ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಗಂಗೊಳ್ಳಿಯ ಶ್ರೀ ಇಂದುಧರ ದೇವಸ್ಥಾನದಲ್ಲಿ 80ನೇ ಮಹಾಶಿವರಾತ್ರಿ ಮಹೋತ್ಸವದ ಅಂಗವಾಗಿ ಅಂತರ್ ಜಿಲ್ಲಾ ಮಟ್ಟದ ಕುಣಿತ ಭಜನಾ ಸ್ಪರ್ಧೆ ಗಂಗೊಳ್ಳಿಯ ಎಸ್.ವಿ. ಹಿರಿಯ ಪ್ರಾಥಮಿಕ ಶಾಲೆಯ ವಠಾರದಲ್ಲಿ ನಡೆಯಿತು.
ಸ್ಪರ್ಧೆಯ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಗಂಗೊಳ್ಳಿ ಪರ್ಶಿನ್ ಮೀನುಗಾರರ ಸ್ವಸಹಾಯ ಸಂಘದ ಅಧ್ಯಕ್ಷ ಲಕ್ಷ್ಮೀನಾರಾಯಣ ಮಡಿವಾಳ ವಹಿಸಿದ್ದರು. ಧಾರ್ಮಿಕ ಮುಖಂಡರಾದ ಬಿ. ಸದಾನಂದ ಶೆಣೈ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಜಾನಪದ ಪರಿ?ತ್ ಅಧ್ಯಕ್ಷ ಡಾ. ಗಣೇಶ್ ಗಂಗೊಳ್ಳಿ, ಜಾನಪದ ಗಾಯಕ, ಕಲಾವಿದ ಡಾ. ಸಚಿನ್ ಸಾಲಿಯಾನ್ ಮತ್ತು ಗಾಯಕರು, ತಬಲಾ ವಾದಕ ಬಿ.ಪ್ರಕಾಶ್ ಶೆಣೈ ಗಂಗೊಳ್ಳಿ ಅವರನ್ನು ಸನ್ಮಾನಿಸಲಾಯಿತು.
ಉಪವಲಯ ಅರಣ್ಯಾಧಿಕಾರಿ ಕೆ. ಸದಾಶಿವ ಮಾವಿನಕಟ್ಟೆ, ಮತ್ಸ್ಯೋದ್ಯಮಿ ಜಿ.ಟಿ.ಮಂಜುನಾಥ ಗಂಗೊಳ್ಳಿ, ಗಂಗೊಳ್ಳಿ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಗೋಪಾಲ ಬಿಲ್ಲವ, ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಜಯಂತಿ ಖಾರ್ವಿ, ದೇವಸ್ಥಾನದ ಅಧ್ಯಕ್ಷ ಗುರುರಾಜ್ ಗಂಗೊಳ್ಳಿ, ಕಾರ್ಯದರ್ಶಿ ನರಸಿಂಹ ಎಂ.ಜಿ., ಉಪಸ್ಥಿತರಿದ್ದರು.
ಅಶೋಕ್ ಎನ್. ಡಿ. ಸ್ವಾಗತಿಸಿದರು. ವರದರಾಜ್ ವಂದಿಸಿದರು. ಸುಂದರ ಜಿ. ಗಂಗೊಳ್ಳಿ ಕಾರ್ಯಕ್ರಮ ನಿರ್ವಹಿಸಿದರು.