ಕುಂದಾಪ್ರ ಡಾಟ್ ಕಾಂ ಸುದ್ದಿ.
ಶಂಕರನಾರಾಯಣ: ಇಲ್ಲಿನ ಪ್ರತಿಷ್ಠಿತ ವಿದ್ಯಾಸಂಸ್ಥೆ ಮದರ್ ತೆರೇಸಾಸ್ ಪದವಿ ಪೂರ್ವ ಕಾಲೇಜಿನಲ್ಲಿ ವ್ಯಾಸಂಗ ಮಾಡಿದ ಹಳೆ ವಿದ್ಯಾರ್ಥಿಗಳಿಂದ ಮಂಗಳೂರು ವಿವಿ ಪರೀಕ್ಷೆಯಲ್ಲಿ ಸಾಧನೆ ಮಾಡಿದ್ದಾರೆ.
ಮಂಗಳೂರು ವಿಶ್ವವಿದ್ಯಾನಿಲಯದ ಎಂಕಾಮ್ ವಿಭಾಗದ ಪರೀಕ್ಷೆಯಲ್ಲಿ ಪ್ರತೀಕ್ಷಾ ಪಿಎಸ್ ದ್ವಿತೀಯ ರ‍್ಯಾಂಕ್, ಕೀರ್ತನಾ ಬಿಸಿಎ ವಿಭಾಗದ ಪರೀಕ್ಷೆಯಲ್ಲಿ ಐದನೇ ರ‍್ಯಾಂಕ್ ಹಾಗೂ ಸಚಿನ್ ವಿಎನ್ ಶ್ರೀನಿವಾಸ್ ವಿಶ್ವವಿದ್ಯಾನಿಲಯ ಮಂಗಳೂರು ಬಿಸಿಎ ವಿಭಾಗದ ಪರೀಕ್ಷೆಯಲ್ಲಿ ನಾಲ್ಕನೇ ರ‍್ಯಾಂಕ್ ಪಡೆದು ಸಂಸ್ಥೆಯ ಕೀರ್ತಿಯನ್ನು ಬೆಳಗಿಸಿದ್ದಾರೆ.
ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಊರ್ಜಿತ ಗೊಳಿಸಿಕೊಂಡು ಪುಟ್ಟ ಪುಟ್ಟ ಹಣತೆಗಳಾಗಿ ಬೆಳಗಿ ಸಂಸ್ಥೆಯ ಕೀರ್ತಿ ಪತಾಕೆಯನ್ನು ಬೆಳಗಿಸುತ್ತಿರುವ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸಂಸ್ಥೆಯ ಆಡಳಿತಮಂಡಳಿ, ಪ್ರಾಂಶುಪಾಲರು, ಉಪ – ಪ್ರಾಂಶುಪಾಲರು, ಬೋಧಕ ಮತ್ತು ಬೋಧಕೇತರ ವೃಂದ ಹಾಗೂ ವಿದ್ಯಾರ್ಥಿಗಳು ಅಭಿನಂದನೆಗಳನ್ನು ಸಲ್ಲಿಸಿರುತ್ತಾರೆ.