ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕರ್ನಾಟಕ ಜಾನಪದ ಅಕಾಡೆಮಿಯ 2024ನೇ ಸಾಲಿನ ವಾರ್ಷಿಕ ಗೌರವ ಪ್ರಶಸ್ತಿಗೆ ಕಲಾವಿದ ಎನ್. ಗಣೇಶ್ ಗಂಗೊಳ್ಳಿ ಅವರನ್ನು ಆಯ್ಕೆ ಮಾಡಲಾಗಿದೆ.
ತಾಲೂಕಿನ ಗಂಗೊಳ್ಳಿ ನಿವಾಸಿಯಾಗಿರುವ ಗಣೇಶ್ ಗಂಗೊಳ್ಳಿ ಅವರು ಖ್ಯಾತ ಸಂಗೀತ ಕಲಾವಿದರಾಗಿ, ಆಕಾಶವಾಣಿ ಕಲಾವಿದರಾಗಿ ತಮ್ಮ ಸುಶ್ರಾವ್ಯ ಕಂಠದ ಮೂಲಕ ನೂರಾರು ಜಾನಪದ ಗೀತೆಗಳಿಗೆ ಧ್ವನಿಯಾಗಿದ್ದಾರೆ. ಜಾನಪದ ಕ್ಷೇತ್ರದಲ್ಲಿ ಅವರ ಸೇವೆಯನ್ನು ಗುರುತಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು, ಬೀದರ್ ಜಿಲ್ಲೆಯ ಪೂಜ್ಯ ಶ್ರೀ ಚನ್ನಬಸವ ಪಟ್ಟದೇವರು ರಂಗಮಂದಿರದಲ್ಲಿ ಮೇ.15 ರಂದು 11 ಗಂಟೆಗೆ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.
ಪ್ರಶಸ್ತಿಯು 25,000 ಮೊತ್ತ, ಶಾಲು, ಹಾರ, ಫಲಕ, ಫಲತಾಂಬೂಲ ಒಳಗೊಂಡಿರುತ್ತದೆ.










