ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ 2024-25ನೇ ಸಾಲಿನ ಹತ್ತನೇ ತರಗತಿಯ ಮಕ್ಕಳಿಗೆ ಶುಭಾಶಂಸನಾ ಕಾರ್ಯಕ್ರಮವು ಸಂಸ್ಥೆಯ ಕಾರ್ಯದರ್ಶಿಯವರಾದ ಕೆ. ರಾಧಾಕೃಷ್ಣ ಶೆಣೈ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಈ ಸಮಾರಂಭದಲ್ಲಿ ನಮ್ಮ ಸಂಸ್ಥೆಯ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸಂದೀಪ ಗಾಣಿಗ ಅವರು ಮಕ್ಕಳಿಗೆ ಮುಂಬರುವ ಪರೀಕ್ಷೆಗೆ ಶುಭ ಹಾರೈಸಿದರು.
ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿ – ವಿದ್ಯಾರ್ಥಿನಿಯರು ತಮ್ಮ ಶಾಲಾ ಜೀವನದ ಅನುಭವಗಳನ್ನು ಹಂಚಿಕೊಂಡರು. ಮುಖ್ಯೋಪಾಧ್ಯಾಯರಾದ ಕೃಷ್ಣ ಅಡಿಗರು ಸರ್ವರನ್ನು ಸ್ವಾಗತಿಸಿದರು.
ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ರೇಷ್ಮಾ ಡಿಸೋಜಾ, ನರ್ಸರಿ ವಿಭಾಗದ ಮುಖ್ಯೋಪಾಧ್ಯಾಯಿನಿ ಪ್ರಮೀಳಾ ಡಿಸೋಜಾ ಅವರು ಹಾಗೂ ಪದವಿ ಪೂರ್ವ ಕಾಲೇಜಿನ ಉಪ ಪ್ರಾಂಶುಪಾಲರಾದ ಸುಜಯ್ ಕೋಟೆಗಾರ್ ಅವರು ಸಮಾರಂಭದಲ್ಲಿ ಉಪಸ್ಥಿತರಿದ್ದರು.
ಸಂಗೀತ ಶಿಕ್ಷಕಿ ರಮಣಿ ಪ್ರಾರ್ಥನೆಗೈದರು. ಪ್ರೌಢಶಾಲಾ ಸಹಶಿಕ್ಷಕಿ ಪ್ರತಿಭಾ ಪೈ ನಿರೂಪಿಸಿ, ಪ್ರೌಢಶಾಲಾ ಸಹಶಿಕ್ಷಕಿ ಆಶಾ ಬಾಯಿ ಧನ್ಯವಾದ ಸಮರ್ಪಣೆ ಗೈದರು.