ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ತಾಲೂಕಿನ ಉಳ್ಳೂರು ನಿವಾಸಿ ಪುರೋಹಿತ ರಮೇಶ್ (59) ಅವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಅವರು ಸಂಜೆ ಮನೆಯ ಕೊಟ್ಟಿಗೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿದ್ದ ಅವರನ್ನು ಮನೆಯವರು ಕೆಳಗಿಳಿಸಿ ಕುಂದಾಪುರ ಸರಕಾರಿ ಆಸ್ಪತ್ರೆಗೆ ಕರೆತಂದಿದ್ದು, ದಾರಿ ಮಧ್ಯ ದಲ್ಲಿ ಮೃತಪಟ್ಟಿರುವುದಾಗಿ ಪರೀಕ್ಷಿಸಿದ ವೈದ್ಯರು ಘೋಷಿಸಿ ದ್ದಾರೆ.
ಕಳೆದ 1 ವರ್ಷದಿಂದ ಮಾನಸಿಕ ಖಿನ್ನತೆ ಯಿಂದ ಬಳಲುತ್ತಿದ್ದ ಅವರು, ಇದೇ ಕಾರಣಕ್ಕೆ ಜೀವನದಲ್ಲಿ ಜಿಗುಪ್ಪೆಗೊಂಡು ಕೃತ್ಯ ಎಸಗಿದ್ದಾರೆ ಎಂದು ಸಹೋದರ ಸುಬ್ರಹ್ಮಣ್ಯ ನೀಡಿದ ದೂರಿನಂತೆ ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಸಿದ್ದಾಪುರ ಗ್ರಾಮದ ಸುಪ್ರೀತ್ ಕಾಮತ್ ಅವರ ಪತ್ನಿ ಕಾವ್ಯಾ (27) ಅವರು ಫೆ. 5ರಂದು ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾವಾಡಿ ಗ್ರಾಮ ಉಮೇಶ್ ಅವರ ಪುತ್ರಿ ಕಾವ್ಯಾ ಅವರು ಸಿದ್ದಾಪುರ ಕೆಳಪೇಟೆಯ ವೆಂಕಟೇಶ ಕಾಮತ್ ಅವರ ಪುತ್ರ ಸುಪ್ರೀತ್ ಕಾಮತ್ ಅವರೊಂದಿಗೆ 2023ರಲ್ಲಿ ವಿವಾಹವಾಗಿದ್ದರು. ಸುಪ್ರೀತ್ ಕಾಮತ್ ಹೆಸ್ಕೂತ್ತೂರು ಪ್ರೌಢಶಾಲೆಯಲ್ಲಿ ಗುಮಾಸ್ತರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಈ ದಂಪತಿಗೆ 10…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಯಡಮೊಗೆ ಗ್ರಾಮದ ನಿವಾಸಿ ವೆಂಕಟರಮಣ (65) ಅವರು ಸೋಮವಾರ ರಾತ್ರಿ ಮನೆ ಸಮೀಪದ ಗೇರು ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ಸಂಜೆ ಯಕ್ಷಗಾನ ನೋಡಲು ಹೋಗುವುದಾಗಿ ಮನೆಯಿಂದ ಹೊರಹೋದವರು ವಾಪಸ್ ಬಾರದಿರುವುದನ್ನು ನೋಡಿ ಹುಡುಕಾಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಈ ಬಗ್ಗೆ ಶಂಕರನಾರಾಯಣ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಇಲ್ಲಿನ ಮಣೂರು ಗ್ರಾಮದ ನಿವಾಸಿ ಚಂದ್ರ (63) ಅವರು ಬುಧವಾದಂದು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರಿಗೆ ಬಿಪಿ, ಶುಗರ್ ಹಾಗೂ ದಮ್ಮಿನ ಕಾಯಿಲೆಯಿಂದ ಬಳಲುತ್ತಿದ್ದು, ಉಡುಪಿ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಡಿಸ್ಟಾರ್ಜ್ ಆಗಿ ಮನೆಗೆ ಬಂದಿದ್ದರು. ಮನೆಯಲ್ಲಿ ಯಾರು ಇಲ್ಲದ ಸಂದರ್ಭದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅವರ ಪುತ್ರ ಗಣೇಶ್ ನೀಡಿದ ದೂರಿನಂತೆ ಕೋಟ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.