ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕರ್ನಾಟಕ ಜಾನಪದ ಅಕಾಡೆಮಿಯ 2024ನೇ ಸಾಲಿನ ವಾರ್ಷಿಕ ಗೌರವ ಪ್ರಶಸ್ತಿಯಲ್ಲಿ ಬೀದರ್ ಜಿಲ್ಲೆಯ ಪೂಜ್ಯ ಶ್ರೀ ಚನ್ನಬಸವ ಪಟ್ಟದೇವರು ರಂಗಮಂದಿರದಲ್ಲಿ ನಡೆದ ಸಮಾರಂಭದಲ್ಲಿ ಸಂಗೀತ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಅವರಿಗೆ ಪ್ರದಾನ ಮಾಡಲಾಯಿತು.
ಡಾ. ಗಣೇಶ್ ಗಂಗೊಳ್ಳಿ ಅವರು ಕಳೆದ 32 ವರ್ಷದ ಜಾನಪದ ಸಂಗೀತ ಕ್ಷೇತ್ರದ ಸೇವೆ ಸಲ್ಲಿಸುತ್ತಿದ್ದಾರೆ. ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕರ್ನಾಟಕ ಸರಕಾರದ ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷರಾದ ಗೊಲ್ಲಳ್ಳಿ ಶಿವಪ್ರಕಾಶ್, ಅಕಾಡಮಿಯ ಸದಸ್ಯರು ಹಾಗೂ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.
ಇದನ್ನೂ ಓದಿ – ಕರ್ನಾಟಕ ಜಾನಪದ ಅಕಾಡೆಮಿಯ ವಾರ್ಷಿಕ ಗೌರವ ಪ್ರಶಸ್ತಿಗೆ ಎನ್. ಗಣೇಶ್ ಗಂಗೊಳ್ಳಿ ಆಯ್ಕೆ – https://kundapraa.com/?p=83002
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ಜಾನಪದ ಅಕಾಡೆಮಿಯ 2024ನೇ ಸಾಲಿನ ವಾರ್ಷಿಕ ಗೌರವ ಪ್ರಶಸ್ತಿಗೆ ಕಲಾವಿದ ಎನ್. ಗಣೇಶ್ ಗಂಗೊಳ್ಳಿ ಅವರನ್ನು ಆಯ್ಕೆ ಮಾಡಲಾಗಿದೆ. ತಾಲೂಕಿನ ಗಂಗೊಳ್ಳಿ ನಿವಾಸಿಯಾಗಿರುವ ಗಣೇಶ್ ಗಂಗೊಳ್ಳಿ ಅವರು ಖ್ಯಾತ ಸಂಗೀತ ಕಲಾವಿದರಾಗಿ, ಆಕಾಶವಾಣಿ ಕಲಾವಿದರಾಗಿ ತಮ್ಮ ಸುಶ್ರಾವ್ಯ ಕಂಠದ ಮೂಲಕ ನೂರಾರು ಜಾನಪದ ಗೀತೆಗಳಿಗೆ ಧ್ವನಿಯಾಗಿದ್ದಾರೆ. ಜಾನಪದ ಕ್ಷೇತ್ರದಲ್ಲಿ ಅವರ ಸೇವೆಯನ್ನು ಗುರುತಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು, ಬೀದರ್ ಜಿಲ್ಲೆಯ ಪೂಜ್ಯ ಶ್ರೀ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕನ್ನಡದ ಸ್ತ್ರೀವಾದಿ ಚಿಂತಕಿ, ಜಾನಪದ ವಿದ್ವಾಂಸೆ ಡಾ. ಗಾಯತ್ರೀ ನಾವಡ ಅವರಿಗೆ ಕರ್ನಾಟಕ ಜಾನಪದ ಅಕಾಡೆಮಿಯ 'ಡಾ. ಜೀಶಂಪ ಜಾನಪದ ತಜ್ಞ ರಾಜ್ಯ ಪ್ರಶಸ್ತಿ' ಸಂದಿದೆ. ಚಾಮರಾಜನಗರದಲ್ಲಿ ಕರ್ನಾಟಕ ಅರಣ್ಯ ಮತ್ತು ಕನ್ನಡ ಸಂಸ್ಕ್ರತಿ ಖಾತೆಯ ಸಚಿವರಾದ ಅರವಿಂದ ಲಿಂಬಾಳಿಯವರು ಡಾ. ಗಾಯತ್ರೀ ನಾವಡ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ಈ ಪ್ರಶಸ್ತಿಯು ಫಲಕ, ಗೌರವ ಪತ್ರ ಮತ್ತು ಐವತ್ತು ಸಾವಿರ ರೂಪಾಯಿಯನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಜಾನಪದ ಕ್ಷೇತ್ರಕ್ಕೆ ಉಪ್ಪಿನಕುದ್ರು ಗೊಂಬೆಯಾಟ ತಂಡದ ಕೊಡುಗೆ ಅಪಾರ. ಇಂದು 7 ನೇ ತಲಾಂತರದಲ್ಲಿ ನಡೆಯುತ್ತಿರುವ ಈ ಕಲೆಯನ್ನು ನಾವೆಲ್ಲರೂ ಸೇರಿ ಉಳಿಸಬೇಕು ಎಂದು ಡಾ. ಹರಿಕೃಷ್ಣ ಪುನರೂರು ಅವರು ಹೇಳಿದರು. ಅವರು ಉಪ್ಪಿನಕುದ್ರು ಗೊಂಬೆ ಮನೆಯಲ್ಲಿ ನಡೆದ ಗೊಂಬೆಯಾಟ ಅಕಾಡೆಮಿಯ 10ನೇ ವಾರ್ಷಿಕೋತ್ಸವ ಹಾಗೂ ಕೊಗ್ಗ ದೇವಣ್ಣ ಕಾಮತ್ ಪ್ರಶಸ್ತಿ -2024ರ ಪ್ರದಾನ ಸಮಾರಂಭದಲ್ಲಿ ಮಾತನಾಡಿದರು. ಕರ್ನಾಟಕ ಯಕ್ಷಗಾನ ಅಕಾಡೆಮಿ ಮಾಜಿ ಅಧ್ಯಕ್ಷ…