Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕ್ರೀಡೆಯಲ್ಲಿ ಭಾಗವಹಿಸುವುದರಿಂದ ದೈಹಿಕ ಹಾಗೂ ಮಾನಸಿಕ ಸ್ವಾಸ್ಥ ಕಾಪಾಡಿಕೊಳ್ಳಬಹುದು: ಜಿಲ್ಲಾಧಿಕಾರಿ
    ಉಡುಪಿ ಜಿಲ್ಲೆ

    ಕ್ರೀಡೆಯಲ್ಲಿ ಭಾಗವಹಿಸುವುದರಿಂದ ದೈಹಿಕ ಹಾಗೂ ಮಾನಸಿಕ ಸ್ವಾಸ್ಥ ಕಾಪಾಡಿಕೊಳ್ಳಬಹುದು: ಜಿಲ್ಲಾಧಿಕಾರಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಸರಕಾರಿ ನೌಕರರು ಪ್ರತಿದಿನ ಕೆಲಸದ ಒತ್ತಡದಲ್ಲಿ ಕಾರ್ಯನಿರ್ವಹಿಸುತ್ತಿರುತ್ತಾರೆ. ನೌಕರರು ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವುದರಿಂದ ಅವರು ದೈಹಿಕವಾಗಿ ಸದೃಢರಾಗುವುದರೊಂದಿಗೆ, ಒತ್ತಡರಹಿತವಾಗಿ ಲವಲವಿಕೆಯಿಂದ ಕಾರ್ಯನಿರ್ವಹಿಸಲು ಸಾಧ್ಯವಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು.

    Click Here

    Call us

    Click Here

    ಅವರು ಅಂದು ನಗರದ ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಜಿಲ್ಲಾ ಶಾಖೆ ಉಡುಪಿ ಇವರ ಜಂಟಿ ಆಶ್ರಯದಲ್ಲಿ ನಡೆದ ರಾಜ್ಯ ಸರಕಾರಿ ನೌಕರರ ಉಡುಪಿ ಜಿಲ್ಲಾ ಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

    ಕ್ರೀಡೆಯಲ್ಲಿ ಭಾಗವಹಿಸುವುದರಿಂದ ದೈಹಿಕ ಹಾಗೂ ಮಾನಸಿಕ ಸ್ವಾಸ್ಥ ಕಾಪಾಡಿಕೊಳ್ಳಬಹುದು. ನೌಕರ ಆರೋಗ್ಯವಾಗಿದ್ದಲ್ಲಿ ಅವರುಗಳ ಕುಟುಂಬವೇ ಆರೋಗ್ಯದಾಯಕವಾಗಿರುತ್ತದೆ. ಸ್ಪರ್ಧೆಯಲ್ಲಿ ಭಾಗವಹಿಸುವ ಪ್ರತಿಯೊಬ್ಬರು ಸೋಲು-ಗೆಲುವುಗಳ ಬಗ್ಗೆ ಗಮನಹರಿಸದೇ ಕ್ರೀಡಾ ಸ್ಪೂರ್ತಿಯನ್ನು ಬೆಳೆಸಿಕೊಂಡು ಸಕ್ರೀಯವಾಗಿ ಭಾಗವಹಿಸಬೇಕು ಎಂದರು.

    ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಮಾತನಾಡಿ, ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವುದರಿಂದ ಪರಸ್ಪರ ಪರಿಚಯವಾಗಿ ಸ್ನೇಹವನ್ನು ಬೆಳೆಸಿಕೊಳ್ಳಬಹುದು. ಇದರಿಂದ ಸರಕಾರಿ ನೌಕರರ ವಲಯದಲ್ಲಿ ಸೌಹಾರ್ದ ವಾತಾವರಣ ನಿರ್ಮಿಸಬಹುದಾಗಿದೆ ಎಂದರು.

    ಇದೇ ಸಂದರ್ಭದಲ್ಲಿ ಸರಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ದಿನಕರ್ ಅಂಪಾರು ಅವರನ್ನು ಸನ್ಮಾನಿಸಲಾಯಿತು.

    Click here

    Click here

    Click here

    Click Here

    Call us

    Call us

    ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ರೋಶನ್ ಕುಮಾರ್ ಶೆಟ್ಟಿ, ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ರಾಜ್ಯ ಪರಿಷತ್ ಸದಸ್ಯ ಆನಂದ ಜತ್ತನ್ನ, ಕಾರ್ಕಳ ತಾಲೂಕು ಅಧ್ಯಕ್ಷ ಬಾಲಕೃಷ್ಣ, ಕುಂದಾಪುರ ತಾಲೂಕು ಅಧ್ಯಕ್ಷ ಡಾ.ನಾಗೇಶ್, ಬೈಂದೂರು ಅಧ್ಯಕ್ಷ ಶೇಖರ ಪೂಜಾರಿ, ಕಾಪು ಅಧ್ಯಕ್ಷ ಬಸವರಾಜ್, ಹೆಬ್ರಿ ಅಧ್ಯಕ್ಷ ತಹಶೀಲ್ದಾರ್ ಪ್ರಸಾದ್, ಕ್ರೀಡಾ ಕಾರ್ಯದರ್ಶಿ ದಿವಾಕರ ನಾಯ್ಕಾ, ದೀಪಾ, ಜಿಲ್ಲೆಯ ವಿವಿಧ ಇಲಾಖೆಗಳ ಸರಕಾರಿ ನೌಕರರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

    ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ದಿನಕರ ಶೆಟ್ಟಿ ಅಂಪಾರು ಸ್ವಾಗತಿಸಿ, ಸತೀಶ್ ಶೆಟ್ಟಿ ಚಿತ್ರಪಾಡಿ ಕಾರ್ಯಕ್ರಮ ನಿರೂಪಿಸಿದರೆ, ಕೋಶಾಧಿಕಾರಿ ದಯಾನಂದ ವಂದಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ

    22/05/2026

    ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ

    22/05/2026

    ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    22/05/2026
    Leave A Reply Cancel Reply

    2 × 1 =

    Call us

    Click Here

    Call us

    Call us

    Call us
    Highest Viewed Recently
    • ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ
    • ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.