Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ’ಸಕ್ಷಮ’ ಆಳ್ವಾಸ್ ವುಮೆನ್ಸ್ ಅಸೋಸಿಯೇಷನ್ : ’ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆʼ
    alvas nudisiri

    ’ಸಕ್ಷಮ’ ಆಳ್ವಾಸ್ ವುಮೆನ್ಸ್ ಅಸೋಸಿಯೇಷನ್ : ’ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆʼ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಮೂಡುಬಿದಿರೆ:
    ’ಮಹಿಳೆ ಇಲ್ಲದೇ ಪ್ರಕೃತಿ ಇಲ್ಲ. ’ಶಕ್ತಿ’ಇಲ್ಲದೆ ಶಿವನೂ ನಿಶ್ಶಕ್ತ. ಶೋಷಣೆ ಮೆಟ್ಟಿ ನಿಲ್ಲುವವಳೇ ನಿಜವಾದ ’ಹೆಣ್ಣು’. ಹೆಣ್ಣಿಗೆ ವಿದ್ಯೆಯೇ ಸೌಂದರ್ಯ, ತೇಜಸ್ಸುʼ ಎಂದು ಹಿರಿಯ ರಂಗಕರ್ಮಿ, ಬೆಳ್ಳಿತೆರೆ ಮತ್ತು ಕಿರುತೆರೆ ನಟಿ ಗಿರಿಜಾ ಲೋಕೇಶ್ ಹೇಳಿದರು.

    Click Here

    Call us

    Click Here

    ಅವರು ಇಲ್ಲಿನ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿದ್ಯಾಗಿರಿಯ ಸುಂದರಿ ಆನಂದ ಆಳ್ವ ಆವರಣದ ಮುಂಡ್ರುದೆಗುತ್ತು ಕೆ. ಅಮರನಾಥ ಶೆಟ್ಟಿ ಸಭಾಂಗಣ (ಕೃಷಿಸಿರಿ) ವೇದಿಕೆಯಲ್ಲಿ ಶನಿವಾರ ಆಳ್ವಾಸ್ ಮಹಿಳಾ ವೇದಿಕೆ ’ಸಕ್ಷಮ’ ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡರ ಸ್ಮರಣೆಯಲ್ಲಿ ಆಯೋಜಿಸಿದ ’ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ-2025’ ಅನ್ನು ಉದ್ಘಾಟಿಸಿ ಮಾತನಾಡಿದರು.

    ʼಮಹಿಳೆ ಇಲ್ಲದೇ ಪ್ರಕೃತಿಯ ಇಲ್ಲ. ಆದರೆ ಹಿಂದೆ ಪುರಷನೂ ಬೇಕು ಎಂಬುದು ಗುಟ್ಟು’ ಎಂದು ನಸುನಕ್ಕ ಅವರು, ’ವಿದ್ಯೆ- ವಿನಯ ಇಲ್ಲದವರಿಗೆ ಮೇಕಪ್ ಹೆಚ್ಚು ಬೇಕು’ ಎಂದು ಚಟಾಕಿ ಹಾರಿಸಿದರು.

    ʼಅಮ್ಮ ಹೊಡೆದು ತಿದ್ದಿ ತೀಡಿದಾಗ ಗೊತ್ತಾಗಲಿಲ್ಲ. ಈಗ ಅದರ ಫಲ ಅನುಭವಿಸುತ್ತಿದ್ದೇನೆ. ಅಮ್ಮನ ಋಣ ಹೇಗೆ ತೀರಿಸಲಿ’ಎಂದು ಭಾವುಕರಾದರು. ’ಆಳ್ವಾಸ್’ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದು ನನ್ನ ಬಹುದಿನದ ಕನಸು. ಕರೆದುದಕ್ಕೆ ಧನ್ಯವಾದ ಎಂದು ಗ್ರೀಷ್ಮಾ ಆಳ್ವ ಅವರಿಗೆ ಹೇಳಿದರು.

    ’ಆಳ್ವಾಸ್ ಆವರಣದ ಶಿಸ್ತು ಮತ್ತು ನೈರ್ಮಲ್ಯ ದೇಶಕ್ಕೆ ಮಾದರಿ. ಹೀಗಾಗಿ ಇಲ್ಲಿ ಕಲಿತರೆ ದೇಶದ ಉತ್ತಮ ಪ್ರಜೆ ಆಗುವ ಅವಕಾಶ ಮಕ್ಕಳಿಗೆ ಲಭಿಸುತ್ತದೆ. ಆಳ್ವಾಸ್ ನಲ್ಲಿ ಓದುವುದು ದೊಡ್ಡ ಹೆಮ್ಮೆ’ಎಂದು ಅವರು, ’ಡಾ. ಮೋಹನ ಆಳ್ವರಿಗೂ ನಮಗೂ 50 ವರ್ಷಗಳ ನಂಟು. ಆದರೆ ವಯಸ್ಸಾಗಲಿಲ್ಲ. ಏಕೆಂದರೆ ಅವರ ಸಾಮಾಜಿಕ ಕೊಡುಗೆ ಅಪಾರ’ ಎಂದು ಶ್ಲಾಘಿಸಿದರು.

    Click here

    Click here

    Click here

    Call us

    Call us

    ʼನೀವು ಗ್ರಾಮೀಣ ಮಹಿಳೆ ಸುಕ್ರಿ ಬೊಮ್ಮನಗೌಡ ಅವರಿಗೆ ನೀಡಿದ ಗೌರವ ಶ್ಲಾಘನೀಯ. ಇಂದಿನ ’ಸ್ತ್ರಿ’ಶಸ್ತ್ರಚಿಕಿತ್ಸೆ ಹೆರಿಗೆಯ ನಡುವೆ ಸೂಲಗಿತ್ತಿಯರು ಅಂದು ನಿರ್ವಹಿಸಿದ ಪಾತ್ರ ಬಹುಮುಖ್ಯ. ಅದೇ ರೀತಿ ಸಾಲುಮರ ತಿಮ್ಮಕ್ಕ ಅವರ ಸಾಧನೆ’ ಎಂದು ಕೊಂಡಾಡಿದರು. ’ನಾಳೆ ಎಲ್ಲ ನಮ್ಮದೂ’ಎಂದು ವಿದ್ಯಾರ್ಥಿಗಳಿಗೆ ಹಾಡುವ ಮೂಲಕ ಮಹಿಳಾ ದಿನಾಚರಣೆಯ ಶುಭ ಕೋರಿದರು.

    ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಮಾತನಾಡಿ , ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ 2025ರ ಸಮಾನತೆಗಾಗಿನ ಪ್ರಯತ್ನವನ್ನು ವೇಗಗೊಳಿಸಿ” ಎಂಬ ಧೇಯವಾಕ್ಯವನ್ನು  ವಿಶ್ವದೆಲ್ಲೆಡೆ   ಕಾರ‍್ಯಗತಗೊಳಿಸುವ ಕೆಲಸವಾಗಬೇಕಿದೆ ಎಂದು ಕರೆ ನೀಡಿದರು.

    ಪುರುಷರಲ್ಲಿ ಸೌಂದರ್ಯ ಪ್ರಜ್ಞೆಯ ಗುಣವನ್ನು ಬಿತ್ತಿದ ಕೀರ್ತಿ ಮಹಿಳೆಗೆ ಸಲ್ಲುತ್ತದೆ. ಮಹಿಳೆಯು ವಿಭಿನ್ನ ಮತ್ತು ಜವಾಬ್ದಾರಿಯುತ ಪಾತ್ರದ ಮೂಲಕ ಪುರು?ರ ಬದುಕಿನಲ್ಲಿ ಪ್ರಜ್ಞೆ ಮತ್ತು ಶಕ್ತಿಯನ್ನು ಮೂಡಿಸುವಲ್ಲಿ ಕಾರಣಿಕರ್ತೆಯಾಗಿದ್ದಾಳೆ. 

    ಸಮಾಜದಲ್ಲಿ ಹೆಣ್ಣಿಂದು ಅನೇಕ ರೀತಿಯ ಪಾತ್ರಗಳನ್ನು ಜವಾಬ್ದಾರಿಯಿಂದ ನಿರ್ವಹಿಸಿಕೊಂಡು ಬರುತ್ತಿದ್ದಾಳೆ. ಪ್ರಸ್ತುತ ಕಾಲಮಾನದಲ್ಲಿ  ಮಹಿಳೆ- ನರ್ಸ್, ಆಶಾ ಕಾರ್ಯಕರ್ತೆ, ಅಧ್ಯಾಪನಾ ವೃತ್ತಿ, ಪೊಲೀಸ್, ಪೈಲೆಟ್, ಲೋಕೋ ಪೈಲೆಟ್, ಉದ್ಯಮ ಕ್ಷೇತ್ರ , ಕ್ರೀಡೆ, ರಾಜಕೀಯ, ಸರ್ಕಾರೇತರ ಉದ್ಯೋಗ, ವಕೀಲಿ ವೃತ್ತಿ ಹಾಗೂ ಇನ್ನಿತರ ಕ್ಷೇತ್ರಗಳಲ್ಲಿ ತನ್ನನ್ನು ತಾನು ಪುರು?ನಿಗೆ ಸಮಾನಳಾಗಿ ಸ್ಫರ್ಧೆ ನೀಡುತ್ತಾ ಬಂದಿದ್ದಾಳೆ. 

    ಪುರುಷ ಪ್ರದಾನ ಸಮಾಜದಲ್ಲಿ ಹಿಂದೆ ಸ್ಥಳೀಯ ಜನಪದ ಕಲೆಗಳಾದ ಕಂಬಳ, ಹುಲಿವೇಷ, ಯಕ್ಷಗಾನ ಕ್ಷೇತ್ರದಲ್ಲಿ ಮಹಿಳೆಯರಿಗೆ ಸ್ಥಾನವಿರಲಿಲ್ಲ. ಆದರೆ, ಇಂದು ಮಹಿಳೆ ಹಂತ ಹಂತವಾಗಿ ಪುರುಷನ ಸಮಾನಕ್ಕೆ ತೆರೆದುಕೊಳ್ಳುತ್ತಿರುವುದು ಉತ್ತಮ ಬೆಳವಣಿಗೆ ಎಂದರು.

    ಬೆಂಗಳೂರಿನ ಎಸ್-ವ್ಯಾಸ ಪರಿಗಣಿತ ವಿಶ್ವವಿದ್ಯಾಲಯದ ಯೋಗ ಮತ್ತು ಮಾನವಿಕ ವಿಭಾಗದ ಡೀನ್, ಪ್ರೊ ಕರುಣಾ ವಿಜಯೇಂದ್ರ ಮಾತನಾಡಿ, ತಾಳ್ಮೆ , ಸಹಜತೆ ಮತ್ತು ಅಭಿವ್ಯಕ್ತಿ ಸ್ವಾತಂತ್ಯವನ್ನು ಜೀವನದಲ್ಲಿ ರೂಡಿಸಿಕೊಳ್ಳಬೇಕು. ಮಹಿಳೆಯ ಆತ್ಮಶಕ್ತಿಯ ಮುಂದೆ

    ಎಲ್ಲವೂ ನಗಣ್ಯ. ಛಲದಿಂದ ಸಶಕ್ತರಾಗಿ ನಿಂತು ಆಸಕ್ತ ಕ್ಷೇತ್ರದಲ್ಲಿ ಮುನ್ನಡೆಯಲು  ಮಹಿಳೆಯರು ಮುಂಬರಬೇಕು ಎಂದು ಸಲಹೆ ನೀಡಿದರು. ಯುವಜನತೆಯ ವಯೋಸಹಜ ಆಕರ್ಷಣೆಗಳ ಎಲ್ಲೆ ಮೀರದೆ ತಮ್ಮ ನೆಲದ ಸಂಸ್ಕೃತಿಯನ್ನು ಕಾಪಾಡುವ ಮನೋಭಾವನೆಯನ್ನು ಬೆಳೆಸಿಕೊಳ್ಳಬೇಕು ಎಂದರು. 

    ಮಂಗಳೂರಿನ ಸಂಚಾರ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತೆ ನಜ್ಮಾ ಫಾರುಕಿ ಮಾತನಾಡಿ, ಮನೆಯೇ ಮೊದಲ ಪಾಠಶಾಲೆ, ತಾಯಿಯೇ ಮೊದಲ ಗುರು ಎಂಬ  ಸಂಸ್ಕೃತಿಯನ್ನು ಪರಿಪಾಲಿಸುವುದು ಪ್ರಸ್ತುತತೆಗೆ ಹೆಚ್ಚು ಅಗತ್ಯವಿದೆ. ಮಾಡುವ ಎಲ್ಲಾ ಒಳ್ಳೆಯ ಕಾರ್ಯದಲ್ಲಿ ಆತ್ಮ ವಿಶ್ವಾಸ , ಧೈರ್ಯ ಮತ್ತು ಪರಿಶ್ರಮವಹಿಸುವ ಮನಸ್ಥಿತಿ ಇದ್ದಾಗ ಗುರಿಯನ್ನು ಸಾಧಿಸಲು ಸಾಧ್ಯ ಎಂದರು. ಇಂದಿನ ಮಹಿಳಾ ಸಮಾಜಕ್ಕೆ ಹಾಲಕ್ಕಿ ಜನಾಂಗದ ಸುಕ್ರಿ ಬೊಮ್ಮಗೌಡರ ಸರಳ ಜೀವನ ಆದರ್ಶಪ್ರಾಯ. ಪ್ರತಿ ಮಹಿಳೆ ತನ್ನಲ್ಲಿ ಅಡಗಿರುವ ಅಮೋಘ ಶಕ್ತಿಯನ್ನು ಅರಿತುಕೊಳ್ಳಬೇಕು. ದೇಶದ ಮಹಿಳೆ ವಿದ್ಯಾವಂತಳಾದರೆ ಶಿಶು ಮರಣವನ್ನು  ಗಣನೀಯವಾಗಿ ತಡೆಯಲು ಸಾಧ್ಯ ಎಂದು ತಿಳಿಸಿದ ಯುನೆಸ್ಕೋ ಸಂಸ್ಥೆ ವರದಿಯನ್ನು ಉಲ್ಲೇಶಿಸಿದರು.

    ಮಂಗಳೂರಿನ ಸೆಂಟರ್ ಫಾರ್ ಅಡ್ವಾನ್ಸ್ ಲನಿಂಗ್(ಸಿಎಫ್‌ಎಎಲ್)ನ ಸಂಶೋಧನಾ ನಿರ್ದೇಶಕಿ ಪ್ರೊ ಸ್ಮಿತಾ ಹೆಗ್ಡೆ ಮಾತನಾಡಿ, 1908 ರಲ್ಲಿ ನ್ಯೂಯಾರ್ಕ್ ಪಟ್ಟಣದ ಬೀದಿಬದಿಯಲ್ಲಿ ಮಹಿಳೆಯರು ತಮ್ಮ ವೃತ್ತಿಯಲ್ಲಿ ಸಮಾನತೆಯನ್ನು ಕೋರಿ ಪ್ರತಿಭಟನೆ ಮಾಡುವುದರ ಮೂಲಕ ಮಹಿಳಾ ಚಳುವಳಿಗೆ ನಾಂದಿ ಹಾಡಿದರು. ಮುಂದೆ ವಿಶ್ವಸಂಸ್ಥೆ 1977 ಮಾರ್ಚ್ 8ರಂದು ಮಹಿಳಾ ದಿನಾಚರಣೆಯನ್ನು ಜಗತ್ತಿನಾದ್ಯಂತ ಆಚರಿಸಲು ಅವಕಾಶ ನೀಡಿತು. ಸಾಮಾಜಿಕ ಮತ್ತು ಸಂತಾನೋತ್ಪತ್ತಿ ಹಕ್ಕು ಮಹಿಳೆಗೆ ದೊರೆತ ಅತ್ಯಂತ ದೊಡ್ಡ ಶಕ್ತಿ ಎನ್ನುವುದನ್ನು ಎಲ್ಲರು ಅರಿಯಬೇಕು ಎಂದರು.  

    ವಿವಿಧ ಕ್ಷೇತ್ರದಲ್ಲಿ ಸಾಧನೆಗೈಯುತ್ತಿರುವ ಮೂವರು ಸಾಧಕಿಯರನ್ನು ಮಹಿಳಾ ದಿನಾಚರಣೆಯ ಅಂಗವಾಗಿ ಗೌರವಿಸಲಾಯಿತು. ಮಹಿಳಾ ಉದ್ಯಮಿ ಮತ್ತು ಇವೊಲ್ವ್ ಸಂಸ್ಥೆಯ ಅಧ್ಯಕ್ಷೆ ದಿವ್ಯಾ ಡಿ’ಸೋಜಾ, ರಾಷ್ಟ್ರೀಯ ಚಿಂತಕಿ ಮಾತಾ ಮೀನಾಕ್ಷಿ, ಭತ್ತದ ತಳಿಯನ್ನು ಸಂಗ್ರಹಿಸಿ ಪೋಷಿಸುವ ಸಾಣೂರಿನ ಸಾಧಕಿ ಬಾಲಕಿ ಮರಿಯಂ ಅಫ್ನಾ  ಅವರನ್ನು ಗೌರವಿಸಲಾಯಿತು. ಗಿರಿಜಾ ಲೋಕೇಶ್‌ರವರನ್ನು ಸಂಸ್ಥೆಯ ವತಿಯಿಂದ ಗೌರವಿಸಲಾಯಿತು.

    ಕಾರ್ಯಕ್ರಮದಲ್ಲಿ ಆಳ್ವ ಫಾರ್ಮಸಿಯ ಆಡಳಿತ ನಿರ್ವಾಹಕಿ ಡಾ ಗ್ರೀಷ್ಮಾ ಆಳ್ವ, ಜಯಶ್ರೀ ಅಮರನಾಥ ಶೆಟ್ಟಿ, ಟ್ರಸ್ಟಿ ವಿವೇಕ್ ಆಳ್ವ, ಆಳ್ವಾಸ್ ಹೆಲ್ತ್ ಸೆಂಟರ್‌ನ ಸ್ತ್ರೀರೋಗ ತಜ್ಞೆ ಡಾ. ಹನ ಶೆಟ್ಟಿ ಇದ್ದರು. ಬಂಟ್ಸ್ ಅಸೋಸಿಯೇಶನ್‌ನ ಸದಸ್ಯರು, ಸಂಸ್ಥೆಯ ಹಿತೈಷಿಗಳು, ಸಕ್ಷಮದ ಪದಾಧಿಕಾರಿಗಳು,  ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು, ಉಪನ್ಯಾಸಕರು, ವಿದ್ಯಾರ್ಥಿ, ವಿದ್ಯಾರ್ಥಿನಿಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.  

    ಕಾರ್ಯಕ್ರಮವನ್ನು ಆಳ್ವಾಸ್ ಪ.ಪೂ ಕಾಲೇಜಿನ ಕನ್ನಡ ವಿಭಾಗದ ಉಪನ್ಯಾಸಕಿ ಡಾ ಸುಧಾರಾಣಿ ನಿರೂಪಿಸಿ, ಸಕ್ಷಮ ವುಮೆನ್ಸ್ ಅಸೋಸಿಯೇ?ನ್ ಅಧ್ಯಕ್ಷೆ ಮೂಕಾಂಬಿಕಾ ಸ್ವಾಗತಿಸಿ, ಆಳ್ವಾಸ್ ಪ. ಪೂ ಕಾಲೇಜಿನ  ಜೀವಶಾಸ್ತ್ರ ವಿಭಾಗದ ಉಪನ್ಯಾಸಕಿ ರುಚಿಕಾ  ವಂದಿಸಿದರು.

    ತದನಂತರ, ಮಹಿಳಾ ದಿನಾಚರಣೆ ಅಂಗವಾಗಿ ನಡೆದ ಸಾಂಸ್ಕೃತಿಕ ಮತ್ತು ಕ್ರೀಡಾ ಸ್ಪರ್ಧೆಯಲ್ಲಿ ವಿಜೇತರಾದ ಸಂಸ್ಥೆಯ ಮಹಿಳಾ ಸಿಬ್ಬಂದಿ, ಅಧ್ಯಾಪಕ ವೃಂದ ಮತ್ತು ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಪ್ರಶಸ್ತಿ ನೀಡಿ ಅಭಿನಂದಿಸಲಾಯಿತು.

    ಈ ಕಾರ್ಯಕ್ರಮವನ್ನು ಆಳ್ವಾಸ್ ಪದವಿಪೂರ್ವ ಕಾಲೇಜಿನ  ಪ್ರಾಚಾರ್ಯ ಸದಾಕತ್, ಆಳ್ವಾಸ್ ಸಹಕಾರ ಬ್ಯಾಂಕ್‌ನ ಮುಖ್ಯ ಪ್ರಬಂಧಕಿ  ಅರ್ಪಿತಾ ಶೆಟ್ಟಿ ನರವೇರಿಸಿದರು.

    ಕಾರ್ಯಕ್ರಮದಲ್ಲಿ ಪಾಲ್ಗೊಂಡವರಲ್ಲಿ ಒಬ್ಬರನ್ನು  ಲಕ್ಕಿ ಸ್ಟಾರ್ ಎಂದು ಗುರುತಿಸಿ ಈ ವರ್ಷದ ಮಹಿಳಾ ದಿನಾಚರಣೆಯನ್ನು ವಿಶೇಷವಾಗಿ ಆಚರಿಸಲಾಯಿತು.

    ಪದವಿಪೂರ್ವ ಕಾಲೇಜಿನ ಅಧ್ಯಾಪಕವೃಂದದಿಂದ ಸೆಮಿಕ್ಲಾಸಿಕಲ್ ನೃತ್ಯ ಪ್ರದರ್ಶನಗೊಂಡಿತು. ನಂತರ ಝುಂಬಾ ಟ್ರೈನರ್ ನಿತೇಶ್ ಕುಲಾಲ್‌ರಿಂದ ನಡೆದ ಝುಂಬಾ ಡ್ಯಾನ್ಸ್ ಸಭಿಕರನ್ನು ಸಂಗೀತಕ್ಕೆ ಅನುಗುಣವಾಗಿ ನೃತ್ಯ ಮಾಡಲು ಹುರಿದುಂಬಿಸಿತು. ಈ ಸಾಂಸ್ಕೃತಿಕ ಕಾರ್ಯಕ್ರಮವನ್ನು ಡಾ. ನಮೃತಾ ಕುಲಾಲ್ ನಡೆಸಿಕೊಟ್ಟರು.

    ಆರಂಭದಲ್ಲಿ ಅತಿಥಿಗಳನ್ನು ಸಾಂಸ್ಕೃತಿಕ ಕಲಾತಂಡಗಳು, ಸಾಧಕಿಯರ ವೇಷಭೂಷಣಧಾರಿ ಮಕ್ಕಳು ಸೇರಿದಂತೆ ವಿಜೃಂಭಣೆಯಿಂದ ವೇದಿಕೆಗೆ ಕರೆದು ಕೊಂಡು ಬರಲಾಯಿತು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸೇವಾ ಮನೋಭಾವದಿಂದ ಮಾಡುವ ಕೆಲಸ ಮನಸ್ಸಿಗೆ ಸಂತೋಷ ನೀಡುತ್ತದೆ: ಅನುಪಮ ಎಸ್. ಶೆಟ್ಟಿ

    18/12/2025

    ಸುಜ್ಞಾನ ಪಿಯು ವಿದ್ಯಾರ್ಥಿಗಳಿಂದ ಕೈಗಾರಿಕಾ ಅಧ್ಯಯನ ಪ್ರವಾಸ

    18/12/2025

    ಆರೋಗ್ಯ ಸೇವೆಯಲ್ಲಿ ಹೊಸ ಅಧ್ಯಾಯ: ಮೂಡುಬಿದಿರೆ ಭಾಗದ ಮೊದಲ ಹೃದಯ ಚಿಕಿತ್ಸಾ ಕೇಂದ್ರ

    18/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ ಕೊಂಚಾಡಿ ರಾಧಾ ಶೆಣೈ ಸ.ಹಿ.ಪ್ರಾ ಶಾಲೆಯ ವಾರ್ಷಿಕ ಕ್ರೀಡಾಕೂಟ
    • ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ʼಸ್ಟಾರ್ ಎಜುಕೇಶನ್ ಅವಾರ್ಡ್ʼ ಗೌರವ
    • ಸೇವಾ ಮನೋಭಾವದಿಂದ ಮಾಡುವ ಕೆಲಸ ಮನಸ್ಸಿಗೆ ಸಂತೋಷ ನೀಡುತ್ತದೆ: ಅನುಪಮ ಎಸ್. ಶೆಟ್ಟಿ
    • ಸುಜ್ಞಾನ ಪಿಯು ವಿದ್ಯಾರ್ಥಿಗಳಿಂದ ಕೈಗಾರಿಕಾ ಅಧ್ಯಯನ ಪ್ರವಾಸ
    • ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆ: ಅರ್ಜಿ ಸಲ್ಲಿಕೆ-ಅವಧಿ ವಿಸ್ತರಣೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.