ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿಯ ಆಶ್ರಯದಲ್ಲಿ ಹೋಳಿ ಆಚರಿಸಲಾಯಿತು.
ಕಾಲೇಜಿನ ಪ್ರಾಂಶುಪಾಲರಾದ ಕೆ. ಉಮೇಶ್ ಶೆಟ್ಟಿ ಸರಸ್ವತಿ ಮೂರ್ತಿಗೆ ಅರಶಿನ ಹಚ್ಚುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಈ ಸಂದರ್ಭ ಕಾಲೇಜಿನ ಉಪ-ಪ್ರಾಂಶುಪಾಲರಾದ ಡಾ. ಚೇತನ್ ಶೆಟ್ಟಿ ಕೋವಾಡಿ, ಆಡಳಿತ ನಿಕಾಯಕರು ಹಾಗೂ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿಗಳಾದ ರಕ್ಷಿತ್ ರಾವ್ ಗುಜ್ಜಾಡಿ, ರೇಷ್ಮಾ ಶೆಟ್ಟಿ, ಬೋಧಕ-ಬೋಧಕೇತರರು ಉಪಸ್ಥಿತರಿದ್ದರು.
ಗ್ರಂಥಪಾಲಕ ಮಹೇಶ್ ನಾಯ್ಕ್ ಅವರ ಮಾರ್ಗದರ್ಶನದಲ್ಲಿ ಸಂಪ್ರದಾಯದ ಹೋಳಿಯನ್ನು ಪರಿಚಯಿಸಲಾಯಿತು. ಕಾಲೇಜಿನ ಎಸ್ಕ್ಯೂಎಸಿ ಪ್ರತಿನಿಧಿ ಶ್ರದ್ಧಾ ಆರ್. ಸ್ವಾಗತಿಸಿ, ವಂದಿಸಿ, ನಿರೂಪಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪದವಿ ಶಿಕ್ಷಣವು ವಿದ್ಯಾರ್ಥಿಗಳ ಬದುಕಿನ ಸರ್ವತೋಮುಖ ಬೆಳವಣಿಗೆಗೆ ಪೂರಕ ವಾತಾವರಣವನ್ನು ಸೃಷ್ಟಿಸಿಕೊಡಬೇಕು. ಆ ಮೂಲಕ ಪ್ರಜ್ಞಾವಂತ ನಾಗರಿಕರಾಗಿ ಸಮಾಜಮುಖಿಯಾಗಿ ಬದುಕು ರೂಪಿಸಿಕೊಳ್ಳಲು ಈ ಪದವಿಯೊಂದಿಗೆ ಪಡೆಯುವ ಇತರ ಚಟುವಟಿಕೆಗಳು ಪೂರಕ. ಹೀಗಾಗಿ ಪಠ್ಯಪೂರಕವಾದ ಅಂಶಗಳನ್ನು ಸದ್ಬಳಕೆ ಮಾಡಿಕೊಂಡು ಉತ್ತಮ ಬದುಕು ರೂಪಿಸಿಕೊಳ್ಳಿ ಎಂದು ಕುಂದಾಪುರದ ಎಲೆಕ್ಟ್ರಿಕಲ್ ಗುತ್ತಿಗೆದಾರರಾದ ಶ್ರೀ ಕೆ.ಆರ್. ನಾಯ್ಕ್ ಹೇಳಿದರು. ಅವರು ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಸಾಂಸ್ಕೃತಿಕ ತಂಡವು ವಿಶ್ವವಿದ್ಯಾನಿಲಯ ಕಾಲೇಜು, ಹಂಪನಕಟ್ಟೆಯಲ್ಲಿ ನಡೆದ ಸಂಗೀತ ಸ್ಪರ್ಧೆಗಳಾದ ಚಿತ್ರಗೀತೆಯಲ್ಲಿ ಶ್ರೇಯಾ ಖಾರ್ವಿ ಪ್ರಥಮ, ಜಾನಪದ ಸಮೂಹ ಗೀತೆ ಪ್ರಥಮ ಹಾಗೂ ಪೂಜಾ ಆಚಾರ್ ಭಾಗವತಿಕೆಯಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ. ಮುಖೇನ ಸಮಗ್ರ ಪುರಸ್ಕಾರವನ್ನು ಪಡೆದ ಕಾಲೇಜಿನ ತಂಡವನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿಯವರು, ಉಪ-ಪ್ರಾಂಶುಪಾಲರಾದ ಡಾ| ಚೇತನ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಕಾಲೇಜಿನ ವಿದ್ಯಾರ್ಥಿಗಳು ಸುರತ್ಕಲ್ನ ಗೋವಿಂದ ದಾಸ ಕಾಲೇಜಿನಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಸಾಹಿತ್ಯ ಮತ್ತು ಸಾಂಸ್ಕೃತಿಕ ಸ್ಪರ್ಧೆ ‘ದಿಗಂತ’ದಲ್ಲಿ 2 ಪ್ರಥಮ ಹಾಗೂ 5 ದ್ವಿತೀಯ ಬಹುಮಾನಗಳನ್ನು ಪಡೆದಿದ್ದಾರೆ. ವಿಜೇತರಾದ ಕಾಲೇಜಿನ ತಂಡವನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿಯವರು, ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ…