ಮತ್ಸ್ಯಾಶ್ರಯ ಯೋಜನೆಯಡಿ ಒಂದೂ ಮನೆ ಹಂಚಿಕೆಯಾಗಿಲ್ಲ: ಶಾಸಕ ಗುರುರಾಜ್‌ ಗಂಟಿಹೊಳೆ ಅಸಮಾಧಾನ

Click Here

Call us

Call us

Call us

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಬೈಂದೂರು:
ಬಜೆಟ್ ಅಧಿವೇಶನದಲ್ಲಿ ಬೈಂದೂರು ಶಾಸಕ ಗುರುರಾಜ್‌ ಗಂಟಿಹೊಳೆ ಅವರು ಮೀನುಗಾರರ ಪರವಾಗಿ ಧ್ವನಿ ಎತ್ತಿದ್ದು, ಸರ್ಕಾರದ ಉತ್ತರಕ್ಕೆ ಶಾಸಕರು ಅಸಮಾಧಾನ ವ್ಯಕ್ತ ಪಡಿಸಿದ್ದಾರೆ. ಸದನದಲ್ಲಿ 2023-24 ಹಾಗೂ 2024-25ನೇ ಸಾಲಿನಲ್ಲಿ ಮೀನುಗಾರಿಕೆ ಮತ್ಸ್ಯಾಶ್ರಯ ವಸತಿ ಯೋಜನೆಯಡಿ ಮಂಜೂರಾದ ಮನೆಗಳ ಪೈಕಿ ಎಷ್ಟು ಮನೆಗಳ ಕಾಮಗಾರಿ ಪ್ರಗತಿಯಲ್ಲಿವೆ ಎಂದು ಸರ್ಕಾರವನ್ನು ಪ್ರಶ್ನಿಸಿದ್ದಾರೆ.

Call us

Click Here

ಶಾಸಕರ ಪ್ರಶ್ನೆಗೆ ಉತ್ತರಿಸಿರುವ ಮೀನುಗಾರಿಕ ಸಚಿವ ಮಾಂಕಾಳ್ ವೈದ್ಯ, 2023-24ನೇ ಸಾಲಿನಲ್ಲಿ ಮತ್ಸ್ಯಾಶ್ರಯ  ವಸತಿ ಯೋಜನೆಯಡಿಯಲ್ಲಿ ಯಾವುದೇ ಮನೆಗಳು ಮಂಜೂರಾಗಿರುವುದಿಲ್ಲ.

2024- 25ನೇ ಸಾಲಿನ ಆಯವ್ಯಯ ಭಾಷಣದಲ್ಲಿ 10,000 ವಸತಿ ರಹಿತ ಮೀನುಗಾರರಿಗೆ ಸರ್ಕಾರದ ವಿವಿಧ ವಸತಿ ಯೋಜನೆಗಳಡಿ ಮನೆಗಳನ್ನು ನಿರ್ಮಿಸಲು ಸಹಾಯ ನೀಡಲಾಗುವುದೆಂದು ಘೋಷಿಸಲಾಗಿದೆ. 2025 ರ ಫೆಬ್ರವರಿವರೆಗೆ ಯಾವುದೇ ಮನೆಗಳನ್ನು ಹಂಚಿಕೆ ಮಾಡಿರುವುದಿಲ್ಲ ಎಂದು ಉತ್ತರಿಸಿದ್ದಾರೆ.

Leave a Reply