ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಹಿರಿಯ ಮುಖಂಡ ಮಲ್ಯಾಡಿ ಶಿವರಾಮ ಶೆಟ್ಟಿ ಅವರನ್ನು ಕೆಪಿಸಿಸಿ ಸದಸ್ಯರನ್ನಾಗಿ ನೇಮಕ ಮಾಡಿದ್ದಾರೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಆದೇಶಿಸಿದ್ದಾರೆ.
ಅವರು 18 ವರ್ಷಗಳ ಕಾಲ ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿದ್ದರು. ತೆಕ್ಕಟ್ಟೆ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ, 2013ರಲ್ಲಿ ಕುಂದಾಪುರದಿಂದ ವಿಧಾನಸಭೆಗೆ ಸ್ಪರ್ಧಿಸಿದ್ದರು.
ಪ್ರಸ್ತುತ ಮಲ್ಯಾಡಿ ಶ್ರೀ ಮಹಾದೇವಿ ನಂದಿಕೇಶ್ವರ ದೈವಸ್ಥಾನದ ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷರಾಗಿ, ಕುಂದಾಪುರ ಭೂ ಅಭಿವೃದ್ಧಿ ಬ್ಯಾಂಕ್ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬಿಜೆಪಿಯ ನಿರಂತರ ಸುಳ್ಳು ಅಪಾದನೆಗಳಿಂದ ಜನಪರ ರಾಜ್ಯ ಸರ್ಕಾರವನ್ನು ಅಸ್ಥಿರ ಗೊಳಿಸುವುದು ಅಸಾಧ್ಯ ವಿಧಾನಪರಿಷತ್ತಿನಲ್ಲಿ ಸ್ಥಳೀಯ ಆಡಳಿತ ಸಂಸ್ಥೆಗಳ ಜನಪ್ರತಿನಿಧಿಗಳ ಧ್ವನಿ ಆಗಬಲ್ಲ ರಾಜು ಪೂಜಾರಿ ಅವರನ್ನು ಬೆಂಬಲಿಸಿದರೆ ,ಕರಾವಳಿಯ ಸ್ಥಳೀಯ ಆಡಳಿತಕ್ಕೆ ಶಕ್ತಿ ಬಂದಂತಾಗುತ್ತದೆ, ಮಾತ್ರವಲ್ಲದೆ ಸಿದ್ದರಾಮಯ್ಯನವರ ಕೈ ಬಲಪಡಿಸಿದಂತಾಗುತ್ತದೆ ಎಂದು ಉಡುಪಿ ಜಿಲ್ಲಾ ಕೆಪಿಸಿಸಿ ಉಸ್ತುವಾರಿ ಮತ್ತು ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜಾ ಹೇಳಿದರು. ಕೋಟೇಶ್ವರ ಸಹನಾ ಹೋಟೆಲ್ ಸುಮುಖ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸ್ಥಳೀಯಾಡಳಿತಕ್ಕೆ ಶಕ್ತಿ ನೀಡಿದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮತ್ತು ಸ್ಥಳೀಯಾಡಳಿತದ ಮೂರು ಸ್ಥರಗಳಲ್ಲಿ ಕೆಲಸ ಮಾಡಿ ಅಪಾರ ಅನುಭವ ಹೊಂದಿರುವ ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿಯವರನ್ನು ಗೆಲ್ಲಿಸಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಕರೆ ನೀಡಿದರು . ತೆಕ್ಕಟ್ಟೆ ದುರ್ಗಾಪರಮೇಶ್ವರಿ ಸಭಾಭವನದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಸ್ಥಳೀಯಾಡಳಿತದಿಂದ ವಿಧಾನ ಪರಿಷತ್ತಿಗೆ ನಡೆಯುವ ಚುನಾವಣೆಯ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಸಭೆಯ…
ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಸರ್ವರಿಗೂ ಸಮಬಾಳು, ಸಮಪಾಲು ಸಿದ್ದಾಂತದ ಸಂವಿಧಾನವನ್ನು ನೀಡುವ ಮೂಲಕ ದೇಶದ ಜನರ ಜೀವನಮಟ್ಟವನ್ನು ಉನ್ನತಿಗೇರಿಸಿದ ಕೀರ್ತಿ ಕಾಂಗ್ರೆಸ್ ಪಕ್ಷದ್ದಾಗಿದೆ. ಇಂದಿರಾಜಿಯವರ ೨೦ ಅಂಶದ ಕಾರ್ಯಕ್ರಮದ ಮೂಲಕ ಶಿಕ್ಷಣ, ಆರೋಗ್ಯ, ವಿಜ್ಞಾನ, ಬ್ಯಾಂಕಿಂಗ್, ಕೃಷಿ ಮುಂತಾದ ಕ್ಷೇತ್ರಗಳಿಗೆ ಪ್ರಾಧಾನ್ಯತೆ ನೀಡುವ ಮೂಲಕ ವಿಶ್ವದ ಮುಂದುವರೆದ ರಾಷ್ಟ್ರಗಳ ಸಾಲಿನಲ್ಲಿ ನಮ್ಮ ಭಾರತ ದೇಶವು ಮುಂಚೂಣಿಯ ಸ್ಥಾನಕ್ಕೇರಲು ಸಾಧ್ಯವಾಯಿತು. ಕಾಂಗ್ರೆಸ್ ಎಂದರೆ ಅದು ಕೇವಲ ಪಕ್ಷವಲ್ಲ. ಅದು…