ಕೊಂಕಣಿ ರೈಲ್ವೆಯನ್ನು ಭಾರತೀಯ ರೈಲ್ವೆ ಇಲಾಖೆಯೊಂದಿಗೆ ವಿಲೀನಗೊಳಿಸುವ ಬಗ್ಗೆ ಸಚಿವರೊಂದಿಗೆ ಚರ್ಚೆ

Click Here

Call us

Call us

Call us

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಕೊಂಕಣಿ ರೈಲ್ವೆಯನ್ನು ಭಾರತೀಯ ರೈಲ್ವೆ ಇಲಾಖೆಯೊಂದಿಗೆ ವಿಲೀನಗೊಳಿಸುವ ಬಗ್ಗೆ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಅವರ ನೇತೃತ್ವದ ಕರಾವಳಿ ಶಾಸಕರ ನಿಯೋಗ ಸೋಮವಾರ ಬೆಂಗಳೂರಿನಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಮೂಲಸೌಕರ್ಯ ಅಭಿವೃದ್ಧಿ ಸಚಿವರಾದ ಎಂ. ಬಿ. ಪಾಟೀಲ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿತು.

Call us

Click Here

ಸಚಿವರನ್ನು ಭೇಟಿಯಾಗಿ ಕೊಂಕಣ ರೈಲ್ವೆ ನಿಗಮವನ್ನು ಭಾರತೀಯ ರೈಲ್ವೆ ಇಲಾಖೆಯೊಂದಿಗೆ ವಿಲೀನಗೊಳಿಸುವುದು ಇದು ಅಭಿವೃದ್ಧಿ ದೃಷ್ಟಿಯಿಂದ ಅವಶ್ಯಕವೆಂದು ಸಂಸದರು ಮತ್ತು ಶಾಸಕರು ಸಚಿವಗೆ ಮನವರಿಕೆ ಮಾಡಿದ್ದು, ಪ್ರಸ್ತಾಪವನ್ನು ಸರಕಾರದ ಮುಂದಿರಿಸುವುದಾಗಿ ತಿಳಿಸಿದ್ದಾರೆ. ಸಂಸದರೊಂದಿಗೆ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿ, ಬೈಂದೂರು ಶಾಸಕ ಗುರುರಾಜ್ ಶೆಟ್ಟಿ ಗಂಟೆಹೂಳೆ, ಕಾರ್ಕಳ ಶಾಸಕರಾದ ವಿ. ಸುನಿಲ್ ಕುಮಾರ್, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಇದ್ದರು.

Leave a Reply