ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೊಲ್ಲೂರು: ಇಲ್ಲಿನ ಶ್ರೀ ಮೂಕಾಂಬಿಕಾ ದೇಗುಲದಲ್ಲಿ ಮಾ.15 ರಿಂದ ಮಾ. 24ರವರೆಗೆ ನಡೆಯಲಿರುವ ರಥೋತ್ಸವದ ಆಮಂತ್ರಣ ಪತ್ರ ಬಿಡುಗಡೆ ಮಾ.9 ರಂದು ದೇಗುಲದ ಕಚೇರಿಯಲ್ಲಿ ನಡೆಯಿತು.
ಮಾ. 22ರಂದು ಬೆಳಗ್ಗೆ 11.15ಕ್ಕೆ ರಥಾರೋಹಣ ನಡೆಯಲಿದೆ. ಸಂಜೆ 5ಗಂಟೆಗೆ ಮಹಾರಥೋತ್ಸವ ನಡೆಯಲಿದೆ.
ದೇಗುಲದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಕೆ. ಬಾಬು ಶೆಟ್ಟಿ, ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಶೆಟ್ಟಿ ಅವರು ವಿವಿಧ ಯೋಜನೆ ಬಗ್ಗೆ ಮಾಹಿತಿ ನೀಡಿದರಲ್ಲದೇ ಕೊಲ್ಲೂರು ಜಾತ್ರೆಗೆ ಇಲಾಖೆಗಳ ಸಹಕಾರ ಕೋರಿದರು. ದೇಗುಲದ ಸಮಿತಿ ಸದಸ್ಯರಾದ ರಘುರಾಮ್ ದೇವಾಡಿಗ, ಸುರೇಂದ್ರ ಶೆಟ್ಟಿ ಮಹಾಲಿಂಗ ನಾಯ್ಕ, ಸುಧಾ ಕೆ., ಧನಾಕ್ಷೀ ದೇಗುಲದ ಸಂತೋಷ್ ಉಪಸ್ಥಿತರಿದ್ದರು.










