ಜಿಲ್ಲಾ ನೀರು ಸರಬರಾಜು ಮತ್ತು ನೈರ್ಮಲ್ಯ ಮಿಷನ್ ಸಮಿತಿ ಸಭೆ

Click Here

Call us

Call us

Call us

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಉಡುಪಿ:
ಜಿಲ್ಲೆಯ ಗ್ರಾಮೀಣ ಭಾಗದ ಪ್ರತಿಯೊಂದು ಮನೆ ಮನೆಗೂ ನಲ್ಲಿ ನೀರು ಪೂರೈಸುವ ಜಲ್ ಜೀವನ ಮಿಷನ್ ಕಾಮಗಾರಿಯು ಈಗಾಗಲೇ ಶೇ. 92 ಪೂರ್ಣಗೊಂಡಿದೆ. ಬಾಕಿ ಉಳಿದ ಕಾಮಗರಿಗಳನ್ನು ಆದ್ಯತೆಯ ಮೇಲೆ ತ್ವರಿತವಾಗಿ ಪೂರ್ಣಗೊಳಿಸಬೇಕು. ಬೇಸಿಗೆಯಲ್ಲಿ ಕುಡಿಯುವ ನೀರಿನ ತೊಂದರೆಯಾಗದಂತೆ ಜಾಗ್ರತಿ ವಹಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪ್ರತೀಕ್ ಬಾಯಲ್ ಅಭಿಯಂತರರಿಗೆ ಸೂಚನೆ ನೀಡಿದರು.

Call us

Click Here

ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್‌ನ ತಮ್ಮ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ನೀರು ಸರಬರಾಜು ಮತ್ತು ನೈರ್ಮಲ್ಯ ಮಿಷನ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯಲ್ಲಿ ಗ್ರಾಮೀಣ ಭಾಗದ 247000 ಮನೆಗಳಿಗೆ ಕುಡಿಯುವ ನೀರಿನ ನಳ ಸಂಪರ್ಕವನ್ನು ಕಲ್ಪಿಸಲು ಜಲ ಜೀವನ ಅಡಿಯಲ್ಲಿ ಗುರಿ ಹೊಂದಲಾಗಿದ್ದು, ಇವರೆಗೆ 2,14,000 ಮನೆಗಳಿಗೆ ನಳ ಸೌಲಭ್ಯವನ್ನು ಒದಗಿಸಲಾಗಿದೆ. ಬಾಕಿ ಉಳಿದ ಮನೆಗಳಿಗೆ ನಳ ಸೌಲಭ್ಯ ಕಲ್ಪಿಸುವ ಕಾಮಗಾರಿಯನ್ನು ಶೀಘ್ರದಲ್ಲಿ ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಲ ಜೀವನ್ ಮಿಷನ್ ಯೋಜನೆಯಡಿ 525 ಕಾಮಗಾರಿಗಳನ್ನು 687.66 ಕೋ. ರೂ. ವೆಚ್ಚದಲ್ಲಿ ಕೈಗೊಳ್ಳಲಾಗಿದೆ. ಈಗಾಗಲೇ 484 ಕಾಮಗಾರಿಗಳು ಪೂರ್ಣಗೊಂಡಿವೆ. ಬಾಕಿ ಉಳಿದ 41 ಕಾಮಗಾರಿಗಳು ಪ್ರಗತಿಯಲ್ಲಿವೆ. ಈಗಾಗಲೇ 501.40 ಕೋಟಿ ರೂ. ವಹಿಸಲಾಗಿದೆ ಎಂದರು.

ಈಗಾಗಲೇ ಕಳೆದ ಒಂದು ವರ್ಷದಲ್ಲಿ ಜಲ ಜೀವನ್ ಮಿಷನ್ ಅಡಿಯಲ್ಲಿ ಕೈಗೊಳ್ಳಲು ಯಾವುದೇ ಜಾಗದ ಸಮಸ್ಯೆಗಳು ಇಲ್ಲ. ಆದರೂ ಸಹ ಕಾಮಗರಿ ಪೂರ್ಣಗೊಂಡಿಲ್ಲ. ಕೆಲವು ತಾಂತ್ರಿಕ ಕಾರಣಗಳನ್ನು ಹೇಳುತ್ತಾರೆ. ಇದು ಸರಿಯಲ್ಲ. ನಿಗದಿತ ಕಾಲಾವಧಿಯಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸದೇ ಇದ್ದಲ್ಲಿ ಗುತ್ತಿಗೆದಾರರಿಗೆ ದಂಡ ಹಾಕಬೇಕು ಎಂದರು.

Click here

Click here

Click here

Call us

Call us

ಕುಡಿಯುವ ನೀರನ್ನು ಒದಗಿಸುವ ಕೆಲವು ನಳ ಸಂಪರ್ಕದ ಪೈಪ್‌ಲೈನ್ ಹಾಕುವ ಕಾಮಗಾರಿ ಪೂರ್ಣಗೊಂಡಿದ್ದರು ಸಹ ನೀರಿನ ಮೂಲಗಳಿಲ್ಲದೇ ನೀರಿನ್ನು ಒದಗಿಸಲು ಆಗುತ್ತಿಲ್ಲ. ಸಮೀಪದಲ್ಲಿ ನೀರಿನ ಮೂಲ ವ್ಯವಸ್ಥೆಯನ್ನು ನೋಡಿ ಅವುಗಳಿಗೆ ನೀರು ಒದಗಿಸಬೇಕು. ಹೊಸದಾಗಿ ಬೋರ್ವೆಲ್‌ಗಳನ್ನು ಅಳವಡಿಸುವಾಗ ಅವುಗಳಿಗೆ ಮಳೆ ನೀರಿನ ಕೊಯ್ಲು ಕಾಮಗಾರಿಯನ್ನು ಕಡ್ಡಾಯವಾಗಿ ಅಳವಡಿಸಬೇಕು ಎಂದ ಅವರು, ಈಗಾಗಲೇ ಜಿಲ್ಲೆಯ ಗ್ರಾಮೀಣ ಭಾಗದಲ್ಲಿರುವ ಸರಕಾರದ ಬೋರ್ವೆಲ್‌ಗಳಿಗೆ ಮಳೆ ನೀರಿನ ಕೊಯ್ಲು ಅಳವಡಿಸುರುವ ಕುರಿತ ಮಾಹಿತಿಯನ್ನು ಕ್ರೋಢಿಕರಿಸಿ ನೀಡಬೇಕು ಎಂದರು.

ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯು ಯಾವುದೇ ಒಂದು ಗ್ರಾಮಗಳಲ್ಲಿ ಆಗದಂತೆ ಎಚ್ಚರವಹಿಸಬೇಕು. ಒಂದೊಮ್ಮೆ ನೀರಿನ ಸರಬರಾಜಿನ ಸಮಸ್ಯೆ ಉಂಟಾದಲ್ಲಿ ಸಮೀಪದ ಖಾಸಗಿ ಬೋರೆವೆಲ್ ಮಾಲೀಕರರಿಂದ ಪಡೆಯಲು ಅನುಕೂಲವಾಗುವಂತೆ ಗುರುತಿಸಿ, ಒಪ್ಪಂದ ಮಾಡಿಕೊಂಡು ಸಮಸ್ಯೆಯಾದಲ್ಲಿ ನೀರು ಸರಬರಾಜು ಮಾಡಲು ಮುಂದಾಗಬೇಕು ಎಂದು ಸೂಚನೆ ನೀಡಿದರು.

ಈಗಾಗಲೇ ಕೆಲವು ಕುಡಿಯುವ ನೀರು ಸೌಲಭ್ಯ ಒದಗಿಸುವ ನಿರ್ವಹಣೆ ಕಾಮಗಾರಿಯನ್ನು ಕೈಗೊಳ್ಳಲು ಪ್ರಸ್ತಾವನೆ ಸಲ್ಲಿಸಲಾಗಿದೆ. ಕಳೆದ ಐದು ವರ್ಷಗಳಿಂದ ಕೈಗೊಂಡಿರುವ ಕಾಮಗಾರಿಗಳ ಮಾಹಿತಿಗಳನ್ನು ಕಲೆಹಾಕಿ ಓವರ್ ಲ್ಯಾಪ್ ಅದ ಬಗ್ಗೆ ಎಚ್ಚರವಹಿಸಬೇಕು ಎಂದರು.

ಜಿಲ್ಲೆಯಾದ್ಯಂತ ಕುಡಿಯಲು ಯೋಗ್ಯವಾಗಿರುವ ಸ್ವಚ್ಛ ನೀರನ್ನು ಸರಬರಾಜು ಮಾಡಬೇಕು. ಎಲ್ಲಿಯೂ ಸಹ ಕಲುಷಿತ ನೀರು ಸರಬರಾಜು ಆಗದಂತೆ ಎಲ್ಲಾ ರೀತಿಯ ಎಚ್ಚರಿಕ ಕ್ರಮಗಳನ್ನು ಕೈಗೊಳ್ಳಬೇಕು ಎಂದ ಅವರೂ, ಕಳೆದ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾದ ಗ್ರಾಮಗಳನ್ನು ಗುರುತಿಸಿ, ನೀರಿನ ಸಮಸ್ಯೆ ಉಂಟಾಗದಂತೆ ಯೋಜನೆ ಸಿದ್ದಗೊಳಿಸಬೇಕು ಎಂದರು.

ಸಭೆಯಲ್ಲಿ ಪೌರಯುಕ್ತ ಡಾ. ಉದಯ್ ಕುಮಾರ್ ಶೆಟ್ಟಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರ ಉದಯ್ ಕುಮಾರ್, ಸಾಮಾಜಿಕ ಅರಣ್ಯ ವಿಭಾಗದ ಉಪ ಸಂರಕ್ಷಣಾ ಅಧಿಕಾರಿ ರವೀಂದ್ರ ಕುಮಾರ್, ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗಭೂಷಣ್ ಉಡುಪ, ಅಂತರ್ಜಲ ನಿರ್ದೇಶನಲಯದ ಹಿರಿಯ ಭೂ ವಿಜ್ಞಾನಿ ದಿನಕರ ಶೆಟ್ಟಿ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Leave a Reply