ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಶ್ರೀ ಕಾಳವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕ 1 ಮತ್ತು 2 ರ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ ಸೌಕೂರಿನ ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನ ಸಭಾಂಗಣದಲ್ಲಿ ನೆರವೇರಿತು.
ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಪಿ. ಕಿಶನ್ ಹೆಗ್ಡೆ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿ, ಶಿಬಿರದಲ್ಲಿ ವಿದ್ಯಾರ್ಥಿಗಳು ಕೈಗೊಂಡ ಚಟುವಟಿಕೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಅವರು ಕಲಿತ ಮೌಲ್ಯಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡಾಗ ಮಾತ್ರ ಬದುಕು ಸಾರ್ಥಕ. ವಿದ್ಯಾರ್ಥಿ ಜೀವನದ ಸಂದರ್ಭದಲ್ಲಿ ಮೌಲ್ಯಗಳನ್ನು ಕಲಿಯುವ ಮತ್ತು ಕೌಶಲ್ಯಗಳನ್ನು ಕರಗತ ಮಾಡಿಕೊಳ್ಳುವ ವಿಷಯ ಪ್ರಮುಖವಾದವು. ವಿವಿಧ ಕ್ಷೇತ್ರಗಳಲ್ಲಿ ಲಭ್ಯ ಇರುವ ಅವಕಾಶಗಳನ್ನು ತಮ್ಮ ಆಸಕ್ತಿ ಮತ್ತು ಅಭಿರುಚಿಗೆ ಅನುಗುಣವಾಗಿ ಬಳಸಿಕೊಳ್ಳುವ ಕುರಿತು ವಿದ್ಯಾರ್ಥಿಗಳು ಸದಾ ಕ್ರಿಯಾಶೀಲರಾಗಿ ಇರಬೇಕು ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ರಾಮರಾಯ ಆಚಾರ್ಯ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಪ್ರಭಾಕರ ಖಾರ್ವಿ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಎನ್. ಎಸ್. ಎಸ್. ಸಂಯೋಜನಾಧಿಕಾರಿಗಳಾದ ರೋಹಿಣಿ ಮತ್ತು ನಿರಂಜನ ಶರ್ಮಾ, ಎನ್. ಎಸ್. ಎಸ್. ವಿದ್ಯಾರ್ಥಿ ಪ್ರತಿನಿಧಿಗಳಾದ ಪ್ರದೀಪ್ ಹಾಗೂ ವೈಷ್ಣವಿ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ನಾಗರಾಜ ವೈದ್ಯ ಎಂ., ಐಕ್ಯೂಎಸಿ ಸಂಚಾಲಕರಾದ ನಾಗರಾಜ ಯು., ರವಿಚಂದ್ರ ಹೆಚ್. ಎಸ್, ಸ.ಹಿ ಪ್ರಾ ಶಾಲೆ ಸೌಕೂರು ಇಲ್ಲಿನ ಮುಖ್ಯೋಪಾಧ್ಯಾಯರಾದ ನಮ್ರತಾ, ಗ್ರಾಮ ಪಂಚಾಯತ್ ಗುಲ್ವಾಡಿ ಇಲ್ಲಿನ ಸದಸ್ಯರಾದ ಸುರೇಂದ್ರ ಶೆಟ್ಟಿ ಅವರು ಶುಭ ಹಾರೈಸಿದರು.
ಸ್ವಯಂ ಸೇವಕರಾದ ದಿವ್ಯ ಕಾರ್ಯಕ್ರಮ ನಿರೂಪಿಸಿದರು. ಶಿಬಿರವನ್ನು ಯಶಸ್ವಿಯಾಗಿ ನಡೆಸಲು ಸಹಕರಿಸಿದ ಸ್ಥಳೀಯರಾದ ರಂಜಿತ್, ರಾಹುಲ್, ನಾಗರಾಜ ಭಟ್ ಅವರನ್ನು ಗೌರವಿಸಲಾಯಿತು.















