ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ 2024 -25 ಇತ್ತೀಚಿಗೆ ನಡೆಯಿತು.
ಮುಖ್ಯ ಅತಿಥಿಯಾಗಿದ್ದ ಉದ್ಯಮಿ ಸತೀಶ್ ಎನ್. ಶೇರೆಗಾರ್ ಮಾತನಾಡಿ, ವಿದ್ಯಾರ್ಥಿಗಳನ್ನು ಉದ್ದೇಶಿಸಿ ಶಿಸ್ತುಬದ್ಧ ಜೀವನ ಶೈಲಿ, ಒಳ್ಳೆಯ ಆಹಾರ ಕ್ರಮ ಮತ್ತು ಸದಾ ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದರಿಂದ ಆರೋಗ್ಯದಿಂದಿರಬಹುದು ಎಂದು ತಿಳಿಸಿದರು.
ಭಂಡಾರ್ಕಾರ್ಸ್ ಕಾಲೇಜು ಪ್ರಾಂಶುಪಾಲರಾದ ಡಾ. ಶುಭಕರಾಚಾರಿ ಅಧ್ಯಕ್ಷತೆ ವಹಿಸಿದ್ದರು. ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ. ಜಿ.ಎಮ್.ಗೊಂಡ ಮತ್ತು ವಿಧ್ಯಾರ್ಥಿ ಕ್ಷೇಮಪಾಲನಾಧಿಕಾರಿ ಸತ್ಯನಾರಾಯಣ ಉಪಸ್ಥಿತರಿದ್ದರು.
ಕಾಲೇಜಿನ ಕ್ರೀಡಾ ಸಾಧಕರು ಕ್ರೀಡಾ ಜ್ಯೋತಿ ಸ್ತಂಭಕ್ಕೆ ಜ್ಯೋತಿ ಬೆಳಗುವುದರ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು.
ದೈಹಿಕ ಶಿಕ್ಷಣ ನಿರ್ದೇಶಕ ಶಂಕರನಾರಾಯಣ ಸ್ವಾಗತಿಸಿ, ದೈಹಿಕ ಶಿಕ್ಷಣ ನಿರ್ದೇಶಕಿ ವನಿತಾ ವಂದಿಸಿದರು.















