Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ವೈದ್ಯಾಧಿಕಾರಿಗಳಿಗೆ ತಾಯಿ ಹಾಗೂ ಮಕ್ಕಳ ಆರೋಗ್ಯ ನಿರ್ವಹಣೆ ತರಬೇತಿ ಕಾರ್ಯಗಾರ
    ಊರ್ಮನೆ ಸಮಾಚಾರ

    ವೈದ್ಯಾಧಿಕಾರಿಗಳಿಗೆ ತಾಯಿ ಹಾಗೂ ಮಕ್ಕಳ ಆರೋಗ್ಯ ನಿರ್ವಹಣೆ ತರಬೇತಿ ಕಾರ್ಯಗಾರ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಆರೋಗ್ಯ ಅಭಿಯಾನ, ಉಡುಪಿ ಜಿಲ್ಲೆ ಹಾಗೂ ಸಮುದಾಯ ವೈದ್ಯಕೀಯ ವಿಭಾಗ, ಕಸ್ತೂರ್ಬಾ ಮೆಡಿಕಲ್ ಕಾಲೇಜ್, ಮಾಹೆ ಮಣಿಪಾಲ ಇವರ ಸಹಯೋಗದೊಂದಿಗೆ ಪ್ರಸೂತಿ ತಜ್ಞರಿಗೆ ಹಾಗೂ ವೈದ್ಯಾಧಿಕಾರಿಗಳಿಗೆ ಸಂತಾನೋತ್ಪತ್ತಿ ಮತ್ತು ಮಕ್ಕಳ ಆರೋಗ್ಯದ ಸಮಗ್ರ ಅಧ್ಯಯನದ ಕುರಿತು ಒಂದು ದಿನದ ಕಾರ್ಯಗಾರವು ಇಂದು ನಗರದ ಮಣಿಪಾಲ ಕೆ.ಎಂ.ಸಿ.ಯ ಡಾ. ಟಿ.ಎಂ.ಎ. ಪೈ ಆಡಿಟೋರಿಯಂನಲ್ಲಿ ನಡೆಯಿತು.

    Click Here

    Call us

    Click Here

    ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಉದ್ಘಾಟಿಸಿ ಮಾತನಾಡಿ, ಜಿಲ್ಲೆಯಲ್ಲಿ ತಾಯಿ ಹಾಗೂ ಮಕ್ಕಳ ಸಾವುಗಳು ಅತ್ಯಲ್ಪವಿದ್ದು, ಪ್ರತೀ ತಾಯಿ ಹಾಗೂ ಮಗುವಿನ ಸಾವುಗಳನ್ನು ತಡೆಯಲು ಸರ್ವ ಪ್ರಯತ್ನಗಳನ್ನು ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿಗಳು ಮಾಡಬೇಕು. ಜಿಲ್ಲೆಯಲ್ಲಿ ಹೆರಿಗೆ ಸಮಯದಲ್ಲಿ ಸ್ವಾಭಾವಿಕವಾಗಿ ಆಗುವ ರೀತಿ ಒತ್ತು ನೀಡಬೇಕು. ಒಂದೊಮ್ಮೆ ಅನಿವಾರ್ಯ ತುರ್ತು ಸಂದರ್ಭದಲ್ಲಿ ಮಾತ್ರ ಸಿಜೇರಿಯನ್ ಮಾಡುವ ಮೂಲಕ ಡೆಲಿವರಿ ಮಾಡಿಸಬೇಕು ಎಂದರು.

     ಹದಿಹರೆಯದ ಯುವ ಹೆಣ್ಣು ಮಕ್ಕಳಿಗೆ ಪೌಷ್ಠಿಕ ಆಹಾರ ಸೇವನೆ ಸೇರಿದಂತೆ ಸದೃಢ ಆರೋಗ್ಯ ಹೊಂದಲು ತೆಗೆದುಕೊಳ್ಳಬೇಕಾದ ಮಾರ್ಗೋಪಾಯಗಳನ್ನು ಸಹ ಅವರುಗಳಿಗೆ ಮಾಹಿತಿ ನೀಡಬೇಕು ಎಂದ ಅವರು, ಹೆರಿಗೆಗೂ ಮುನ್ನ ಹೆಣ್ಣು ಮಕ್ಕಳಿಗೆ ಆಗಿಂದಾಗ್ಗೆ ಆರೋಗ್ಯ ತಪಾಸಣೆಗಳನ್ನು ನಿಯಮಿತವಾಗಿ ಮಾಡುವುದರೊಂದಿಗೆ ಆರೋಗ್ಯ ಸುಧಾರಣೆಗೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆಯೂ ತಿಳಿಸಬೇಕು ಎಂದರು.

    ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಣಾಧಿಕಾರಿ ಪ್ರತೀಕ್ ಬಾಯಲ್, ಉಡುಪಿ ಜಿಲ್ಲೆಯ ಆರೋಗ್ಯ ವ್ಯವಸ್ಥೆಗಳ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿ, ಪ್ರತೀ ಜಿಲ್ಲೆಯಲ್ಲಿ ನಡೆಯುತ್ತಿರುವ ಸಿಸೇರಿಯನ್ ಡೆಲಿವರಿಗಳ ಬಗ್ಗೆ ವೈಜ್ಞಾನಿಕ ಅಧ್ಯಯನ ನಡೆಸಿ ನೈಜ ಅಗತ್ಯಗಳ ಬಗ್ಗೆ ಹೆಚ್ಚು ತಿಳುವಳಿಕೆ ನೀಡಬೇಕು ಎಂದರು.

    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಾಹೆಯ ಆರೋಗ್ಯ ವಿಜ್ಞಾನ ವಿಭಾಗದ ಸಹ ಉಪ ಕುಲಪತಿ ಡಾ. ಶರತ್ ಕೆ. ರಾವ್ ಮಾತನಾಡಿ, ಜಿಲ್ಲೆಯಲ್ಲಿ ಕಸ್ತೂರ್ಬಾ ಸಮೂಹ ಆಸ್ಪತ್ರೆಗಳು ಹಾಗೂ ಸಂಸ್ಥೆಯು ಗ್ರಾಮೀಣ ಆರೋಗ್ಯ ಕೇಂದ್ರಗಳ ಮೂಲಕ ತಾಯಿ ಮಕ್ಕಳ ಮರಣ ಪ್ರಮಾಣ ತಡೆಯಲು ನೀಡುತ್ತಿರುವ ನಿರಂತರ ಸಹಕಾರಗಳ ಬಗ್ಗೆ ವಿವರಿಸಿದರು.

    Click here

    Click here

    Click here

    Call us

    Call us

     ಕಾರ್ಯಕ್ರಮದಲ್ಲಿ ಪ್ರಭಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗರತ್ನ, ಮಣಿಪಾಲ ಕೆ.ಎಂ.ಸಿ. ಡೀನ್ ಡಾ. ಪದ್ಮರಾಜ್ ಹೆಗ್ಡೆ, ಕರ್ನಾಟಕ ವೈದ್ಯಕೀಯ ಪರಿಷತ್ತಿನ ವೀಕ್ಷಕ ಡಾ. ಪ್ರೇಮಾನಂದ, ಕಸ್ತೂರ್ಬಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅವಿನಾಶ್ ಶೆಟ್ಟಿ, ಕೆ.ಎಂ.ಸಿ. ಮಣಿಪಾಲದ ಸಮುದಾಯ ವೈದ್ಯಕೀಯ ವಿಭಾಗದ ಮುಖ್ಯಸ್ಥ ಡಾ. ಅಶ್ವಿನಿ ಕುಮಾರ್, ತಜ್ಞ ವೈದ್ಯರು, ಖಾಸಗಿ, ಸರಕಾರಿ ವೈದ್ಯರುಗಳು, ಕಾರ್ಯಕ್ರಮ ಅನುಷ್ಠಾನಾಧಿಕಾರಿಗಳು, ತಾಲೂಕು ಆರೋಗ್ಯ ಅಧಿಕಾರಿಗಳು,  ಕೆ.ಎಂ.ಸಿ. ಮಣಿಪಾಲದ ಸಿಬ್ಬಂದಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

    ಜಿಲ್ಲಾ ಸಂತಾನೋತ್ಪತ್ತಿ ಮತ್ತು ಮಕ್ಕಳ ಆರೋಗ್ಯ ಅಧಿಕಾರಿ ಡಾ. ಜ್ಯೋತ್ಸಾನ ಬಿ. ಕೆ ಸ್ವಾಗತಿಸಿ, ಡಾ. ರಕ್ಷಿತಾ ಆರ್. ಶೆಣೈ ನಿರೂಪಿಸಿ, ಸಹ ಪ್ರಾಧ್ಯಾಪಕಿ ಡಾ. ಈಶ್ವರೀ ಕೆ. ವಂದಿಸಿದರು.

    ಈ ಕಾರ್ಯಕ್ರಮದಲ್ಲಿ ಕಸ್ತೂರ್ಬಾ ಆಸ್ಪತ್ರೆಯ 10 ಜನ ತಜ್ಞ ವೈದ್ಯರು ಹೆರಿಗೆ ಸಮಯದಲ್ಲಿ ಮಹಿಳೆ ಹಾಗೂ ಮಗುವಿನ ಆರೋಗ್ಯದಲ್ಲಾಗಬಹುದಾದ ಕ್ಲಿಷ್ಟಕರ ಸಂದರ್ಭಗಳ ನಿರ್ವಹಣೆ ಹಾಗೂ ಅವರ ಆರೋಗ್ಯ ರಕ್ಷಣೆ, ಸುಧಾರಣೆ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    56ನೇ ರೈತ ಪುರಸ್ಕಾರಕ್ಕೆ ಶೇಖರ್ ಪೂಜಾರಿ ಗುಂಡ್ಮಿ ಆಯ್ಕೆ

    20/08/2026

    ನಮ್ಮಗೆ ಸರಕಾರದ ಪ್ರೋತ್ಸಾಹಧನ ಬೇಡ ಕನಿಷ್ಟ ದಿನಗೂಲಿ ನೀಡಿ: ಹೈನುಗಾರರ ಬೇಡಿಕೆ

    20/08/2026

    ಅಗಸ್ಟ್ 23ರಂದು ಬೈಂದೂರಿನಲ್ಲಿ ʼಗಮ್ಮತ್ತ್ʼ ಕಾರ್ಯಕ್ರಮ. ದಿನವಿಡಿ ಹತ್ತಾರು ವಿಶೇಷತೆಗಳು

    20/08/2026
    Leave A Reply Cancel Reply

    eight + 3 =

    Call us

    Click Here

    Call us

    Call us

    Call us
    Highest Viewed Recently
    • 56ನೇ ರೈತ ಪುರಸ್ಕಾರಕ್ಕೆ ಶೇಖರ್ ಪೂಜಾರಿ ಗುಂಡ್ಮಿ ಆಯ್ಕೆ
    • ನಮ್ಮಗೆ ಸರಕಾರದ ಪ್ರೋತ್ಸಾಹಧನ ಬೇಡ ಕನಿಷ್ಟ ದಿನಗೂಲಿ ನೀಡಿ: ಹೈನುಗಾರರ ಬೇಡಿಕೆ
    • ಅಗಸ್ಟ್ 23ರಂದು ಬೈಂದೂರಿನಲ್ಲಿ ʼಗಮ್ಮತ್ತ್ʼ ಕಾರ್ಯಕ್ರಮ. ದಿನವಿಡಿ ಹತ್ತಾರು ವಿಶೇಷತೆಗಳು
    • ಸಾಸ್ತಾನದಿಂದ ಶ್ರೀ ಕ್ಷೇತ್ರ ತಿರುಪತಿಗೆ 16ನೇ ವರ್ಷದ ಬೃಹತ್ ಪಾದಯಾತ್ರೆ
    • ಮರವಂತೆ: ಅರಬ್ಬಿ ಸಮುದ್ರದಲ್ಲಿ ದೋಣಿ ಆಯತಪ್ಪಿ ಬಿದ್ದು ಮೀನುಗಾರ ಸಾವು

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.