Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬೈಂದೂರು ತಾಲೂಕಿನಲ್ಲಿ ಗ್ಯಾರಂಟಿ ಯೋಜನೆಗೆ ಈ ತನಕ 158.50 ಕೋಟಿ ವಿನಿಯೋಗ: ಮೋಹನ್ ಪೂಜಾರಿ
    ಊರ್ಮನೆ ಸಮಾಚಾರ

    ಬೈಂದೂರು ತಾಲೂಕಿನಲ್ಲಿ ಗ್ಯಾರಂಟಿ ಯೋಜನೆಗೆ ಈ ತನಕ 158.50 ಕೋಟಿ ವಿನಿಯೋಗ: ಮೋಹನ್ ಪೂಜಾರಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಬೈಂದೂರು:
    ರಾಜ್ಯ ಸರ್ಕಾರ ಆರ್ಥಿಕವಾಗಿ ಹಿಂದುಳಿದಿರುವರಿಗೆ ಆರ್ಥಿಕ ಶಕ್ತಿ ತುಂಬುವ ನಿಟ್ಟಿನಲ್ಲಿ ಪಂಚ ಗ್ಯಾರಂಟಿ ಯೋಜನೆಯನ್ನು ಜಾರಿಗೆ ತಂದಿದ್ದು, ಇದರ ಅನುಷ್ಠಾನಕ್ಕಾಗಿ ಬೈಂದೂರು ತಾಲೂಕಿನಲ್ಲಿ ಇದುವರೆಗೆ ಸುಮಾರು  158.50 ಕೋಟಿ ರೂ. ವೆಚ್ಚಮಾಡಿದೆ ಎಂದು ಬೈಂದೂರು ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಮೋಹನ್ ಪೂಜಾರಿ ಉಪ್ಪುಂದ ಹೇಳಿದರು.

    Click Here

    Call us

    Click Here

    ಇಲ್ಲಿನ ತಾಲೂಕು ಪಂಚಾಯಿತಿ ಸಭಾಭವನದಲ್ಲಿ ನಡೆದ ಗ್ಯಾರಂಟಿ ಅನುಷ್ಠಾನ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.

    ಗೃಹಲಕ್ಷ್ಮೀ ಯೋಜನೆಯಿಂದ 27,556 ಫಲಾನುಭವಿಗಳ ಖಾತೆಗೆ ರೂ. 80.21 ಕೋಟಿ ಜಮಾ ಆಗಿದೆ. ತಾಂತ್ರಿಕ ಕಾರಣದಿಂದಾಗಿ 479 ಫಲಾನುಭವಿಗಳಿಗೆ ಬಾಕಿಯಿದೆ.  ಗೃಹ ಜ್ಯೋತಿ ಯೋಜನೆಯಿಂದ ಬೈಂದೂರು ಮೆಸ್ಕಾಂ ಉಪಕೇಂದ್ರ ವ್ಯಾಪ್ತಿಯ 27,748 ಕುಟುಂಬಗಳಿಗೆ 31.19 ಕೋಟಿ ರೂ., ತಲ್ಲೂರು ಮೆಸ್ಕಾಂ ಉಪ ಕೇಂದ್ರ ವ್ಯಾಪ್ತಿಯ 1935 ಕುಟುಂಬಗಳಿಗೆ 1.98 ಕೋಟಿ ರೂ. ಸೇರಿದಂತೆ ಸುಮಾರು 33.18 ಕೋಟಿ ರೂ. ವೆಚ್ಚವಾಗಿದೆ. ಅನ್ನಭಾಗ್ಯ ಯೋಜನೆಯಡಿ 25,182 ಪಡಿತರ ಚೀಟಿಗಳಿಗೆ 1,89,26,610ರೂ. ನೇರವಾಗಿ ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗಿದೆ. ಯುವ ನಿಯೋಜನೆಯಡಿ 484 ಫಲಾನುಭವಿಗಳಿಗೆ 43ಲಕ್ಷ ರೂ. ಜಮಾ ಆಗಿದೆ. ಶಕ್ತಿ ಯೋಜನೆಯಡಿ ಇದುವರೆಗೆ 1.22 ಕೋಟಿ ಮಹಿಳೆಯರು ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸಿದ್ದು, 42.77 ಕೋಟಿ ರೂ. ರಿಯಾಯಿತಿ ಪಡೆದಿದ್ದಾರೆ ಎಂದರು.

    ಲೋಡ್ ಶೆಡ್ಡಿಂಗ್ ಕಡಿಮೆಗೊಳಿಸಿ:
    ಮಾರ್ಚ್, ಏಪ್ರಿಲ್ ತಿಂಗಳಿನಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಇರವುದರಿಂದ ಮಕ್ಕಳ ಅಧ್ಯಯನಕ್ಕೆ ತೊಂದರೆಯಾಗದಂತೆ ಅನಕೃತ ಲೋಡ್ ಶೆಡ್ಡಿಂಗ್‌ಗೆ ಕಡಿವಾಣ ಹಾಕಬೇಕು ಎಂದು ಮೆಸ್ಕಾಂ ಇಲಾಖಾಕಾರಿಗಳಿಗೆ ಸೂಚನೆ ನೀಡಿದರು.  

    ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಯ ಸದಸ್ಯ ಅರವಿಂದ ಪೂಜಾರಿ ಅವರು ಮಾತನಾಡಿ ತಾಲೂಕಿನ ವಿವಿಧ ಭಾಗಗಳಿಗೆ ಬಸ್‌ ಸೌಲಭ್ಯವಿಲ್ಲದೇ ಮಹಿಳೆಯರು ಉಚಿತ ಬಸ್‌ ಸೇವೆಯಿಂದ ವಂಚಿತರಾಗಿದ್ದಾರೆ. ವಿದ್ಯಾರ್ಥಿಗಳಿಗೆ ಕಾಲೇಜಿಗೆ ತೆರಳುವುದು ಸಮಸ್ಯೆಯಾಗುತ್ತಿದೆ ಎಂದರು. ತಾಲೂಕು ಕೇಂದ್ರದ ತುತ್ತತುದಿಯಲ್ಲಿರುವ ಹಳ್ಳಿಹೊಳೆ ಭಾಗದ ಜನರಿಗೆ ತಾಲೂಕು ಕೇಂದ್ರಕ್ಕೆ ಬರಲು ಕೆಎಸ್‌ರ್‌ಡಿಸಿ ಬಸ್ ವ್ಯವಸ್ಥೆಯಿಲ್ಲದ ಕಾರಣ ತೊಂದರೆಗೀಡಾಗಿದ್ದಾರೆ, ಹೀಗಾಗಿ ಈ ಮಾರ್ಗದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಸಂಚಾರಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಗ್ಯಾರಂಟಿ ಸಮಿತಿಯ ಸದಸ್ಯರೊಬ್ಬರು ವಿನಂತಿಸಿದರು, ಅಲ್ಲದೇ ಕೊಲ್ಲೂರು ಮಾರ್ಗವಾಗಿ ಕೆಎಸ್‌ಆರ್‌ಟಿಸಿ ಬಸ್ ಸಂಚಾರಕ್ಕೆ ಸಂಬಂಧಿಸಿದಂತೆ ಖಾಸಗಿ ಬಸ್ ಮಾಲಕರು ಕೋರ್ಟ್‌ನಲ್ಲಿ ತಡೆಯಾಜ್ಞೆ ತಂದಿದ್ದಾರೆ, ಅದನ್ನು ತೆರವುಗೊಳಿಸಲು ಇಲಾಖಾಕಾರಿಗಳು ಪ್ರಯತ್ನಿಸಬೇಕು ಎಂದರು.

    Click here

    Click here

    Click here

    Click Here

    Call us

    Call us

    ಇದಕ್ಕೆ ಧ್ವನಿಗೂಡಿಸಿದ ಅಧ್ಯಕ್ಷರು, ಬೈಂದೂರು ತಾಲೂಕು ವ್ಯಾಪ್ತಿಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಸಂಚಾರದ ಫರ್ಮಿಟ್ ಸಂಖ್ಯೆಗಳ ಬಗ್ಗೆ, ಹಾಗೂ ಪ್ರಸ್ತುತ ಸಂಚರಿಸುತ್ತಿರುವ ಬಸ್‌ಗಳ ಬಗ್ಗೆ ಸಮಗ್ರ ಮಾಹಿತಿಯನ್ನು ಮುಂದಿನ ಸಭೆಯಲ್ಲಿ ನೀಡಬೇಕು . ಅಲ್ಲದೇ ಗ್ರಾಮೀಣ ಭಾಗದಲ್ಲಿ ಸಂಚರಿಸುತ್ತಿರುವ ಬಸ್‌ಗಳನ್ನು ಯಾವುದೇ ಕಾರಣಕ್ಕೂ ಸ್ಥಗಿತಗೊಳಿಸದಂತೆ ಕ್ರಮ ಕೈಗೊಳ್ಳಬೇಕು ಎಂದು ಕೆಎಸ್‌ಆರ್‌ಟಿಸಿ ಅಕಾರಿಗಳಿಗೆ ಸೂಚನೆ ನೀಡಿದರು. ತಡೆಯಾಜ್ಞೆವಿರುವ ಫರ್ಮಿಟ್‌ಗಳ ಬಗ್ಗೆ ತೆರವುಗೊಳಿಸುವ ಸಂಬಂಧ ಮೇಲಾಕಾರಿಗಳೊಂದಿಗೆ ಚರ್ಚಿಸಲಾಗುವುದು ಎಂದರು. 

    ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಕಾರಿ ಡಾ. ರವಿಕುಮಾರ್ ಹುಕ್ಕೇರಿ, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಸದಸ್ಯರಾದ ಪ್ರಭಾಕರ ನಾಯ್ಕ, ಮಾಲತಿ ಶಿವಾನಂದ, ರಾಮ ಪೂಜಾರಿ, ಅನೀಶ್ ಪೂಜಾರಿ, ರಾಘವೇಂದ್ರ ಬಿಲ್ಲವ, ದೇವದಾಸ್ ವಿ.ಜೆ., ಬಾಬು ದೇವಾಡಿಗ, ರಾಮಚಂದ್ರ ಖಾರ್ವಿ, ಮುಕ್ರಿ ಮೊಹಮ್ಮದ್ ಅಲ್ತಾಫ್ ಉಪಸ್ಥಿತರಿದ್ದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    11 − 4 =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ
    • ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ
    • ಸ್ಥಳೀಯ ಸಂಸ್ಥೆಗಳು ಘನತ್ಯಾಜ್ಯ ವಸ್ತುಗಳ ವಿಲೇವಾರಿಯನ್ನು ವೈಜ್ಞಾನಿಕ ರೀತಿಯಲ್ಲಿ ಕೈಗೊಳ್ಳಿ: ಜಿಲ್ಲಾಧಿಕಾರಿ ಸೂಚನೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.