ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಬಾಲ್ಯದಲ್ಲಿ ಮಕ್ಕಳಿಗೆ ದೊರೆಯಬೇಕಾಗಿರುವ ಸನಾತನ ಸಂಸ್ಕೃತಿ, ಸಂಸ್ಕಾರಯುತ ಶಿಕ್ಷಣವನ್ನು ನೀಡುವ ಉದ್ದೇಶದಿಂದ ಶಿಶು ಮಂದಿರ ಸ್ಥಾಪನೆಗೊಂಡು ಕಾರ್ಯನಿರ್ವಹಿಸುತ್ತಿದೆ. ಶಿಶು ಮಂದಿರದಲ್ಲಿ ಮಕ್ಕಳಿಗೆ ನೀಡುವ ಶಿಕ್ಷಣದ ಪ್ರಯೋಜನ ಮಕ್ಕಳ ಪೋಷಕರಿಗೂ ದೊರೆಯುತ್ತಿದೆ. ಶಿಶು ಮಂದಿರದ ಚಟುವಟಿಕೆ ಹಾಗೂ ಶಿಕ್ಷಣ ಮಕ್ಕಳ ಜೀವನದ ಮೇಲೆ ಬಹಳ ಪ್ರಭಾವ ಬೀರುತ್ತಿದೆ ಎಂದು ಕುಂದಾಪುರ ಸೇವಾ ಸಂಗಮ ಟ್ರಸ್ಟ್‌ನ ಅಧ್ಯಕ್ಷ ಸುಬ್ರಹ್ಮಣ್ಯ ಹೊಳ್ಳ ಹೇಳಿದರು.
ಅವರು ಗಂಗೊಳ್ಳಿಯ ಸೇವಾ ಸಂಗಮ ನಿವೇದಿತಾ ಶಿಶು ಮಂದಿರದ ನಗರ ಜಯವಂತ ನಾಯಕ್ ಸಭಾಭವನದಲ್ಲಿ ನಡೆದ ಪಾಲಕರ ಮಿಲನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.
ಸೇವಾ ಸಂಗಮ ನಿವೇದಿತಾ ಶಿಶು ಮಂದಿರ ಅಧ್ಯಕ್ಷ ಬಿ. ರಾಘವೇಂದ್ರ ಪೈ ಅಧ್ಯಕ್ಷತೆ ವಹಿಸಿದ್ದರು. ಸೇವಾ ಸಂಗಮ ಟ್ರಸ್ಟ್‌ನ ವಿಶ್ವಸ್ಥೆ ಚಂದ್ರಿಕಾ ಧನ್ಯ, ಮಕ್ಕಳ ವಿಚಾರದಲ್ಲಿ ಪೋಷಕರು ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳು ಹಾಗೂ ಅವರ ಶಿಕ್ಷಣದ ಬಗ್ಗೆ ಮಾಹಿತಿ ನೀಡಿದರು.
ಶಿಶು ಮಂದಿರದ ಸದಸ್ಯರಾದ ಸವಿತಾ ಯು. ದೇವಾಡಿಗ, ಬಿ. ಲಕ್ಷ್ಮೀಕಾಂತ ಮಡಿವಾಳ, ವಸಂತಿ ಎನ್. ಖಾರ್ವಿ ಮತ್ತು ಗಾಯತ್ರಿ ಕೊಡಂಚ, ಕುಂದಾಪುರ ಶಿಶು ಮಂದಿರದ ಅಧ್ಯಕ್ಷೆ ಕಲ್ಪನಾ, ಪೋಷಕರು ಮೊದಲಾದವರು ಉಪಸ್ಥಿತರಿದ್ದರು.
ರೇವತಿ ವೆಂಕಟೇಶ ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು. ಶಿಶು ಮಂದಿರದ ಸಂಚಾಲಕ ಡಾ. ಕಾಶೀನಾಥ ಪೈ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕಾರ್ಯದರ್ಶಿ ಅಶ್ವಿತಾ ಜಿ. ಪೈ. ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ಮನೆಗಳಲ್ಲಿ ತಂದೆ ತಾಯಂದಿರು ಸಂಸ್ಕಾರದ ಮೂಲಕ ಸುಸಂಸ್ಕೃತರಾಗಬೇಕು. ಮಕ್ಕಳಲ್ಲಿ ಉತ್ತಮ ಸಂಸ್ಕಾರ ಸಂಸ್ಕೃತಿ ಬೆಳೆಯಬೇಕಾದರೆ ಮನೆ ಹಾಗೂ ಶಾಲೆಗಳಲ್ಲಿ ಹಿಂದು ಸಂಸ್ಕೃತಿಯ ಶಿಕ್ಷಣ ನೀಡಬೇಕು. ಸಂಸ್ಕಾರ ಸಂಸ್ಕೃತಿ ನೀಡುವ ಭಾಷೆಯನ್ನು ಬಾಲ್ಯದಲ್ಲಿ ಮಕ್ಕಳಿಗೆ ನೀಡಬೇಕು. ಮಕ್ಕಳನ್ನು ಸತ್ರ್ಪಜೆಗಳನ್ನಾಗಿ ರೂಪಿಸುವ ಮಹತ್ತರವಾದ ಜವಾಬ್ದಾರಿ ಮಕ್ಕಳ ಪೋಷಕರ ಮೇಲಿದೆ. ಮಕ್ಕಳಿಗೆ ಅಗತ್ಯವಾಗಿರುವ ಶಿಕ್ಷಣವನ್ನು ನೀಡುವ ಮೂಲಕ ಮಕ್ಕಳನ್ನು ಸಮಾಜದ ಮುಖ್ಯವಾಹಿನಿಯಲ್ಲಿ ಬೆಳೆಯಲು ಅವಕಾಶ ಕಲ್ಪಿಸಬೇಕು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ನಾವು ಮಾಡುವ ಕೆಲಸದಲ್ಲಿ ಶ್ರದ್ಧೆ, ಪ್ರೀತಿ, ಶಿಸ್ತು ಇರಬೇಕು. ರಾಮಾಯಣ, ಮಹಾಭಾರತ ಹಾಗೂ ಪುರಾಣ ಮತ್ತು ಗ್ರಂಥಗಳಲ್ಲಿ ಅಡಕವಾಗಿ ಅನೇಕ ವಿಷಯಗಳು ಇಂದಿನ ಮಕ್ಕಳಿಗೆ ತಿಳಿದಿಲ್ಲ. ಪಠ್ಯ ಪುಸ್ತಕದಲ್ಲಿ ಇರುವ ವಿಷಯಗಳನ್ನು ಮಾತ್ರ ಮಕ್ಕಳಿಗೆ ಹೇಳಲಾಗುತ್ತಿದೆ. ಇದರಿಂದ ನಮ್ಮ ಇತಿಹಾಸ ನಮ್ಮ ಮಕ್ಕಳಿಗೆ ತಿಳಿಯುತ್ತಿಲ್ಲ. ಹೀಗಾಗಿ ಪುರಾಣಗಳನ್ನು, ಧಾರ್ಮಿಕ ಗ್ರಂಥಗಳನ್ನು ಪಠಣ ಮಾಡಬೇಕು. ಮುಂದಿನ ಪೀಳಿಗೆಗೆ ದಾರಿದೀಪವಾಗಬೇಕು ಎಂದು ಮಹಾಬಲೇಶ್ವರ ಐತಾಳ್ ಉಪ್ಪುಂದ ಹೇಳಿದರು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಮಕ್ಕಳಿಗೆ ಬಾಲ್ಯದ ದೇಶ, ಧರ್ಮ, ಸಂಸ್ಕೃತಿ, ಸಂಸ್ಕಾರದ ಬಗ್ಗೆ ಅರಿವು ಮೂಡಿಸಿದರೆ ಅವರು ಸತ್ಪ್ರಜೆಗಳಾಗಿ ದೇಶಕ್ಕೆ ಬಲು ದೊಡ್ಡ ಕೊಡುಗೆಯನ್ನು ನೀಡುವ ಸಾಮರ್ಥ್ಯ ಹೊಂದುತ್ತಾರೆ. ಶಿಶು ಮಂದಿರದಲ್ಲಿ ಮಕ್ಕಳಿಗೆ ಇಂತಹ ವಿಷಯಗಳಿಗೆ ಪೂರಕವಾದ ಶಿಕ್ಷಣವನ್ನು ನೀಡುವ ಮೂಲಕ ಮಕ್ಕಳ ಬೆಳವಣಿಗೆಗೆ ಸಹಕರಿಸುತ್ತಿವೆ ಎಂದು ಗಂಗೊಳ್ಳಿ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದ ಪ್ರಧಾನ ಅರ್ಚಕ ಎಸ್. ವೆಂಕಟರಮಣ ಆಚಾರ್ಯ ಹೇಳಿದರು. ಸೇವಾ ಸಂಗಮ ನಿವೇದಿತಾ ಶಿಶು…