Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮೂರು ವರ್ಷಗಳಲ್ಲಿ ಉಡುಪಿ ಜಿಲ್ಲೆಗೆ ಅಗತ್ಯವಿರುವ ಕಾಲುಸಂಕ ನಿರ್ಮಾಣ: ಸಚಿವ ಸತೀಶ್ ಜಾರಕಿಹೊಳಿ
    ಉಡುಪಿ ಜಿಲ್ಲೆ

    ಮೂರು ವರ್ಷಗಳಲ್ಲಿ ಉಡುಪಿ ಜಿಲ್ಲೆಗೆ ಅಗತ್ಯವಿರುವ ಕಾಲುಸಂಕ ನಿರ್ಮಾಣ: ಸಚಿವ ಸತೀಶ್ ಜಾರಕಿಹೊಳಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಜಿಲ್ಲೆಯ ಗ್ರಾಮೀಣ ಭಾಗದಲ್ಲಿರುವ ಕಾಲುಸಂಕ ನಿರ್ಮಾಣ ಕಾಮಗಾರಿಗಳಿಗೆ ಆದ್ಯತೆ ನೀಡಿ, ಮುಂಬರುವ ಮೂರು ವರ್ಷಗಳಲ್ಲಿ ಜಿಲ್ಲೆಗೆ ಅಗತ್ಯವಿರುವ ಕಾಲಸಂಕ ನಿರ್ಮಾಣ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗುವುದು ಎಂದು ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಹೇಳಿದರು.

    Click Here

    Call us

    Click Here

    ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಲೋಕೋಪಯೋಗಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    ಮಲೆನಾಡು ಭಾಗಗಳಲ್ಲಿ ಹಳ್ಳ-ಕೊಳ್ಳಗಳನ್ನು ದಾಟಲು ಗ್ರಾಮೀಣ ಭಾಗದ ಜನರು ಕಾಲುಸಂಕಗಳನ್ನೇ ತಮ್ಮ ಸಂಚಾರಕ್ಕೆ ಬಳಸುತ್ತಾರೆ. ಈ ಹಿಂದೆ ಅವಘಡಗಳೂ ಸಹ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ನಡೆದಿವೆ. ಜನರ ಅನುಕೂಲಕ್ಕೆ ಜಿಲ್ಲೆಯಲ್ಲಿ 413 ಹೊಸಕಾಲು ಸಂಕಗಳ ನಿಮಾಣಕ್ಕೆ ಪ್ರಸ್ತಾವನೆಯನ್ನು 51.77 ಕೋಟಿ ರೂ. ವೆಚ್ಚ ಅಂದಾಜಿಸಲಾಗಿದೆ. ಈಗಾಗಳೆ ಈ ಹಿಂದೆ 30 ಕೋಟಿ. ರೂ. ಅನುದಾನ ಬಿಡುಗಡೆ ಮಾಡಲಾಗಿದೆ. ಬಾಕಿ ಉಳಿದ ಅನುದಾನವನ್ನು ಹಂತ ಹಂತವಾಗಿ ಬಿಡುಗಡೆಗೊಳಿಸಿ, ಮುಂಬರುವ ಮೂರು ವರ್ಷಗಳ ಒಳಗಾಗಿ ಕಾಲುಸಂಕಗಳನ್ನು ನಿರ್ಮಾಣಮಾಡಲಾಗುವುದು ಎಂದರು.

    ಹೆದ್ದಾರಿಯ ಅಕ್ಕಪಕ್ಕದಲ್ಲಿ ಅನಧಿಕೃತವಾಗಿ ಪ್ರಥಮ ಹಂತದಲ್ಲಿ ಟೆಂಟ್‌ಗಳನ್ನು ಹಾಕಿ ಹೋಟೆಲ್ ಅಥವಾ ಅಂಗಡಿ ಮುಂಗಟ್ಟುಗಳನ್ನು ಜನರು ನಡೆಸುತ್ತಾರೆ. ನಂತರದ ದಿನಗಳಲ್ಲಿ ಶಾಶ್ವತವಾಗಿ ಕಟ್ಟಡ ನಿರ್ಮಾಣ ಮಾಡಿ, ವಾಣಿಜ್ಯ ವಹಿವಾಟು ನಡೆಸುವುದರಿಂದ ವಾಹನಗಳನ್ನು ರಸ್ತೆಯ ಮೇಲೆ ನಿಲ್ಲಿಸಿ, ವಾಹನಗಳ ಸುಗಮ ಸಂಚಾರಕ್ಕೆ ತೊಂದರೆ ಉಂಟಾಗುತ್ತದೆ. ಹೊಸದಾಗಿ ಇವುಗಳ ನಿರ್ಮಾಣವಾಗದಂತೆ ಎಚ್ಚರಿಕೆ ವಹಿಸಬೇಕು. ಈಗಾಗಲೇ ನಿರ್ಮಾಣ ಗೊಂಡಿರುವುಗಳನ್ನು ಹಂತಹAತವಾಗಿ ತೆರವುಗೊಳಿಸಲು ಮುಂದಾಗಬೇಕು ಎಂದು ಸೂಚನೆ ನೀಡಿದರು.

    ಜಿಲ್ಲೆಯಲ್ಲಿ ಕಳೆದ ಎರಡು ವರ್ಷಗಳಿಂದ ಹೆಚ್ಚು ರಸ್ತೆ ಅಪಘಾತ ಉಂಟಾದ ಕಪ್ಪುಚುಕ್ಕೆ ಸ್ಥಳಗಳನ್ನು ಪೊಲೀಸರ ಸಹಯೋಗದೊಂದಿಗೆ ಗುರುತಿಸಲಾಗಿದೆ. ಇಲ್ಲಿ ವೈಜ್ಞಾನಿಕ ಕಾಮಗಾರಿಗಳನ್ನು ಕೈಗೊಂಡು ರಸ್ತೆ ಅಪಘಾತಗಳು ಆಗದಂತೆ ನೋಡಿಕೊಳ್ಳಲು ಅವಶ್ಯವಿರುವ ಅನುದಾನವನ್ನು ಆದ್ಯತೆಯ ಮೇಲೆ ನೀಡಲಾಗುವುದು ಎಂದರು.

    Click here

    Click here

    Click here

    Click Here

    Call us

    Call us

    ರಾಜ್ಯ ಹೆದ್ದಾರಿಯ 6 ಮೀಟರ್ ನಂತರದಲ್ಲಿ ಕಟ್ಟಡಗಳ ನಿರ್ಮಾಣಕ್ಕೆ ಅನುಮತಿ ನೀಡಲಾಗುತ್ತಿದೆ. ಆದರೆ ಜಿಲ್ಲಾ ರಸ್ತೆಯಲ್ಲಿ 25 ಮೀ. ವರೆಗೆ ಕಟ್ಟಡ ನಿರ್ಮಾಣಕ್ಕೆ ಅನುಮತಿ ನೀಡಲು ಜಾಗ ಬಿಡಬೇಕು ಹಾಗೂ ಈಗಾಗಲೇ ನಿರ್ಮಾಣಗೊಂಡಿರುವ ಮನೆಗಳ ಮೇಲೆ ಹೆಚ್ಚುವರಿ ಮೇಲ್ಮಹಡಿ ಕಟ್ಟಡ ನಿರ್ಮಾಣಕ್ಕೆ ಸಹ ಅನುಮತಿ ನೀಡುತ್ತಿಲ್ಲ ಎಂಬ ದೂರುಗಳು ಈ ಭಾಗದಲ್ಲಿ ಹೆಚ್ಚು ಸಮಸ್ಯೆಯಾಗಿದೆ. ಈ ಬಗ್ಗೆ ಪರಿಶೀಲಿಸಿ 6 ಮೀ. ಗೆ ಎರಡೂ ರಸ್ತೆಗಳಲ್ಲಿ ನಂತರ ಎನ್.ಓ.ಸಿ ನೀಡಲು ಕ್ರಮವಹಿಸಿ, ಜನರಿಗೆ ಅನ್ಯಾಯವಾಗದಂತೆ ಮಾಡಲಾಗುವುದು ಎಂದರು.

    ಜಿಲ್ಲೆಯಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಬಿಡುಗಡೆ ಆಗಿರುವ ಅನುದಾನವನ್ನು ಪೂರ್ಣಪ್ರಮಾಣದಲ್ಲಿ ಸಮರ್ಪಕವಾಗಿ ಬಳಸಿಕೊಂಡು ಅಭಿವೃದ್ಧಿ ಕಾರ್ಯಗಳನ್ನು ಗುಣಮಟ್ಟದೊಂದಿಗೆ ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.

    ವಿಧಾನ ಪರಿಷತ್ ಶಾಸಕರಾದ ಮಂಜುನಾಥ್ ಭಂಡಾರಿ ಮಾತನಾಡಿ, ಕರಾವಳಿ ಭಾಗದಲ್ಲಿ ಹೆಚ್ಚು ಪ್ರಮಾಣದ ಮಳೆ ಬೀಳುತ್ತದೆ. ಇಲ್ಲಿ ಯಾವುದೇ ಕಟ್ಟಡ ಅಥವಾ ಸೇತುವೆ ನಿರ್ಮಾಣ ಮಾಡುವಾಗ ಇಲ್ಲಿನ ಪ್ರಾಕೃತಿಕ ಹವಾಮಾನಕ್ಕೆ ಅನುಗುಣವಾಗಿ ಕಟ್ಟಡ, ಸೇತುವೆ ಸೇರಿದಂತೆ ಮತ್ತಿತರ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವಾಗ ಇಲ್ಲಿಗೆ ತಕ್ಕಂತೆ ವಿನ್ಯಾಸ ರಚಿಸಿ, ಕೈಗೊಳ್ಳಬೇಕು. ನದಿಗಳಿಗೆ ನಿರ್ಮಾಣ ಮಾಡಿರುವ ಸೇತುವೆ ಬಳಿ ಮರಳು ಗಣಿಗಾರಿಕೆ ಕೈಗೊಳ್ಳುವುದರಿಂದ ಸೇತುವೆ ಕಟ್ಟಡಕ್ಕೆ ಹಾನಿಉಂಟಾಗುತ್ತದೆ ಎಂದು ಸಚಿವರ ಗಮನಕ್ಕೆ ತಂದರು.

    ಶಾಸಕ ಸುನಿಲ್ ಕುಮಾರ್ ಮಾತನಾಡಿ, ಹೆಬ್ರಿ ತಾಲೂಕಿನ ಮಟ್ಟಾವುನಲ್ಲಿ ಅಧಿಕ ಸಂಖ್ಯೆಯ ಮಲೆಕುಡಿಯ ಜನಜಾಂಗದವರು ವಾಸಿಸುತ್ತಿರುವ ಹಿನ್ನೆಲೆ, ಅವರುಗಳ ಸಂಚಾರಕ್ಕೆ ಅನುಕೂಲವಾಗುವಂತೆ ಸೇತುವೆ ನಿರ್ಮಾಣಕ್ಕೆ ಕ್ರಮಕೈಗೊಳ್ಳುವಂತೆ, ರಸ್ತೆ ಪಕ್ಕದಲ್ಲಿ ಅನಧಿಕೃತ ಅಂಗಡಿ ನಿರ್ಮಾಣವಾಗದಂತೆ ಎಚ್ಚರವಹಿಸಲು, ಜಿಲ್ಲಾ ಹೆದ್ದಾರಿ ಅಕ್ಕಪಕ್ಕದಲ್ಲಿ 25 ಮೀಟರ್ ವ್ಯಾಪ್ತಿಯೊಳಗೆ ಕಟ್ಟಡ ನಿರ್ಮಾಣ ಮಾಡಬಾರದು ಎಂಬ ನಿಯಮದಿಂದ ಜನರಿಗೆ ತೊಂದರೆಯಾಗುತ್ತಿರುವ ಬಗ್ಗೆ, ಮಳೆಯಿಂದ ಹಾಳಾದ ರಸ್ತೆಗಳ ನಿರ್ವಹಣೆಗೆ ಅನುದಾನ ಬಿಡುಗಡೆ ಮಾಡುವಂತೆ ಸಚಿವರ ಗಮನಕ್ಕೆ ತಂದರು. ಜಿಲ್ಲೆಯಲ್ಲಿ ಕಿಂಡಿ ಆಣೆಕಟ್ಟು, ಮೇಲ್ಸೇತುವೆ ಒಳಗೊಂಡಂತೆ ನಿರ್ಮಾಣ ಮಾಡುವಾಗ ಅವಶ್ಯಕತೆ ಇರುವ ಕಡೆ ಆಣೆಕಟ್ಟು ನಿರ್ಮಾಣ ಮಾಡಬೇಕು ಎಂದರು.

    ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಮಾತನಾಡಿ, ಬೈಂದೂರು ತಾಲೂಕಿನಲ್ಲಿ ಕಾಲುಸಂಕಗಳಿಗೆ ಬಹುದೊಡ್ಡ ಬೇಡಿಕೆಯಿದ್ದು, ಆದ್ಯತೆಯ ಮೇಲೆ ಕಾಲುಸಂಕ ನಿರ್ಮಾಣ ಕಾರ್ಯ ಕೈಗೊಳ್ಳುವುದರಿಂದ ಕೃಷಿ ಚಟುವಟಿಕೆಗಳಿಗೆ, ದ್ವಿಚಕ್ರ ವಾಹನ ಸವಾರರಿಗೆ, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರ ಸಂಚಾರಕ್ಕೆ ಅನುವು ಮಾಡಿಕೊಟ್ಟಾಂತಾಗುತ್ತದೆ ಎಂದು ಮನವಿ ಮಾಡಿದರು.

    ಶಾಸಕ ಕಿರಣ್ ಕುಮಾರ್ ಕೊಡ್ಗಿ ಮಾತನಾಡಿ, ಜಿಲ್ಲೆಯಲ್ಲಿ ಅಧಿಕ ಮಳೆಯಾಗುವ ಹಿನ್ನೆಲೆ, ರಸ್ತೆಯ ನಿರ್ವಹಣೆಗೆ ಅಗತ್ಯ ಕ್ರಮವಹಿಸುವಂತೆ ಹಾಗೂ ಎಂ.ಡಿ.ಆರ್ ಅಪ್‌ಗ್ರೇಡೇಶನ್ ಆಗಿರುವುದರಿಂದ ರಸ್ತೆ ದುರಸ್ಥಿ ನಿರ್ವಹಣೆ ಕಾಮಗಾರಿಯನ್ನು ಸಮರ್ಪಕವಾಗಿ ಮಾಡುವಂತೆ ಸಚಿವರ ಗಮನಕ್ಕೆ ತಂದರು.

       ಶಾಸಕ ಯಶ್‌ಪಾಲ್ ಎ ಸುವರ್ಣ ಮಾತನಾಡಿ, ಬಂಕರಕಟ್ಟೆಯಲ್ಲಿ ಸೇತುವೆಯ ನಿರ್ಮಾಣವನ್ನು ಕೆಳಭಾಗದಲ್ಲಿ ನಿರ್ಮಾಣ ಮಾಡಿರುವ ಹಿನ್ನೆಲೆ, ಮಳೆಗಾಲದಲ್ಲಿ ನೀರು ಸೇತುವೆಯ ಮೇಲ್ಭಾಗದಲ್ಲಿ ಹರಿಯುವುದರಿಂದ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ತೊಂದರೆ ಉಂಟಾಗುತ್ತಿರುವ ಹಿನ್ನೆಲೆ, ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ತಿಳಿಸಿದರು.

    ಸಭೆಯಲ್ಲಿ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ, ಕಾರ್ಯಪಾಲಕ ಅಭಿಯಂತರ ಕಿರಣ್ ಎಸ್,  ಲೋಕೋಪಯೋಗಿ ಇಲಾಖೆಯ ತಾಂತ್ರಿಕ ಸಹಾಯಕಿ ಜೆ.ಜಿ. ಶಾಂತಲಾ, ಗುತ್ತಿಗೆದಾರರು, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ

    22/05/2026

    ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ

    22/05/2026

    ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    22/05/2026
    Leave A Reply Cancel Reply

    1 × five =

    Call us

    Click Here

    Call us

    Call us

    Call us
    Highest Viewed Recently
    • ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ
    • ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.