ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಐಡಿಬಿಐ ಬ್ಯಾಂಕ್ ಕುಂದಾಪುರ ಶಾಖೆ ವತಿಯಿಂದ ಅಂಪಾರು ಮೂಡುಬಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ವಾಟರ್ ಫಿಲ್ಟರ್ ಕೊಡುಗೆಯಾಗಿ ನೀಡಲಾಯಿತು .
ಈ ಸಂದರ್ಭದಲ್ಲಿ ಐಡಿಬಿಐ ಬ್ಯಾಂಕಿನ ಸಹಾಯಕ ಜನರಲ್ ಮ್ಯಾನೇಜರ್ ನಾಗರಾಜ್ ಕಮ್ಮಾರ, ಕುಂದಾಪುರ ಶಾಖೆಯ ವ್ಯವಸ್ಥಾಪಕ ಕಿರಣ್ ಕುಮಾರ್ ಶಿಂಧೆ, ಶಾಲೆಯ ಮುಖ್ಯೋಪಾಧ್ಯಾಯರಾದ ಮಂಜುನಾಥ್ ಶೆಟ್ಟಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಮನೋಹರ್ ಶೆಟ್ಟಿ , ಶಿಕ್ಷಕರು, ಹಳೆ ವಿದ್ಯಾರ್ಥಿ ಸಂಘದ ಸದಸ್ಯರು, ಮತ್ತು ಎಸ್.ಡಿ.ಎಂ.ಸಿ.ಯ ಸದಸ್ಯರು ಉಪಸ್ಥಿತರಿದ್ದರು.