Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಶೋಷಿತ ಸಮಾಜಕ್ಕೆ ಸಾಮಾಜಿಕ ಶಕ್ತಿಯನ್ನು ನೀಡಿದವರು ಸಂತ ಸೇವಾಲಾಲರು: ಕೋಟ ಶ್ರೀನಿವಾಸ ಪೂಜಾರಿ
    ಉಡುಪಿ ಜಿಲ್ಲೆ

    ಶೋಷಿತ ಸಮಾಜಕ್ಕೆ ಸಾಮಾಜಿಕ ಶಕ್ತಿಯನ್ನು ನೀಡಿದವರು ಸಂತ ಸೇವಾಲಾಲರು: ಕೋಟ ಶ್ರೀನಿವಾಸ ಪೂಜಾರಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಸಮಾಜದ ನೂನ್ಯತೆಗಳನ್ನು ಗುರುತಿಸಿ, ಸಮಾಜವನ್ನು ಒಟ್ಟಾಗಿಸುವುದರ ಮೂಲಕ ಶೋಷಿತ ಸಮಾಜಕ್ಕೆ ಸಾಮಾಜಿಕ ಶಕ್ತಿಯನ್ನು ನೀಡಿದವರು ಸಂತ ಸೇವಾಲಾಲರು ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

    Click Here

    Call us

    Click Here

    ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೃಷ್ಣನಗರಿ ಶ್ರೀ ಸಂತ ಸೇವಾಲಾಲ್ ಬಂಜಾರ ಸಂಘ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಸಂತ ಸೇವಾಲಾಲ ಜಯಂತಿ ಕಾರ್ಯಕ್ರಮವನ್ನು ದೀಪ ಬೆಳಗುವುದರ ಮೂಲಕ ಉದ್ಘಾಟಿಸಿ ಮಾತನಾಡಿದರು.

    ಸಮಾನತೆಯ ಬದುಕಿಗೆ ಹೆಚ್ಚು ಮಹತ್ವ ನೀಡಿ ಬಂಜಾರ ಸಮುದಾಯದ ಉನ್ನತಿಗಾಗಿ ಹೋರಾಡಿದ ಮಹಾನ್ ಸಂತ ಸೇವಲಾಲರು. ಅಧೋಗತಿಯಲ್ಲಿರುವ ಸಮಾಜದ ಏಳಿಗೆಗಾಗಿ ಪ್ರತಿಯೊಂದು ಸಮುದಾಯದಲ್ಲೂ ಜನ್ಮ ತಾಳಿದ ಅದೇಷ್ಟೋ ಮಹಾಪುರುಷರ ನಿದರ್ಶನಗಳು ನಮ್ಮ ಕಣ್ಣ ಮುಂದೆ ಇದೆ. ಸೇವಲಾಲ್ ಕೂಡ ತನ್ನ ಸಮಾಜವನ್ನು ದಾರ್ಶನಿಕರಾಗಿ, ಸಂತರಾಗಿ, ಚಿಂತಕರಾಗಿ ಒಗ್ಗೂಡಿಸುವ ಕೆಲಸ ಮಾಡಿದ್ದಾರೆ ಎಂದರು. 

    ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಮಾತನಾಡಿ, ಸಮುದಾಯವನ್ನು ಒಗ್ಗೂಡಿಸಿ ಹಕ್ಕುಗಳ ಹೋರಾಟಕ್ಕಾಗಿ ಪ್ರೇರಿಪಿಸಿದವರು ಸಂತ ಸೇವಾಲಾಲರು. ಅವರ ತ್ಯಾಗ, ಚಿಂತನೆಯನ್ನು ಪ್ರತಿಯೊಬ್ಬರಿಗೂ ತಲುಪಿಸುವ ನಿಟ್ಟಿನಲ್ಲಿ ಸರ್ಕಾರವು ಜಯಂತಿ ಕಾರ್ಯಕ್ರಮವನ್ನು ಆಚರಿಸಿಕೊಂಡು ಬಂದಿದ್ದು, ಸಮುದಾಯದ ಶಕ್ತಿ, ಆತ್ಮವಿಶ್ವಾಸ ಹೆಚ್ಚಿಸಿ ಅವರು ಏಳಿಗೆ ಹೊಂದುವಲ್ಲಿ ಸೇವಾಲಾಲರ ಕೊಡುಗೆ ಅಪಾರವಾಗಿದೆ ಎಂದರು.

    ಕಾರ್ಯಕ್ರಮದಲ್ಲಿ ಕೃಷ್ಣ ನಗರಿ ಸಂತ ಶ್ರೀ ಸೇವಾಲಾಲ್ ಬಂಜಾರ ಸಂಘದ ಅಧ್ಯಕ್ಷ ಕುಮಾರ್ ಕೆ.ಎಂ ಮಾತನಾಡಿ, ಪ್ರಸ್ತುತವಾಗಿ ಸಮುದಾಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಶಿಕ್ಷಣ ಪಡೆದು ಉನ್ನತ ಸ್ಥಾನದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಸೇವಾಲಾಲರು ಹಾಕಿಕೊಟ್ಟ ಅಡಿಪಾಯದ ಕೆಲವು ಉಪದೇಶಗಳನ್ನು ನಮ್ಮ  ಜೀವನದಲ್ಲಿ ಆಳವಡಿಸಿಕೊಂಡಿರುವುದೇ ಇದಕ್ಕೆ ಮುಖ್ಯ ಕಾರಣವಾಗಿದೆ ಎಂದರು.  

    Click here

    Click here

    Click here

    Click Here

    Call us

    Call us

    ಕಾಪುವಿನ ಕಳತ್ತೂರು ಪಿ.ಕೆ.ಎಸ್ ಪ್ರೌಡಶಾಲೆಯ ಮುಖ್ಯ ಶಿಕ್ಷಕ ಗಂಗಾ ನಾಯ್ಕ್ ಎಲ್, ಸಂತ ಸೇವಾಲಾಲ ಹಾಗೂ ಬಂಜಾರ ಸಮುದಾಯದ ಆಚಾರ-ವಿಚಾರಗಳ ಕುರಿತು ಉಪನ್ಯಾಸ ನೀಡಿದರು.

     ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ಯಾಮಲಾ ಸಿ.ಕೆ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಗಣಪತಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಹಾಕಪ್ಪ ಲಮಾಣಿ, ಜಿಲ್ಲಾ ಮಟ್ಟದ ಅಧಿಕಾರಿಗಳು, ಜಿಲ್ಲಾಧಿಕಾರಿ ಕಛೇರಿಯ ಸಿಬ್ಬಂದಿಗಳು ಹಾಗೂ ಸೇವಾಲಾಲ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.

    ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಸ್ವಾಗತಿಸಿ, ನಿರೂಪಿಸಿ, ವಂದಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ

    22/05/2026

    ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ

    22/05/2026

    ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    22/05/2026
    Leave A Reply Cancel Reply

    4 + sixteen =

    Call us

    Click Here

    Call us

    Call us

    Call us
    Highest Viewed Recently
    • ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ
    • ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.