ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಕಾಲೇಜಿನ ರೋಟರಾಕ್ಟ್ ಕ್ಲಬ್‌ನ ಆಶ್ರಯದಲ್ಲಿ ತಾಲೂಕಿನ ಆನಗಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅರಿವು ಮೂಡಿಸುವ ಕಾರ್ಯಕ್ರಮವನ್ನು ಆಯೋಜಿಸಲಾಯಿತು.
ರೋಟರಾಕ್ಟ್ ಕ್ಲಬ್‌ನ ಸ್ವಯಂಸೇವಕರು ಆರೋಗ್ಯಕರ ಆಹಾರ ಅಭ್ಯಾಸಗಳ ಮಹತ್ವ, ತಂತ್ರಜ್ಞಾನದ ಸರಿಯಾದ ಬಳಕೆ, ಸ್ವಚ್ಛತೆ ಮತ್ತು ಹೈಜೀನ್ ಹಾಗೂ ರಸ್ತೆ ಸುರಕ್ಷತೆ ಕುರಿತಂತೆ ಬೋಧನೋಪಕರಣಗಳ ಸಹಾಯದಿಂದ ಮಕ್ಕಳಿಗೆ ಮಾಹಿತಿಯನ್ನು ನೀಡಿದರು. ವಿದ್ಯಾರ್ಥಿಗಳಿಗೆ ನೈತಿಕತೆ ಮತ್ತು ಮೌಲ್ಯಗಳ ಕುರಿತು ಪ್ರೇರಣೆ ನೀಡಲಾಯಿತು.
ಹಲವು ಸಾಂಪ್ರದಾಯಿಕ ಆಟಗಳನ್ನು ನಡೆಸಲಾಯಿತು. ಸ್ವಯಂಸೇವಕರು ಮಕ್ಕಳಿಗೆ ನೋಟು ಪುಸ್ತಕ, ಪೆನ್ನು, ಹಣ್ಣುಗಳನ್ನು ವಿತರಿಸಿದರು. ಇದೇ ಸಂದರ್ಭ ಶಾಲೆಗೆ ಗೋಡೆಯ ಗಡಿಯಾರವನ್ನು ನೀಡಲಾಯಿತು. ಈ ಸೇವಾ ಕಾರ್ಯಕ್ರಮದ ಮೂಲಕ ಸ್ವಯಂಸೇವಕರು ಸೇವೆ ಸಲ್ಲಿಸುವ ಸಂಸ್ಕೃತಿ, ಆರೈಕೆ ಮತ್ತು ಹಂಚಿಕೊಳ್ಳುವ ಮಹತ್ವವನ್ನು ತಿಳಿಯುವ ಅವಕಾಶವನ್ನು ಪಡೆದರು.
ಈ ಸಂದರ್ಭದಲ್ಲಿ ಕಾಲೇಜಿನ ರೋಟರಾಕ್ಟ್ ಕ್ಲಬ್‌ನ ಸಂಯೋಜಕರುಗಳಾದ ಸತೀಶ್ ಶೆಟ್ಟಿ ಹೆಸ್ಕತ್ತೂರು ಮತ್ತು ಅವಿತಾ ಕೊರೆಯಾ ಉಪಸ್ಥಿತರಿದ್ದರು.










