ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಕರ್ನಾಟಕ ಸರಕಾರ, ಶಾಲಾ ಶಿಕ್ಷಣ ಇಲಾಖೆ ಮತ್ತು ಸಮಗ್ರ ಶಿಕ್ಷಣ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳ ಕಛೇರಿ, ಕ್ಷೇತ್ರ ಸಂಪನ್ಮೂಲ ಕೇಂದ್ರ ಕುಂದಾಪುರ ಇವರ ಆಶ್ರಯದಲ್ಲಿ ಎಸ್.ವಿ. ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಗಂಗೊಳ್ಳಿ ಇವರ ಸಹಯೋಗದೊಂದಿಗೆ 2024-25ನೇ ಸಾಲಿನ ಗಂಗೊಳ್ಳಿ ಕ್ಲಸ್ಟರ್ ಮಟ್ಟದ ’ಕಲಿಕಾ ಹಬ್ಬ’ಗಂಗೊಳ್ಳಿಯ ಎಸ್.ವಿ. ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ಜರಗಿತು.
ಜಿ.ಎಸ್.ವಿ.ಎಸ್.ಅಸೋಸಿಯೇಶನ್ ಅಧ್ಯಕ್ಷ ಡಾ. ಕಾಶೀನಾಥ ಪೈ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು. ಶಾಲೆಯ ಮುಖ್ಯೋಪಾಧ್ಯಾಯ ಜಿ. ವಿಶ್ವನಾಥ ಭಟ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿದ್ದ ಬಿಆರ್‌ಪಿ ಸಂತೋಷ ಕುಮಾರ್ ಶೆಟ್ಟಿ, ಸಿಆರ್‌ಪಿ ಪ್ರದೀಪ್ ಕುಮಾರ್ ಶೆಟ್ಟಿ, ಕುಂದಾಪುರ ಸಿಆರ್‌ಪಿ ಉಮೈ ಸಲ್ಮಾ ಮತ್ತು ಬಿಐಇಆರ್‌ಟಿ ಶಂಕರ ಕುಲಾಲ್ ಶುಭಾಶಂಸನೆಗೈದರು.
ಕೊಂಚಾಡಿ ರಾಧಾ ಶೆಣೈ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಭಾರ ಮುಖ್ಯಶಿಕ್ಷಕಿ ಯಶೋಧಾ, ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ರಥಬೀದಿ ಮುಖ್ಯಶಿಕ್ಷಕಿ ಚಂದ್ರಕಲಾ ತಾಂಡೇಲ, ವಿವಿಧ ಶಾಲೆಗಳ ಶಿಕ್ಷಕ, ಶಿಕ್ಷಕಿಯರು ಮೊದಲಾದವರು ಉಪಸ್ಥಿತರಿದ್ದರು.
ಗೌರವ ಶಿಕ್ಷಕಿ ಮಾಲಾಶ್ರೀ ಖಾರ್ವಿ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು.















