಿಸುತ್ತದೆ ಪಾಠ ಪರೀಕ್ಷೆಯ ಜೊತೆಗೆ ಬೌದ್ಧಿಕ, ಸಾಂಸ್ಕೃತಿಕ ಆಧ್ಯಾತ್ಮಿಕ ಜವಾಬ್ದಾರಿಯನ್ನು ಬೆಳೆಸುವುದು ಸ್ಕೌಟ್ಸ್ ಮತ್ತು ಗೈಡ್ಸ್ ಸಂಘಟನೆಯ ಮುಖ್ಯ ಉದ್ದೇಶ. ಯುವ ಸಮೂಹ ದೇಶದ ಶಕ್ತಿ, ಸ್ಕೌಟ್ಸ್ ಮತ್ತು ಗೈಡ್ಸ್ ನ ಚಿಂತನೆಗಳು ವಿದ್ಯಾರ್ಥಿಗಳು ಯೋಗ್ಯ ಶಿಕ್ಷಣದ ಜೊತೆಗೆ ಸೇವಾ ಮನೋಭಾವನೆಯನ್ನು  ಬೆಳೆಸಿಕೊಳ್ಳುವ ಅನಿವಾರ್ಯತೆ ಇದೆ ಇದಕ್ಕೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ದ್ಯೇಯ ಮತ್ತು ಕಾರ್ಯ ಚಟುವಟಿಕೆಗಳು ಪೂರಕವಾಗಿದೆ ಜಗತ್ತಿನ 197 ರಾಷ್ಟ್ರಗಳಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಆಂದೋಲನವಿದೆ. 135 ಕೋಟಿ ಜನಸಂಖ್ಯೆ ಹೊಂದಿರುವ ಭಾರತ ದೇಶದಲ್ಲಿ 51ಕೋಟಿ ವಿದ್ಯಾರ್ಥಿಗಳ ಸಮುದಾಯಕ್ಕೆ ಸ್ಕೌಟ್ಸ್ ಮತ್ತು ಗೈಡ್ಸ್ ದ್ಯೆಯೋದ್ದೇಶಗಳು ತಲುಪಬೇಕಾಗಿದೆ  ಎಂದರು.

ಮುಖ್ಯ ಶಿಕ್ಷಕ ಡಾ. ರವಿದಾಸ್ ಶೆಟ್ಟಿ ಸಂಸ್ಥೆ ಬೆಳೆದು ಬಂದ ಹಾದಿಯ ಕುರಿತು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಎಂ. ಪ್ರಭಾಕರ್ ಭಟ್ ರಾಜ್ಯ ಸಂಘಟನಾ ಆಯುಕ್ತರು, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‌ ಆನಂದ ಅಡಿಗ ಜಿಲ್ಲಾ ಕಾರ್ಯದರ್ಶಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಸುಮನ ಶೇಖರ ಸಹಾಯಕ ಆಯುಕ್ತೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಆಡಳಿತ ಮಂಡಳಿಯ ಅಧಿಕಾರಿದ್ವಯರಾದ ಶಮಿತಾ ರಾವ್ ಮತ್ತು ರೆನಿಟಾ ಲೋಬೊ, ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಹಾಗೂ ಶಿಕ್ಷಕ ಮತ್ತು ಶಿಕ್ಷಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಅವಿನಾ ಡಿಸೋಜಾ ಎಲ್ಲರನ್ನೂ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿಯರಾದ ವೈಶಾಲಿ ಶೆಟ್ಟಿ ಮತ್ತು ಶ್ವೇತಾ ವಂದಿಸಿದರು.

Click here

Click here

Click here

Call us

Call us

Leave a Reply