ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ 2024-25ರ ಸಾಲಿನಲ್ಲಿ ಅತ್ಯುತ್ತಮ ಶೈಕ್ಷಣಿಕ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹೆಸ್ಕತ್ತೂರು ಇಲ್ಲಿಯ ಶಿಕ್ಷಕರಾದ ಅಶೋಕ್ ತೆಕ್ಕಟ್ಟೆ, ಮುಖ್ಯ ಅತಿಥಿಗಳಾಗಿ ಆಗಮಿಸಿ ಶೇ. 8೦ ಮತ್ತು ಶೇ.90 ಕ್ಕಿಂತಲೂ ಅಧಿಕ ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಫಲಕ ನೀಡಿ, ವಿದ್ಯಾರ್ಥಿಗಳ ಮುಂದಿನ ಜೀವನಕ್ಕೆ ಶುಭ ಹಾರೈಸಿದರು.
ಪ್ರಾಥಮಿಕ ವಿಭಾಗದ ಮುಖ್ಯಸ್ಥೆ ರೇಷ್ಮಾ ಡಿಸೋಜಾ, ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯಸ್ಥೆ ಪ್ರಮೀಳಾ ಡಿಸೋಜಾ, ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ ಹಾಗೂ ಉಪ ಪ್ರಾಂಶುಪಾಲರಾದ ಸುಜಯ್ ಕೋಟೆಗಾರ್ ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಪ್ರೌಢ ಶಾಲಾ ವಿಭಾಗದ ಮುಖ್ಯೋಪಾಧ್ಯಾಯರಾದ ಕೃಷ್ಣ ಅಡಿಗ ಅವರು ಸ್ವಾಗತಿಸಿ, ಸಹಶಿಕ್ಷಕಿ ಮಹಿಮಾ ನಿರೂಪಿಸಿ, ವಿದ್ಯಾರ್ಥಿ ಹರಿದಾಸ್ ಆರ್. ಮಲ್ಯ ವಂದಿಸಿದರು.