Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಜನ ಸಾಮಾನ್ಯರ ಅರ್ಥಿಕ ಸ್ಥಿತಿ ಉತ್ಪನ್ನಗೊಳಿಸಲು ಗ್ಯಾರಂಟಿ ಯೋಜನೆ ಸಹಕಾರಿ: ಹೆಚ್.ಎಂ. ರೇವಣ್ಣ
    ಉಡುಪಿ ಜಿಲ್ಲೆ

    ಜನ ಸಾಮಾನ್ಯರ ಅರ್ಥಿಕ ಸ್ಥಿತಿ ಉತ್ಪನ್ನಗೊಳಿಸಲು ಗ್ಯಾರಂಟಿ ಯೋಜನೆ ಸಹಕಾರಿ: ಹೆಚ್.ಎಂ. ರೇವಣ್ಣ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳು ರಾಜ್ಯದ ಜನರ ಆರ್ಥಿಕ ಸ್ಥಿತಿಯನ್ನು ಉತ್ತಮಗೊಳಿಸುವುದರೊಂದಿಗೆ ಅವರಿಗೆ ನೆಮ್ಮದಿ ನೀಡಿ, ಸಾಮಾಜಿಕ ಪರಿವರ್ತನೆ ಮಾಡಲಾಗಿದೆ. ಈ ಯೋಜನೆಗಳು ದೇಶಕ್ಕೆ ಮಾದರಿಯಾಗಿದೆ ಎಂದು ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್.ಎಂ. ರೇವಣ್ಣ ಹೇಳಿದರು.

    Click Here

    Call us

    Click Here

    ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಉಡುಪಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    ಗ್ಯಾರಂಟಿ ಯೋಜನೆಯ ಜಿಲ್ಲಾ ಮಟ್ಟದ ಕಚೇರಿಯು ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿ ಪ್ರಾರಂಭವಾಗಿದ್ದು, ಈಗಾಗಲೇ ಸಮಿತಿಯ ಸದಸ್ಯರುಗಳಿಗೆ ಗುರುತಿನ ಚೀಟಿಯನ್ನೂ ಸಹ ನೀಡಲಾಗಿದೆ. ಗ್ಯಾರಂಟಿ ಯೋಜನೆಯ ಸಮಿತಿ ಸದಸ್ಯರುಗಳು ತಾಲೂಕಿನ ಪ್ರತೀ ಮನೆಗೂ ಭೇಟಿ ನೀಡಿ, ಪಂಚ ಗ್ಯಾರಂಟಿಗಳು ದೊರಕಿರುವ ಬಗ್ಗೆ ಮಾಹಿತಿ ಕಲೆ ಹಾಕಬೇಕು. ಒಂದು ವೇಳೆ ಯೋಜನೆಗಳು ಫಲಾನುಭವಿಗಳನ್ನು ತಲುಪುವಲ್ಲಿ ಯಾವುದೇ ನ್ಯೂನ್ಯತೆಗಳು ಇದ್ದಲ್ಲಿ ಅದನ್ನು ಪರಿಹರಿಸಿ, ವ್ಯವಸ್ಥಿತವಾಗಿ ಯೋಜನೆಗಳು ಫಲಾನುಭವಿಗಳನ್ನು ತಲುಪುವಂತೆ ಮಾಡಬೇಕು ಎಂದರು.

    ಗೃಹಲಕ್ಷ್ಮೀ ಯೋಜನೆಯ ಅರ್ಜಿ ಸಲ್ಲಿಸದ ಅರ್ಹ ಫಲಾನುಭವಿಗಳಿದ್ದರು ಗೃಹ ಸಾಲ ತೆಗೆದುಕೊಳ್ಳುವ ಉದ್ದೆಶದಿಂದ ಇನ್ ಕಂಮ್ ಟ್ಯಾಸ್ಕ್ ರಿರ್ಟನ್ ಅಥವಾ ಜಿ.ಎಸ್.ಟಿ ಪಾವತಿಸುತ್ತಾರೆ ಎಂಬ ಕಾರಣದಿಂದ ಅವರ ಅರ್ಜಿಗಳನ್ನು ಪುರಸ್ಕರಿಸಿರುವುದಿಲ್ಲ ಎಂಬ ದೂರುಗಳು ಬರುತ್ತಿವೆ ಈ ಬಗ್ಗೆ ಪರಿಶೀಲಿಸಿ ಅರ್ಹರಿದ್ದಲ್ಲಿ ಅವರಿಗೂ ಗ್ಯಾರಂಟಿ ಯೋಜನೆ ತಲುಪಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

      ಜಿಲ್ಲೆಯಲ್ಲಿ ಯುವನಿಧಿ ಗ್ಯಾರಂಟಿ ಯೋಜನೆಯಡಿ ಸ್ಟೆöಫ್ಯಾಂಡ್ ಪಡೆಯುತ್ತಿರುವ ಫಲಾನುಭವಿಗಳು 2 ವರ್ಷಗಳ ನಂತರ ಸ್ವಯಂ ಉದ್ಯೋಗ ಕೈಗೊಳ್ಳಲು ಅನುಕೂಲವಾಗುವಂತೆ ಅವರಿಗೆ ಕೌಶಲ್ಯಾ ಅಭಿವೃದ್ಧಿ ತರಬೇತಿಗಳನ್ನು ನೀಡಬೇಕೆಂದು ಅಧಿಕಾರಿಗಳಿಂದ ಸೂಚನೆ ನೀಡಿದರು.

    Click here

    Click here

    Click here

    Call us

    Call us

    ಗೃಹಲಕ್ಷ್ಮೀ ಯೋಜನೆಯಡಿ ರಾಜ್ಯದಲ್ಲಿ 1.22 ಕೋಟಿ ಫಲಾನುಭವಿಗಳ ಖಾತೆಗೆ 35,180 ಕೋಟಿ ರೂ. ಹಾಗೂ ಜಿಲ್ಲೆಯಲ್ಲಿ 2,24,348 ಫಲಾನುಭವಿಗಳ ಖಾತೆಗೆ 648.52 ಕೋಟಿ ರೂ. ಗಳನ್ನು ಡಿ.ಬಿಟ.ಇ ಮೂಲಕ ವರ್ಗವಣೆ ಮಾಡಲಾಗಿದೆ. ಗೃಹಜ್ಯೋತಿ ಯೋಜನೆಯಡಿ ರಾಜ್ಯದಲ್ಲಿ 1.63 ಕೋಟಿ ಫಲಾನುಭವಿಗಳಿಗೆ 12,589 ಕೋಟಿ ರೂ. ಹಾಗೂ ಜಿಲ್ಲೆಯಲ್ಲಿ 3,39,305 ಫಲಾನುಭವಿಗಳಿಗೆ 342.16 ಕೋಟಿ ರೂ. ಗಳ ವಿದ್ಯುತ್ ವೆಚ್ಚವನ್ನು ಭರಿಸಲಾಗಿದೆ. ಅನ್ನಭಾಗ್ಯ ಯೋಜನೆಯಡಿ ರಾಜ್ಯದಲ್ಲಿ 63.68 ಕೋಟಿ ಫಲಾನುಭವಿಗಳಿಗೆ ಖಾತೆಗೆ 10,452 ಕೋಟಿ ರೂ. ಹಾಗೂ ಜಿಲ್ಲೆಯಲ್ಲಿ 1.21 ಕೋಟಿ ಫಲಾನುಭವಿಗಳಿಗೆ 202.49 ಕೋಟಿ ರೂ. ಅನ್ನು ಡಿ.ಬಿ.ಟಿ ಮೂಲಕ ವರ್ಗಾಯಿಸಲಾಗಿದೆ. ಶಕ್ತಿ ಯೋಜನೆಯಡಿ ರಾಜ್ಯದಲ್ಲಿ 397 ಕೋಟಿ ಮಹಿಳಾ ಪ್ರಯಾಣಿಕರು ಪ್ರಯಾಣಿಸಿ, 9,665 ಕೋಟಿ ರೂ. ಹಾಗೂ ಜಿಲ್ಲೆಯಲ್ಲಿ 2.16 ಕೋಟಿ ಮಹಿಳಾ ಪ್ರಯಾಣಿಕರು ಪ್ರಯಾಣಿಸಿದ್ದು, 80.45 ಕೋಟಿ ರೂ. ಭರಿಸಲಾಗಿದೆ. ಯುವನಿಧಿ ಯೋಜನೆಯಡಿ ರಾಜ್ಯದಲ್ಲಿ 2.51 ಲಕ್ಷ ಫಲಾನುಭವಿಗಳು ನೋಂದಾಯಿಸಿಕೊಂಡು 270.17 ಕೋಟಿ ರೂ.ಗಳನ್ನು ಅಭ್ಯರ್ಥಿಗಳ ಖಾತೆಗೆ ಪಾವತಿಸಲಾಗಿದೆ. ಜಿಲ್ಲೆಯಲ್ಲಿ 3,494 ಅಭ್ಯರ್ಥಿಗಳು ನೋಂದಾಯಿಸಿಕೊAಡಿದ್ದು, ಇದಕ್ಕಾಗಿ 3.75 ಕೋಟಿ ವೆಚ್ಚ ಮಾಡಲಾಗಿದೆ ಎಂದರು.

    ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷೆ ಡಾ. ಪುಷ್ಪಾ ಅಮರನಾಥ್ ಮಾತನಾಡಿ, ಜಿಲ್ಲೆಯ ಪಂಚ ಗ್ಯಾರಂಟಿ ಯೋಜನೆಯ ಫಲಾನುಭವಿಗಳ ಅಂಕಿ-ಅAಶಗಳನ್ನು ಗಮನಿಸಿದಾಗ ಜಿಲ್ಲೆಯಲ್ಲಿ ಅಧಿಕ ಫಲಾನುಭವಿಗಳಿರುವುದು ಕಂಡುಬAದಿದೆ. ಪ್ರತಿಶತಃ ನೂರರಷ್ಟು ಅರ್ಹ ಫಲಾನುಭವಿಗಳಿಗೆ ಗ್ಯಾರಂಟಿ ಯೋಜನೆಗಳು ತಲುಪಬೇಕು. ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯರು ಮನೆ ಮನೆ ಭೇಟಿ ನೀಡಿ, ಗ್ಯಾರಂಟಿ ಯೋಜನೆಯ ಅನುಷ್ಠಾನ ಪ್ರತಿಯೊಬ್ಬರಿಗೂ ತಲುಪಿದೆ ಎಂಬ ಬಗ್ಗೆ ಖಚಿತಪಡಿಸಿಕೊಳ್ಳಬೇಕು ಎಂದರು.

    ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾ ಅಧ್ಯಕ್ಷ ಅಶೋಕ್ ಕೊಡವೂರು ಮಾತನಾಡಿ, ಸರಕಾರ ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗಳನ್ನು ರಚಿಸಿ, ಜವಾಬ್ದಾರಿ ನಮ್ಮ ಮೇಲೆ ಕೊಟ್ಟಿದೆ. ಪಂಚ ಗ್ಯಾರಂಟಿ ಯೋಜನೆಗಳನ್ನು ಜಿಲ್ಲೆಯ ಅರ್ಹ ಫಲಾನುಭವಿಗಳಿಗೆ ದೊರೆಯುವಂತೆ ನೋಡಿಕೊಳ್ಳುವುದು ನಮ್ಮ ಆದ್ಯ ಕರ್ತವ್ಯವಾಗಿದೆ. ಕೆಲವು ಸಣ್ಣ-ಪುಟ್ಟ ಗ್ಯಾರಂಟಿ ಯೋಜನೆಗಳ ನ್ಯೂನ್ಯತೆಗಳಿಂದ ಫಲಾನುಭವಿಗಳು ವಂಚಿತರಾಗಿದ್ದಾರೆ. ಇವರಿಗೆ ನ್ಯಾಯ ಕೊಡಿಸುವ ಕೆಲಸವಾಗಬೇಕಿದೆ ಎಂದರು.

    ಸಭೆಯಲ್ಲಿ ಉಪಾಧ್ಯಕ್ಷರುಗಳಾದ ಪ್ರಶಾಂತ್ ಜತ್ತನ್, ಗೀತಾ ವಾಗ್ಳೆ ಹಾಗೂ ಸಂತೋಷ್ ಕುಲಾಲ್, ಜಿಲ್ಲಾಧಿಕಾರಿ ಡಾ.ಕೆ ವಿದ್ಯಾಕುಮಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಸತೀಶ್ ಜಪ್ತಿ, ವಿವಿಧ ತಾಲೂಕುಗಳ ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿಯ ಅಧ್ಯಕ್ಷರು, ಪದಾಧಿಕಾರಿಗಳು, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲೂಕುಗಳ ತಹಶೀಲ್ದಾರರುಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಉಡುಪಿ: ವಿದ್ಯಾರ್ಥಿವೇತನ ಸೌಲಭ್ಯಕ್ಕೆ ಅರ್ಜಿ ಆಹ್ವಾನ

    04/07/2026

    ಮುಂಗಾರು ಹಂಗಾಮಿನಲ್ಲಿ ರೈತರಿಂದಲೇ ಬೆಳೆ ಸಮೀಕ್ಷೆಗೆ ಅವಕಾಶ

    04/07/2026

    ವಚನ ಸಾಹಿತ್ಯ ಉಳಿವಿಗೆ ಅವಿರತ ಶ್ರಮ ವಹಿಸಿದ ಫ.ಗು ಹಳಕಟ್ಟಿ: ಎಂ.ಎ ಗಫೂರ್

    03/07/2026
    Leave A Reply Cancel Reply

    15 − two =

    Call us

    Click Here

    Call us

    Call us

    Call us
    Highest Viewed Recently
    • ಮರಳಿ ಸಾಲಿಗ್ರಾಮ ಯಕ್ಷ ರಂಗದಂಗಳಕ್ಕೆ ಸಮಾರಂಭದಲ್ಲಿ ಕೋಟ ಶಿವಾನಂದ ಅವರಿಗೆ ಸನ್ಮಾನ
    • ಗಾಳಿಯಿಂದ ಹಾನಿಗೊಂಡ ಮನೆಗಳಿಗೆ ಮಾಜಿ ಸಂಸದ ಕೆ. ಜಯಪ್ರಕಾಶ್ ಹೆಗ್ಡೆ ಭೇಟಿ
    • ಜೆಸಿಐ ಶಿರೂರು ಘಟಕಕ್ಕೆ ಜೆಎಸಿ ಗೋಲ್ಡನ್ ಪ್ರೆಸಿಡೆಂಟ್ ಪ್ರಶಸ್ತಿ
    • ಕೋಟ ಸಹಕಾರಿ ವ್ಯವಸಾಯಕ ಸಂಘದ ಸಂಯೋಜನೆಯಲ್ಲಿ ಪಂಚವರ್ಣದ ಹಸಿರು ಹೆಜ್ಜೆ ಆಯೋಜನೆ
    • ಅರೆಶಿರೂರು ಪ್ರೌಢಶಾಲೆಯ ವಿದ್ಯಾರ್ಥಿ ಸರಕಾರ ಉದ್ಘಾಟನೆ ಮತ್ತು ಶ್ರೀ ದೇವಳದಿಂದ ನೀಡಿದ ವಿವಿಧ ಸವಲತ್ತುಗಳ ವಿತರಣೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.