ಇಂದ್ರಾಳಿ ಮೇಲ್ಸೇತುವೆ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಿ: ಜಿಲ್ಲಾಧಿಕಾರಿ

Click Here

Call us

Call us

Call us

Call us

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಉಡುಪಿ:
ಜಿಲ್ಲೆಯಲ್ಲಿ ಕೈಗೊಂಡಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳು ನಿಗಧಿತ ಕಾಲಾವಧಿಯಲ್ಲಿ ಪೂರ್ಣಗೊಳ್ಳದೇ ಸಾರ್ವಜನಿಕರಿಗೆ ಹೆಚ್ಚಿನ ಅನಾನುಕೂಲ ಉಂಟಾಗುತ್ತಿದೆ. ಕಾಮಗಾರಿ ವೇಗವನ್ನು ಹೆಚ್ಚಿಸಲು, ನಿರಂತರ ಅನುಸರಣೆ ಮಾಡಿದರೂ ಸಹ ಕುಂಠಿತಗೊಳ್ಳುತ್ತಿದೆ. ಕಾಮಗಾರಿಯನ್ನು ಆದ್ಯತೆಯ ಮೇಲೆ ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ಸೂಚನೆ ನೀಡಿದರು.

Click Here

Call us

Click Here

ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯಲ್ಲಿರುವ ರಾಷ್ಟ್ರೀಯ ಹೆದ್ದಾರಿ ರಸ್ತೆ ಕಾಮಗಾರಿ ಪ್ರಗತಿ ಬಗ್ಗೆ ಚರ್ಚಿಸಲು ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಇಂದ್ರಾಳಿ ರೈಲ್ವೇ ಮೇಲ್ಸುತುವೆ ಸೇತುವೆ ಕಾಮಗಾರಿಯು 2018 ರಿಂದಲೇ ಪ್ರಾರಂಭವಾದರೂ ಈವರೆಗೂ ಸಹ ಪೂರ್ಣಗೊಂಡಿಲ್ಲ. ಇದರಿಂದಾಗಿ ಸಾರ್ವಜನಿಕರ ವಾಹನಗಳ ಸುಗಮ ಸಂಚಾರಕ್ಕೆ ಅಡಚಣೆ ಉಂಡಾಗುವುದರ ಜೊತೆಗೆ ಅನೇಕ ಅಪಘಾತಗಳು, ಸಾವು ನೋವುಗಳು ಆಗಿವೆ. ಸಾರ್ವಜನಿಕರು ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇವೆಲ್ಲವುಗಳಿಗೂ ಜಿಲ್ಲಾಡಳಿತ ಉತ್ತರ ನೀಡಬೇಕು. ಆದರೆ, ಕಾಮಗಾರಿಯ ಪ್ರಗತಿ ನಿರೀಕ್ಷಿತ ಮಟ್ಟದಲ್ಲಿ ಸಾಗದೇ ಪೂರ್ಣಗೊಂಡಿರುವುದಿಲ್ಲ. ಕಳೆದ ಆರು ತಿಂಗಳಿನಿಂದ ನಾವುಗಳು ನಿರಂತರವಾಗಿ ಸಭೆ ಹಾಗೂ ಕಾಮಗಾರಿಯ ಪ್ರಗತಿ ಪರಿಶೀಲನೆಯನ್ನು ನಡೆಸುತ್ತಿದ್ದೇವೆ. ಆದರೂ ಸಹ ಕಾಮಗಾರಿಯ ವೇಗವಾಗಿ ಆಗುತ್ತಿಲ್ಲ. ಅಭಿಯಂತರರು ಹಾಗೂ ಗುತ್ತಿಗೆದಾರರು ಈ ಎಲ್ಲವನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ. ಕಾಮಗಾರಿಯ ಪ್ರಗತಿಯ ವೇಗವನ್ನು ಹೆಚ್ಚಿಸಿ ಪೂರ್ಣಗೊಳಿಸಬೇಕು. ತಪ್ಪಿದ್ದಲ್ಲಿ ಕಾನೂನು ರೀತಿಯಲ್ಲಿ ಪರಿಣಾಮವನ್ನು ಎದುರಿಸಬೇಕಾಗುತ್ತದೆ ಎಂದರು.

ಈಗಾಗಲೇ ಕಬ್ಬಿಣದ ಗರ್ಡಲ್ಸ್ನ ಫ್ಯಾಬ್ರಿಕೇಷನ್ ವರ್ಕ್ಸ್ ಪೂರ್ಣಗೊಂಡಿದೆ. ಇವುಗಳ ಇನ್ಸ್ಫೆಕ್ಷನ್‌ ಕಾರ್ಯಗಳನ್ನು ರೈಲ್ವೆ ಇಲಾಖೆ ಹಾಗೂ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಜಂಟಿಯಾಗಿ ಕೈಗೊಂಡು ಗುಣಮಟ್ಟವನ್ನು ಪರೀಕ್ಷಿಸಬೇಕು ಎಂದ ಅವರು, ಕಬ್ಬಿಣದ ಗರ್ಡಲ್ಸ್ ಅನ್ನು ಸೇತುವೆಯಾಗಿ ಅಳವಡಿಸಲು ಅಗತ್ಯವಿರುವ ಎಲ್ಲಾ ರೀತಿಯ ಪೂರ್ವ ತಯಾರಿಗಳನ್ನು ಈಗಿನಿಂದಲೇ ಜೊತೆ ಜೊತೆಯಾಗಿ ಕೈಗೊಳ್ಳಬೇಕೆಂದು ಅಭಿಯಂತರುಗಳಿಗೆ ಸೂಚನೆ ನೀಡಿದರು.

ರಾಷ್ಟ್ರೀಯ ಹೆದ್ದಾರಿ 169 ಎ ಯ ಕರಾವಳಿ ಬೈಪಾಸ್‌ನಿಂದ ಮಲ್ಪೆವರೆಗಿನ ರಸ್ತೆ ಕಾಮಗಾರಿಗೆ ಅಗತ್ಯವಿರುವ ಭೂ ಸ್ವಾಧೀನ ಪ್ರಕ್ರಿಯೆಯನ್ನು ಪೂರ್ಣ ಪ್ರಮಾಣದಲ್ಲಿ ತ್ವರಿತವಾಗಿ ಕೈಗೊಳ್ಳಬೇಕು. ವಿದ್ಯುತ್ ಕಂಬಗಳನ್ನು ಬದಲಾವಣೆ ಕಾರ್ಯವನ್ನು ಆದಷ್ಟು ತ್ವರಿತವಾಗಿ ಕೈಗೊಳ್ಳಬೇಕು. ಆಸ್ತಿಯ ಮಾಲೀಕರು ಇದಕ್ಕೆ ಸಹಕರಿಸಬೇಕು. ಭೂ ಸ್ವಾಧೀನ ಹಣವನ್ನು ಮುಂಚಿತವಾಗಿಯೇ ಠೇವಣಿ ಇಡಬೇಕು ಎಂದ ಅವರು, ಕಾಮಗಾರಿ ಕೈಗೊಳ್ಳುವಲ್ಲಿ ಯಾವುದೇ ರೀತಿಯ ಅಡಚಣೆಗಳು ಉಂಟಾದಲ್ಲಿ ಪೊಲೀಸ್ ಇಲಾಖೆಯ ನೆರವು ಪಡೆಯಬೇಕೆಂದರು.

Click here

Click here

Click here

Call us

Call us

ರಾಷ್ಟ್ರೀಯ ಹೆದ್ದಾರಿ 66 ಸಂತೆಕಟ್ಟೆ-ಅಂಬಲಪಾಡಿಯ ಅಂಡರ್‌ಪಾಸ್ ರಸ್ತೆಯ ಕಾಮಗಾರಿಯನ್ನು ಇನ್ನೂ ಒಂದು ತಿಂಗಳ ಒಳಗಾಗಿ ಪೂರ್ಣಗೊಳಿಸಬೇಕು. ತಪ್ಪಿದ್ದಲ್ಲಿ ಮಳೆಗಾಲ ಪ್ರಾರಂಭವಾಗಿ ಕಾಮಗಾರಿಗೆ ಅಡಚಣೆಗಳು ಆಗುವ ಸಾಧ್ಯತೆ ಇರುತ್ತದೆ ಎಂದರು.  

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ, ಸಹಾಯಕ ಕಮೀಷನರ್ ಮಹೇಶ್ಚಂದ್ರ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಅಬ್ದುಲ್ಲಾ ಮೊಹಮ್ಮದ್ ಅಜ್ಮಿ, ಶೃಂಗೇರಿ-ಚಿಕ್ಕಮಗಳೂರು ರಾಷ್ಟ್ರೀಯ ಹೆದ್ದಾರಿ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರ ಮಂಜುನಾಥ್, ಗುತ್ತಿಗೆದಾರರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Leave a Reply