Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ರಾಜ್ಯ ಬಜೆಟ್‌ನಲ್ಲಿ ಕರಾವಳಿಗೆ ದೊರಕಿದ್ದೇನು? ಇಲ್ಲಿದೆ ಮಾಹಿತಿ
    ಊರ್ಮನೆ ಸಮಾಚಾರ

    ರಾಜ್ಯ ಬಜೆಟ್‌ನಲ್ಲಿ ಕರಾವಳಿಗೆ ದೊರಕಿದ್ದೇನು? ಇಲ್ಲಿದೆ ಮಾಹಿತಿ

    Updated:07/03/2025No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಬೆಂಗಳೂರು:
    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಣಕಾಸು ಖಾತೆಯನ್ನು ಹೊಂದಿದ್ದು ಶುಕ್ರವಾರ 2025-26ನೇ ಸಾಲಿನ ರಾಜ್ಯ ಬಜೆಟ್ ಮಂಡಿಸಿದ್ದಾರೆ. ಬಜೆಟ್ ನಲ್ಲಿ ಕರಾವಳಿಗೆ ಘೋಷಿಸಿರುವ ಕೊಡುಗೆಗಳ ವಿವರ ಇಂತಿವೆ.

    Click Here

    Call us

    Click Here

    • ಆಳ ಸಮುದ್ರ ಮೀನುಗಾರಿಕೆಯನ್ನು ಪ್ರೋತ್ಸಾಹಿಸಲು ಪ್ರಸಕ್ತ ಇರುವ ಮೀನುಗಾರಿಕೆ ದೋಣಿಗಳ ಉದ್ದದ ಮಿತಿ ಸಡಿಲಿಕೆ.
    • ಕರಾವಳಿ ಜಿಲ್ಲೆಗಳಲ್ಲಿನ ಮೀನುಗಾರಿಕೆ ಕೊಂಡಿ ರಸ್ತೆಗಳನ್ನು ನಬಾರ್ಡ್ ಸಹಯೋಗದಲ್ಲಿ ಅಭಿವೃದ್ಧಿಗೆ 30 ಕೋಟಿ ರೂ.
    • ಮೋಟರೀಕೃತ ದೋಣಿಗಳಲ್ಲಿ 15 ವರ್ಷ ಕಾಲಾವಧಿ ಮೀರಿರುವ ಹಳೆಯ ಇಂಜಿನ್ ಗಳನ್ನು ಬದಲಾಯಿಸಿ, ಹೊಸ ಇಂಜಿನ್ ಖರೀದಿಸಲು ಶೇ.50ರಷ್ಟು ಒಂದು ಲಕ್ಷ ರೂ. ಮಿತಿಗೊಳಪಟ್ಟು ಸಹಾಯಧನ.
    • ಪ್ರತಿ ವರ್ಷಮುಂಗಾರು ಮಳೆಯ ಸಮಯ ಕರಾವಳಿ ತೀರದಲ್ಲಿ ಕಡಲ್ಕೊರೆತ ಸಂಭವಿಸುವುದನ್ನು ತಡೆಗಟ್ಟಲು ಈ ಕೆಳಕಂಡ ಕ್ರಮಗಳನ್ನು ಕೈಗೊಳ್ಳಲಾಗುವುದು: ಕಡಲ್ಕೊರೆತದ ಪರಿಣಾಮಗಳನ್ನು ಸಮಗ್ರವಾಗ ಎದುರಿಸಲು ಚೆನ್ನೈ ಐಐಟಿ ಸಿದ್ಧಪಡಿಸಿರುವ ಶೋರ್ಲೈನ್ ಮ್ಯಾನೇಜ್ ಮೆಂಟ್ ಪ್ಲಾನ್ (Shoreline Management Plan) ಅನ್ನು ಜಾರಿಗೊಳಿಸಲು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ಪ್ರತ್ಯೇಕವಾಗಿ ವಿಸ್ತೃತ ಯೋಜನಾ ವರದಿಗಳನ್ನು ಸಿದ್ಧಪಡಿಸಲಾಗುವುದು. ಈ ವರದಿಯಲ್ಲಿನ ಕಡಲ್ಕೊರೆತ ತಡೆಗಟ್ಟುವ ಕಾಮಗಾರಿಗಳನ್ನು ಹಂತ ಹಂತವಾಗಿ ಕೈಗೆತ್ತಿಕೊಳ್ಳಲಾಗದು. ಇದಕ್ಕಾಗಿ ರಾಷ್ಟ್ರೀಯ ವಿಪತ್ತು ಉಪಶಮನ ನಿಧಿಯಡಿ 200 ಕೋಟಿ ರೂ. ಖರ್ಚು ಮಾಡಲಾಗುವುದು.
    • ಮಂಗಳೂರಿನಲ್ಲಿ ಜಲಸಾರಿಗೆ ಸಂಗ್ರಹಾಲಯ ಮತ್ತು ಅನುಭವ ಕೇಂದ್ರವನ್ನು ಪಿಪಿಪಿ ಮಾದರಿಯಲ್ಲಿ ಸ್ಥಾಪನೆ.
    • ಕಾರ್ಕಳದಲ್ಲಿ ಪಿ.ಪಿ.ಪಿ. ಮಾದರಿಯಲ್ಲಿ ಜವಳಿ ಪಾರ್ಕ್ ಸ್ಥಾಪನೆ.
    • ಕಿಯೋನಿಕ್ಸ್ ವತಿಯಿಂದ ಮಂಗಳೂರಿನಲ್ಲಿ ಪ್ಲಗ್-ಅಂಡ್-ಪ್ಲೇ ಸೌಲಭ್ಯಗಳನ್ನೊಳಗೊಂಡ ಹೊಸ ಜಾಗತಿಕ ತಂತ್ರಜ್ಞಾನ ಕೇಂದ್ರ (GTC) ಸ್ಥಾಪನೆ.
    • ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕಡಲ ತೀರದ ಅಭಿವೃದ್ಧಿ ಹಾಗೂ ರಸ್ತೆಬದಿ ಸೌಲಭ್ಯಗಳನ್ನು (Highway Hubs) ಉನ್ನತೀಕರಿಸುವ ಮೂಲಕ ಶೈಕ್ಷಣಿಕ, ಆರೋಗ್ಯ, ಸಾಹಸ, ಪರಿಸರ, ಜಲಸಾರಿಗೆ ಹಾಗೂ ಕಡಲ ತೀರದ ಪ್ರವಾಸೋದ್ಯಮಗಳಿಗೆ ಲಭ್ಯವಿರುವ ಅವಕಾಶಗಳನ್ನು ಬಳಸಲು ಕ್ರಮ.
    • ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಹಾಸನ, ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭೂ ಕುಸಿತ ತಡೆಯಲು 200 ಕೋಟಿ ರೂ. ವೆಚ್ಚದಲ್ಲಿ ಕ್ರಮ.
    • ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಜಿಲ್ಲಾ ಕ್ರೀಡಾಂಗಣ ಅಭಿವೃದ್ಧಿಗೆ ತಲಾ 3 ಕೋಟಿ ರೂ. ನಂತೆ ಒಟ್ಟು 6 ಕೋಟಿ ರೂ. ಅನುದಾನ.
    • ಪುತ್ತೂರಿನಲ್ಲಿ ಹೊಸ ವೈದ್ಯಕೀಯ ಕಾಲೇಜನ್ನು ಸ್ಥಾಪನೆ. ಇದಕ್ಕಾಗಿ ಈಗಿರುವ 100 ಹಾಸಿಗೆ ಸಾಮರ್ಥ್ಯದ ತಾಲೂಕು ಆಸ್ಪತ್ರೆಯನ್ನು ಉನ್ನತೀಕರಿಸಲು ಕ್ರಮ. *ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯ ನವೀಕರಣ.
    • ಉಳ್ಳಾಲದಲ್ಲಿ ಅಲ್ಪಸಂಖ್ಯಾತರ ವಿದ್ಯಾರ್ಥಿನಿಯರಿಗಾಗಿ ವಸತಿ ಸಹಿತ ಪಿಯು ಕಾಲೇಜು ಸ್ಥಾಪನೆ.
    • ಮಂಗಳೂರಿನಲ್ಲಿರುವ ಮೀನುಗಾರಿಕೆ ಕಾಲೇಜಿಗೆ ಪ್ರಸಕ್ತ ನಿಗದಿಪಡಿಸಿರುವ ವಿದ್ಯಾರ್ಥಿಗಳ ಸಂಖ್ಯಾಬಲ ದ್ವಿಗುಣ.
    • ಪರಿಶಿಷ್ಟ ಜಾತಿ / ಪಂಗಡದ ಆಯ್ದ ಮೀನು ಮಾರಾಟಗಾರರಿಗೆ ನಾಲ್ಕು ಚಕ್ರ ವಾಹನ ಖರೀದಿಸಲು ಶೇ.50ರಷ್ಟು ಅಥವಾ ಗರಿಷ್ಠ 3 ಲಕ್ಷ ರೂ. ಆರ್ಥಿಕ ನೆರವು.
    • ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ‘ಮಲ್ಟಿ-ಲೆವೆಲ್ ಪಾರ್ಕಿಂಗ್’ ವ್ಯವಸ್ಥೆ ನಿರ್ಮಾಣ.
    • ಪಿಲಿಕುಳದಲ್ಲಿ ಭಾರತ್ ಸೌಟ್ಸ್ ಮತ್ತು ಗೈಡ್ಸ್ ಅಂತಾರಾಷ್ಟ್ರೀಯ ಯುವಕರ ತರಬೇತಿ ಕೇಂದ್ರದ ಅಭಿವೃದ್ಧಿಗಾಗಿ ಎರಡು ಕೋಟಿ ರೂ.
    • ಬೆಂಗಳೂರು, ಕಲಬುರಗಿ, ಮಂಗಳೂರು, ಮತ್ತು ಬೆಳಗಾವಿ ಕೆಜಿಟಿಟಿಐ ಕೇಂದ್ರಗಳಲ್ಲಿ 10 ಕೋಟಿ ರೂ. ವೆಚ್ಚದಲ್ಲಿ “Industry-4.0′ ಗೆ ಅನುಗುಣವಾಗಿ ಹೊಸ ತಂತ್ರಜ್ಞಾನ ಆಧಾರಿತ ಪಠ್ಯಕ್ರಮದ ಹೊಸ ಪ್ರಯೋಗಾಲಯ ಸ್ಥಾಪನೆ.
    • ಬಯಲುಸೀಮೆ, ಮಲೆನಾಡು ಹಾಗೂ ಕರಾವಳಿ ಪ್ರದೇಶಾಭಿವೃದ್ಧಿ ಮಂಡಳಿಗಳಿಗೆ ಒಟ್ಟಾರೆಯಾಗಿ 83 ಕೋಟಿ ರೂ. ಅನುದಾನ.
    • ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ವತಿಯಿಂದ ರಾಮನಗರ ಮತ್ತು ಉಳ್ಳಾಲಕ್ಕೆ 705 ಕೋಟಿ ರೂ. ವೆಚ್ಚದಲ್ಲಿ ಕುಡಿಯುವ ನೀರು ಯೋಜನೆ ಅನುಷ್ಠಾನ.
    • ಮಂಗಳೂರಿನಲ್ಲಿ ಅಂತರಾಷ್ಟ್ರೀಯ ಕ್ರೂಸ್, ವಾಟರ್ ಮೆಟ್ರೋ, ಕೋಸ್ಟಲ್ ಬರ್ತ್, ಉತ್ತರ ಕನ್ನಡ ಜಿಲ್ಲೆಯಲ್ಲಿ ಮಂಕಿ ಬಂದರು, ಹೊನ್ನಾವರದಲ್ಲಿ ಹಡಗು ನಿರ್ಮಾಣ ಕ್ಷೇತ್ರ ಹಾಗೂ ನದಿ ಕ್ರೂಸ್ ಪ್ರವಾಸೋದ್ಯಮ ಯೋಜನೆಗಳಿಗೆ ವಿಸ್ತೃತ ಯೋಜನೆ.
    • ವಾಹನ ಸಂಚಾರವನ್ನು ಮೇಲ್ವಿಚಾರಣೆ ಮಾಡಲು ಮತ್ತು ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳನ್ನು ಪತ್ತೆ ಹಚ್ಚಿ ನಿಯಂತ್ರಿಸಲು ದಕ್ಷಿಣ ಕನ್ನಡ, ದಾವಣಗೆರೆ, ಧಾರವಾಡ, ಕಲಬುರಗಿ, ಬೆಳಗಾವಿ, ಚಿತ್ರದುರ್ಗ, ಹಾವೇರಿ, ಹೊಸಪೇಟೆ, ಬಳ್ಳಾರಿ, ವಿಜಯಪುರ ಜಿಲ್ಲೆಗಳ ಒಟ್ಟು 60 ಸ್ಥಳಗಳಲ್ಲಿ 50 ಕೋಟಿ ರೂ. ವೆಚ್ಚದಲ್ಲಿ AI ಆಧಾರಿತ ವಿದ್ಯುನ್ಮಾನ ಕ್ಯಾಮರಾಗಳನ್ನು ಅಳವಡಿಕೆ.
    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕೊರಗ ಕಾಲೋನಿಯ 8 ಹೊಸ ಮನೆ ನಿರ್ಮಾಣಕ್ಕೆ ಒಂದು ಲಕ್ಷ ರೂಪಾಯಿ ಚೆಕ್ ವಿತರಣೆ

    20/12/2025

    ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಅಂಬಲಪಾಡಿ ನಾರಾಯಣಾಚಾರ್ಯ ಅವರಿಗೆ ಶ್ರದ್ಧಾಂಜಲಿ ಸಭೆ

    20/12/2025

    ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಿಂದ ದೇಶದ ಭದ್ರತೆಗೆ ಅಪಾಯ: ಕೆ. ವಿಕಾಸ್‌ ಹೆಗ್ಡೆ

    20/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಕೊರಗ ಕಾಲೋನಿಯ 8 ಹೊಸ ಮನೆ ನಿರ್ಮಾಣಕ್ಕೆ ಒಂದು ಲಕ್ಷ ರೂಪಾಯಿ ಚೆಕ್ ವಿತರಣೆ
    • ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಅಂಬಲಪಾಡಿ ನಾರಾಯಣಾಚಾರ್ಯ ಅವರಿಗೆ ಶ್ರದ್ಧಾಂಜಲಿ ಸಭೆ
    • ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಿಂದ ದೇಶದ ಭದ್ರತೆಗೆ ಅಪಾಯ: ಕೆ. ವಿಕಾಸ್‌ ಹೆಗ್ಡೆ
    • ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಪೋಕ್ಸೋ ಕಾಯ್ದೆಯ ಕಾನೂನು ಅರಿವು ಮೂಡಿಸುವ ಕಾರ್ಯಕ್ರಮ
    • ಕುಂದಾಪುರದ ಆರ್. ಎನ್. ಶೆಟ್ಟಿ ಪ.ಪೂ ಕಾಲೇಜಿನ ಬಹುಮಾನ ವಿತರಣೆ ಕಾರ್ಯಕ್ರಮ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.