ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಇಂಡಿಯನ್ ಬುಕ್ ಆಫ್ ರೆಕಾರ್ಡ್ ದಾಖಲೆ ನಿರ್ಮಿಸಿದ ಗಂಗೊಳ್ಳಿ ಎಸ್.ವಿ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಶಾಮ್ ಜಿ.ಎನ್.ಪೂಜಾರಿ ಅವರನ್ನು ಗಂಗೊಳ್ಳಿ ಎಸ್.ವಿ. ಆಂಗ್ಲ ಮಾಧ್ಯಮ ಶಾಲೆಯ ಪರವಾಗಿ ಸನ್ಮಾನಿಸಿ ಗೌರವಿಸಲಾಯಿತು.

ಶಾಲೆಯಲ್ಲಿ ಮಂಗಳವಾರ ನಡೆದ ಸರಳ ಕಾರ್ಯಕ್ರಮದಲ್ಲಿ ಶಾಮ್ ಜಿ.ಎನ್.ಪೂಜಾರಿ ಅವರನ್ನು ಸನ್ಮಾನಿಸಿ ಗೌರವಿಸಿದ ಶಾಲೆಯ ಮುಖ್ಯ ಶಿಕ್ಷಕ ರಾಘವೇಂದ್ರ ಶೇರುಗಾರ್ ಅವರು ಶಾಮ್ ಸಾಧನೆಯನ್ನು ಶ್ಲಾಘಿಸಿ ಶುಭ ಹಾರೈಸಿದರು.
ಶಾಲೆಯ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಶಾಂತಿ ಡಿಕೋಸ್ಟ, ಶಾಲೆಯ ಶಿಕ್ಷಕರು, ಶಿಕ್ಷಕೇತರರು ಮೊದಲಾದವರು ಉಪಸ್ಥಿತರಿದ್ದರು.