ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಉಡುಪಿಯ ಪೂರ್ಣಪ್ರಜ್ಞ ಕಾಲೇಜಿನಲ್ಲಿ ನಡೆದ ‘ಪೂರ್ಣದ್ವೈತ – 2025′ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಮ್ಯಾನೇಜ್ಮೆಂಟ್, ಐಟಿ ಹಾಗೂ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಗುಂಪು ನೃತ್ಯ, ಸಮೂಹ ಗೀತೆ, ಬಿಸಿನೆಸ್ ಪ್ಲಾನ್, ಫ್ಯಾಶನ್ ಶೋ, ಐಟಿ ರಸಪ್ರಶ್ನೆಗಳಲ್ಲಿ ಪ್ರಥಮ ಸ್ಥಾನ ಹಾಗೂ ಬೆಸ್ಟ್ ಮ್ಯಾನೇಜರ್ ದ್ವಿತೀಯ ಸ್ಥಾನದೊಂದಿಗೆ ಸಮಗ್ರ ದ್ವಿತೀಯ ಸ್ಥಾನ ಪಡೆಯುವ ಮೂಲಕ ಸಾಧನೆ ಮಾಡಿದ್ದಾರೆ.
ಈ ತಂಡವನ್ನು ಸಂಸ್ಥೆಯ ಅಧ್ಯಕ್ಷರಾದ ಬಿ.ಎಂ. ಸುಕುಮಾರ ಶೆಟ್ಟಿ, ಆಡಳಿತ ಮಂಡಳಿ ಅವರು, ಕಾಲೇಜಿನ ಪ್ರಾಂಶುಪಾಲರದ ಕೆ. ಉಮೇಶ್ ಶೆಟ್ಟಿ, ಉಪ-ಪ್ರಾಂಶುಪಾಲರಾದ ಡಾ. ಚೇತನ್ ಶೆಟ್ಟಿ ಕೋವಾಡಿ, ಆಡಳಿತ ನಿಕಾಯಕರಾದ ರಕ್ಷಿತ್ ರಾವ್ ಗುಜ್ಜಾಡಿ, ಐಕ್ಯೂಎಸಿ ಸಂಯೋಜಕಿ ಹಾಗೂ ಸಾಂಸ್ಕೃತಿಕ ತಂಡದ ಸಂಯೋಜಕಿಯಾದ ದೀಪಿಕಾ ಜಿ., ನಿರ್ವಹಣಾ ವಿಭಾಗದ ಮುಖ್ಯಸ್ಥೆ ನಂದಾ ರೈ, ನಿರ್ವಹಣಾ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ರಜತ್ ಬಂಗೇರ, ಬೋಧಕ-ಬೋಧಕೇತರ ವೃಂದ ಹಾಗೂ ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದಾರೆ.










