ಮೋಜಿಗಾಗಿ ಪ್ರಾರಂಭಿಸಿದ ದುಶ್ಚಟಗಳು ಜೀವವನ್ನೇ ಬಲಿ ತೆಗೆದುಕೊಳ್ಳುತ್ತಿದೆ: ಬಿ. ರಾಘವೇಂದ್ರ ಪೈ

Click Here

Call us

Call us

Call us

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಗಂಗೊಳ್ಳಿ:
ಮಕ್ಕಳು ಎಳವೆಯಲ್ಲೇ ದುರಾಸೆಗೆ ಬಲಿಯಾಗಿ ದುಶ್ಚಟಗಳ ದಾಸರಾಗುತ್ತಿದ್ದಾರೆ. ಮೋಜಿಗಾಗಿ ಪ್ರಾರಂಭಿಸಿದ ದುಶ್ಚಟಗಳು ಜೀವವನ್ನೇ ಬಲಿ ತೆಗೆದುಕೊಳ್ಳುತ್ತಿದೆ. ವಿದ್ಯಾವಂತರೇ ಅನೇಕ ಕಾರಣಗಳಿಂದ ದುಶ್ಚಟಗಳಿಗೆ ಬಲಿಯಾಗುತ್ತಿದ್ದು, ಪೋಷಕರು ಮಕ್ಕಳ ಮೇಲಿಟ್ಟಿರುವ ಅತಿಯಾದ ಪ್ರೀತಿ, ವಿಶ್ವಾಸ ಹಾಗೂ ನಂಬಿಕೆಯನ್ನು ಯುವ ಜನತೆ ದುರುಪಯೋಗಪಡಿಸಿಕೊಳ್ಳುತ್ತಿದೆ. ಮಾದಕ ವಸ್ತುಗಳ ಸೇವನೆಗೆ ಬಲಿಯಾಗದಂತೆ ನೋಡಿಕೊಳ್ಳುವುದು ಮತ್ತು ಬಲಿಯಾದವರನ್ನು ಅದರ ದುಷ್ಪರಿಣಾಮಗಳಿಂದ ಮುಕ್ತಿಗೊಳಿಸುವ ಕಾರ್ಯ ನಡೆಯಬೇಕಿದೆ ಎಂದು ಬೈಂದೂರು ತಾಲೂಕು ಜನಜಾಜಗೃತಿ ವೇದಿಕೆ ಸದಸ್ಯ ಬಿ. ರಾಘವೇಂದ್ರ ಪೈ ಹೇಳಿದರು.

Call us

Click Here

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಬೈಂದೂರು ತಾಲೂಕು ತ್ರಾಸಿ ವಲಯ, ಜನಜಾಗೃತಿ ವೇದಿಕೆ ತ್ರಾಸಿ ವಲಯ ಮತ್ತು ಎಸ್.ವಿ. ಆಂಗ್ಲ ಮಾಧ್ಯಮ ಶಾಲೆ ಗಂಗೊಳ್ಳಿ ಇವರ ಜಂಟಿ ಆಶ್ರಯದಲ್ಲಿ ಸ.ವಿ. ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ಜರಗಿದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಎಸ್.ವಿ. ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕ ರಾಘವೇಂದ್ರ ಶೇರುಗಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿದ್ದ ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರದ ಪ್ಯಾರಾ ಲೀಗಲ್ ಸ್ವಯಂಸೇವಕಿ ಫಿಲೋಮಿನಾ ಫೆರ್ನಾಂಡಿಸ್ ಅವರು, ಪೋಸ್ಕೋ ಕಾಯಿದೆ ಕುರಿತು ಕಾನೂನು ಮಾಹಿತಿ ಮತ್ತು ದುಶ್ಚಟಗಳಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಮಾಹಿತಿ ನೀಡಿದರು.

ಯೋಜನೆಯ ತ್ರಾಸಿ ವಲಯ ಮೇಲ್ವಿಚಾರಕ ಚಂದ್ರು ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು.

Leave a Reply