Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಪ್ರಾಕೃತಿಕ ವಿಕೋಪಗಳಿಂದ ಉಂಟಾಗುವ ಪ್ರಾಣ ಹಾನಿಯಿಂದ ರಕ್ಷಿಸಿಕೊಳ್ಳಲು ಜಿಲ್ಲಾಡಳಿತದ ಸಲಹೆ ಸೂಚನೆ
    ಉಡುಪಿ ಜಿಲ್ಲೆ

    ಪ್ರಾಕೃತಿಕ ವಿಕೋಪಗಳಿಂದ ಉಂಟಾಗುವ ಪ್ರಾಣ ಹಾನಿಯಿಂದ ರಕ್ಷಿಸಿಕೊಳ್ಳಲು ಜಿಲ್ಲಾಡಳಿತದ ಸಲಹೆ ಸೂಚನೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಪ್ರಕೃತಿ ವಿಕೋಪಗಳಿಂದಾಗಿ ಜಿಲ್ಲೆಯಲ್ಲಿನ ಸಾರ್ವಜನಿಕರ ಮತ್ತು ಜಾನುವಾರುಗಳ ಪ್ರಾಣಹಾನಿಗಳನ್ನು ತಪ್ಪಿಸುವ ನಿಟ್ಟಿನಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ ಈ ಕೆಳಕಂಡಂತೆ ಸಲಹೆ ಹಾಗೂ ಸೂಚನೆಗಳನ್ನು ನೀಡಿದೆ.

    Click Here

    Call us

    Click Here

    ಗುಡುಗು ಮತ್ತು ಸಿಡಿಲು ಸಂದರ್ಭದಲ್ಲಿ ಪಾಲಿಸಬೇಕಾದ ಸಲಹೆ ಸೂಚನೆಗಳು:
    ಪ್ರತಿಕೂಲ ಹವಾಮಾನದ ಸಮಯದಲ್ಲಿ ವಿಶೇಷವಾಗಿ ಕೃಷಿ ಕ್ಷೇತ್ರದಲ್ಲಿ ಕೆಲಸ ಮಾಡಲು, ಜಾನುವಾರುಗಳನ್ನು ಮೇಯಿಸಲು, ಮೀನುಗಾರಿಕೆ ಮತ್ತು ದೋಣಿಗಳನ್ನು ಓಡಿಸಲು ಅಥವಾ ಸಾಮಾನ್ಯ ಪ್ರಯಾಣಕ್ಕಾಗಿ ಮನೆಯಿಂದ ಹೊರಗೆ ಹೋಗುವುದು ಸೂಕ್ತವಲ್ಲ. ಗುಡುಗು-ಸಿಡಿಲಿನ ಸಂದರ್ಭದಲ್ಲಿ ಲೋಹದ ತಗಡನ್ನು ಹೊದಿಸಿರುವ ಮನೆಗಳು ಸುರಕ್ಷಿತವಲ್ಲ. ಸುರಕ್ಷಿತವಾದ ಕಟ್ಟಡಗಳಲ್ಲಿ ಅಶ್ರಯ ಪಡೆಯಬೇಕು. ಬೆಟ್ಟ ಗುಡ್ಡಗಳಂತಹ ಎತ್ತರದ ಪ್ರದೇಶಗಳಿಂದ ಕೆಳಗೆ ಇಳಿದು ಆಶ್ರಯ ಪಡೆಯಬೇಕು. ನೀರಿನ ಮೂಲಗಳಾದ ಕೆರೆ, ತೋಡು ಮತ್ತು ನದಿಗಳಿಂದ ದೂರವಿರಬೇಕು.

    ವಿದ್ಯುತ್ ಉಪಕರಣ ಹಾಗೂ ವಿದ್ಯುತ್ ಸರಬರಾಜು ಮಾರ್ಗ, ದೂರವಾಣಿ ಸಂಪರ್ಕ, ಮೊಬೈಲ್ ಟವರ್, ಪವನ ವಿದ್ಯುತ್ ಗೋಪುರ ಹಾಗೂ ರೈಲು ಹಳಿಗಳಿಂದ ದೂರವಿರುವುದು ಉತ್ತಮ. ವಾಹನ ಚಾಲನೆಯಲ್ಲಿದ್ದರೆ ತಕ್ಷಣವೇ ವಾಹನ ನಿಲ್ಲಿಸಿ ವಾಹನದಲ್ಲಿಯೇ ಆಶ್ರಯ ಪಡೆಯಬೇಕು. ಗುಡುಗು ಸಿಡಿಲಿನ ಸಮಯದಲ್ಲಿ ಗುಂಪಿನಲ್ಲಿದ್ದರೆ, ಅವಾಯವನ್ನು ಕಡಿಮೆ ಮಾಡಲು ಸಾಕಷ್ಟು ಅಂತರವನ್ನು ಕಾಯ್ದುಕೊಳ್ಳಬೇಕು. ಗುಡುಗು ಮತ್ತು ಸಿಡಿಲಿನ ಸಂದರ್ಭದಲ್ಲಿ ಹೊರಾಂಗಣದಲ್ಲಿ ಕೆಲಸ ಮಾಡುತ್ತಿದ್ದರೆ ಮತ್ತು ಸುರಕ್ಷಿತ ಸ್ಥಳದಲ್ಲಿ ಆಶ್ರಯ ಪಡೆಯಲು ಸಾಕಷ್ಟು ಸಮಯವಿಲ್ಲದಿದ್ದರೆ, ಎರಡು ಕಾಲುಗಳನ್ನು ಜೋಡಿಸಿ ಮಂಡಿಯೂರಿ ಕುಳಿತುಕೊಂಡು ತಲೆಯನ್ನು ಬಗ್ಗಿಸಿ ಕಿವಿಗಳನ್ನು ಮುಚ್ಚಿಕೊಳ್ಳಬೇಕು. ಹೊರಗೆ ಹೋಗುವ ಅನಿವಾರ್ಯವಿದ್ದಲ್ಲಿ ಹವಾಮಾನ ಮುನ್ಸೂಚನೆ ಹಾಗೂ ಮುನ್ನಚ್ಛರಿಕೆಗಳನ್ನು ಕಾಮನ್ ಅಲರ್ಟಿಂಗ್ ಪ್ರೋಟೋಕಾಲ್ ಮುಖಾಂತರ ಬರುವ ಮೆಸೇಜ್‌ಗಳನ್ನು ಗಮನಿಸಿ, ಸುರಕ್ಷಿತ ಎನಿಸಿದ್ದಲ್ಲಿ ಮಾತ್ರ ಹೊರಗೆ ತೆರಳಬೇಕು. ವಿದ್ಯುತ್, ಟೆಲಿಫೋನ್ ಕಂಬಗಳು ಅಥವಾ ಮರಗಳು ಮಿಂಚನ್ನು ಆಕರ್ಷಿಸುವುದರಿಂದ ಇವುಗಳ ಕೆಳಗೆ ಅಶ್ರಯ ಪಡೆಯಬಾರದು. ಲೋಹದ ವಸ್ತುಗಳನ್ನು ಬಳಸಬಾರದು ಮತ್ತು ಬೈಕುಗಳು, ವಿದ್ಯುತ್ ಅಥವಾ ದೂರವಾಣಿ ಕಂಬಗಳು, ತಂತಿ ಬೇಲಿ, ಯಂತ್ರಗಳು ಇತ್ಯಾದಿಗಳಿಂದ ದೂರವಿರಬೇಕು.

    ಸಿಡಿಲು ಸಂದರ್ಭದಲ್ಲಿ ಮೊಬೈಲ್ ಫೋನ್‌ಗಳನ್ನು ಬಳಸುವುದು ಸೂಕ್ತವಲ್ಲ. ಕಬ್ಬಿಣದ ಸರಳುಗಳಿಂದ ಕೂಡಿದ ಕೊಡೆ/ಛತ್ರಿಗಳನ್ನು ಬಳಸಬಾರದು. ಗುಡುಗು ಸಿಡಿಲಿನ ಸಮಯದಲ್ಲಿ ಕಿಟಕಿ, ಬಾಗಿಲುಗಳನ್ನು ಮುಚ್ಚಬೇಕು ಮತ್ತು ವಿದ್ಯುತ್ ಶಕ್ತಿ ಸಂಪರ್ಕದಿಂದ ದೂರವಿರಬೇಕು. ಮಕ್ಕಳು, ವಯೋವೃದ್ಧರು ಹಾಗೂ ಜಾನುವಾರುಗಳನ್ನು ಸುರಕ್ಷಿತ ಸ್ಥಳಗಳಲ್ಲಿ ಇರುವಂತೆ ಗಮನಹರಿಸಬೇಕು. ಹಾರುವ ಮತ್ತು ಅಪಘಾತಕ್ಕೆ ಕಾರಣವಾಗಬಹುದಾದ ಮರದ ಕಟ್ಟಿಗೆ ಅಥವಾ ಇತರೆ ಯಾವುದೇ ಅವಶೇಷಗಳನ್ನು ತೆಗೆದುಹಾಕುವುದು ಸೂಕ್ತ. ಸಿಡಿಲು ಸಂದರ್ಭದಲ್ಲಿ ಕಟ್ಟಡದ ಕೊಳಾಯಿ ಮತ್ತು ಲೋಹದ ಕೊಳವೆಗಳ ಮೂಲಕ ವಿದ್ಯುತ್ ಹರಿಯುವ ಸಾಧ್ಯತೆ ಇರುವುದರಿಂದ, ಸಿಡಿಲು ಉಂಟಾಗುವ ಸಂದರ್ಭದಲ್ಲಿ ಸ್ನಾನ ಅಥವಾ ಶವರ್ ತೆಗೆದುಕೊಳ್ಳಬಾರದು, ಪಾತ್ರೆಗಳನ್ನು ತೊಳೆಯಬಾರದು, ಬಟ್ಟೆ ಒಗೆಯಬಾರದು.

    ಗುಡುಗು ಸಿಡಿಲಿನ ಮುನ್ಸೂಚನೆ ಅಥವಾ ಮುನ್ನೆಚ್ಚರಿಕೆ ಇದ್ದಲ್ಲಿ ಪ್ರಯಾಣವನ್ನು ಮುಂದೂಡಬೇಕು. ಈ ಸಮಯದಲ್ಲಿ ಮೋಟರ್ ಸೈಕಲ್ ಅಥವಾ ಇನ್ನಿತರೆ ಯಾವುದೇ ತೆರೆದ ವಾಹನಗಳಲ್ಲಿ ಸಂಚಾರವನ್ನು ಮಾಡಬಾರದು. ಆಟದ ಮೈದಾನ, ಉದ್ಯಾನವನಗಳು, ಈಜುಕೊಳ ಮತ್ತು ಕಡಲ ತೀರಗಳಿಗೆ ಹೋಗುವುದನ್ನು ಆದಷ್ಟು ತಪ್ಪಿಸಬೇಕು. ದೋಣಿ ವಿಹಾರ ಅಥವಾ ಈಜುತ್ತಿದ್ದರೆ, ಸಾಧ್ಯವಾದಷ್ಟು ಸುರಕ್ಷಿತ ಸ್ಥಳದಲ್ಲಿ ಆಶ್ರಯ ಪಡೆಯಬೇಕು. ಸಿಡಿಲಿನ ಸಂದರ್ಭದಲ್ಲಿ ವಾಹನ ಕಿಟಕಿಗಳನ್ನು ಮುಚ್ಚಿ ವಾಹನದ ಒಳಗೆ ಇರಬೇಕು. ಕೆಲವು ಸಲ ಮಿಂಚಿನ ಹೊಡೆತದಿಂದಾಗಿ ಕಾಡಿಚ್ಚು ಸಂಭವಿಸುವ ಸಾಧ್ಯತೆ ಇರುವುದರಿಂದ ಅರಣ್ಯ ಪ್ರದೇಶದಿಂದ ಹಾಗೂ ಗಿಡ-ಮರಗಳಿಲ್ಲದ ಸ್ವಚ್ಛ ಪ್ರದೇಶದ ಕಡೆಗೆ ಚಲಿಸಬೇಕು. 

    Click here

    Click here

    Click here

    Click Here

    Call us

    Call us

     ತುರ್ತು ಸೇವೆಗೆ ಶುಲ್ಕ ರಹಿತ: 1077 ಅಥವಾ ದೂರವಾಣೀ ಸಂಖ್ಯೆ: 0820-2574802 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ

    22/05/2026

    ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ

    22/05/2026

    ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    22/05/2026
    Leave A Reply Cancel Reply

    19 + ten =

    Call us

    Click Here

    Call us

    Call us

    Call us
    Highest Viewed Recently
    • ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ
    • ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.