ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಬೆಂಗಳೂರಿನಲ್ಲಿ ನಡೆಯುತ್ತಿರುವ ವಿಧಾನ ಮಂಡಲದ ಬಜೆಟ್ ಅಧಿವೇಶನನದಲ್ಲಿ ಕೊರಗ ಕುಟುಂಬಗಳಿಗೆ ಹಲವಾರು ವರ್ಷಗಳ ಹಿಂದೆ ಸರ್ಕಾರದ ಸಹಾಯಧನದಿಂದ ನಿರ್ಮಿಸಲಾದ ಮನೆಗಳು ಶಿಥಿಲಗೊಂಡಿದ್ದು ಅಂತಹ ಮನೆಗಳನ್ನು ದುರಸ್ತಿ ಪಡಿಸಲು ಸರಕಾರ ಅಗತ್ಯ ಕ್ರಮ ವಹಿಸುವಂತೆ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸ ಗುರುರಾಜ್ ಗಂಟಿಹೊಳೆ ಅವರು ಸರ್ಕಾರವನ್ನು ಆಗ್ರಹಿಸಿದರು.
ಮುಖ್ಯಮಂತ್ರಿ ವಸತಿ ರಹಿತ ಕೊರಗ ಸಮುದಾಯದ ಅರ್ಹ ಫಲಾನುಭವಿಗಳಿಗೆ ಘಟಕ ವೆಚ್ಚ ರೂ. 4.50 ಲಕ್ಷ ಗಳಲ್ಲಿ ಮನೆ ನಿರ್ಮಾಣ ಮಾಡಲಾಗುತ್ತಿದೆ. ಸರ್ಕಾರದ ಸಹಾಯಧನದಿಂದ ನಿರ್ಮಿಸಿರುವ ಮನೆಗಳನ್ನು ಅನುದಾನದ ಲಭ್ಯತೆಗನುಸಾರವಾಗಿ ಪರಿಶೀಲಿಸಿ ದುರಸ್ಥಿ ಪಡಿಸಲು ಕ್ರಮವಹಿಸಲಾಗುವುದು ಎಂದು ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಉತ್ತರಿಸಿದರು.