ಸತತ 17ನೇ ಬಾರಿ ಆಳ್ವಾಸ್‌ನ ಪುರುಷರ ತಂಡ ಮತ್ತು ಸತತ 14ನೇ ಬಾರಿ ಮಹಿಳೆಯರ ತಂಡ ಸಮಗ್ರ ಚಾಂಪಿಯನ್‌

Click Here

Call us

Call us

Call us

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಮೂಡುಬಿದಿರೆ:
ಮಂಗಳೂರು ವಿಶ್ವವಿದ್ಯಾಲಯ ಮತ್ತು ಆಳ್ವಾಸ್ ದೈಹಿಕ ಶಿಕ್ಷಣ ಕಾಲೇಜಿನ ಜಂಟಿ ಆಶ್ರಯದಲ್ಲಿ ನಡೆದ ಅಂತರ್ ಕಾಲೇಜು ಪುರುಷ ಮತ್ತು ಮಹಿಳೆಯರ ಖೋ- ಖೋ ಟೂರ್ನಮೆಂಟ್-2025ರಲ್ಲಿ ಆಳ್ವಾಸ್ ಕಾಲೇಜಿನ ಪುರುಷರ ತಂಡ ಜಾಕೆ ಪರಮೇಶ್ವರ ಗೌಡ ಮೆಮೋರಿಯಲ್ ರೋಲಿಂಗ್ ಟ್ರೋಪಿಯನ್ನು ಸತತ 17 ನೇ ಬಾರಿ ಹಾಗೂ ಮಹಿಳೆಯರ ತಂಡ ಹೆಚ್‌ವಿ ಕಮಲೇಶ್ ರೋಲಿಂಗ್ ಟ್ರೋಪಿಯನ್ನು ಸತತ 14ನೇ ಬಾರಿ ಪಡೆದು ಸಮಗ್ರ ಚಾಂಪಿಯನ್ಸ್ ಪಟ್ಟ ಅಲಂಕರಿಸಿತು.

Call us

Click Here

ಪುರುಷರ ವಿಭಾಗದಲ್ಲಿ ಆಳ್ವಾಸ್ ಪುರು?ರ ಖೋ-ಖೋ ತಂಡ 28-5 ಅಂಕಗಳ ಅಂತರದಿಂದ ಪುತ್ತೂರಿನ ವಿವೇಕಾನಂದ ಕಾಲೇಜು ವಿರುದ್ಧ ಗೆಲುವು  ಸಾಧಿಸಿದರೆ, ಮಹಿಳೆಯರ ವಿಭಾಗದಲ್ಲಿ  ಆಳ್ವಾಸ್‌ನ ತಂಡ ಏಕಪಕ್ಷೀಯವಾಗಿ 18-0 ಅಂಕಗಳ ಅಂತರದಲ್ಲಿ ಬೆಳ್ತಂಗಡಿಯ ಜಿಎಫ್‌ಜಿಸಿ ಕಾಲೇಜು ವಿರುದ್ಧ ಗೆಲುವು ಸಾಧಿಸಿ ಎರಡು ವಿಭಾಗದಲ್ಲಿ ”ಸಮಗ್ರ ಪ್ರಶಸ್ತಿ”ಗೆ ಭಾಜನವಾಯಿತು.

ವೈಯಕ್ತಿಕ ಪುರುಷರ ಚಾಂಪಿಯನ್‌ಶಿಪ್‌ನಲ್ಲಿ “ಬೆಸ್ಟ್ ಆಲ್ ರೌಂಡರ್ ಪ್ರಶಸ್ತಿ”ಗೆ ಆಳ್ವಾಸ್ ಕಾಲೇಜಿನ ನಿಖಿಲ್ ಮತ್ತು”ಬೆಸ್ಟ್ ಡಿಫೆಂಡರ್ ಪ್ರಶಸ್ತಿ”ಗೆ  ಪ್ರಮೋದ್ ಡಿ ಹಾಗೂ ವೈಯಕ್ತಿಕ ಮಹಿಳೆಯರ ಚಾಂಪಿಯನ್‌ಶಿಪ್‌ನಲ್ಲಿ “ಬೆಸ್ಟ್ ಆಲ್ ರೌಂಡರ್ ಪ್ರಶಸ್ತಿ”ಗೆ ಆಳ್ವಾಸ್ ಕಾಲೇಜಿನ ಪ್ರೇಕ್ಷಾ ಮತ್ತು ”ಬೆಸ್ಟ್ ಚೇಸರ್ ” ಪ್ರಶಸ್ತಿಗೆ ಕವನ ಭಾಜನರಾದರು. 

ಪುರುಷರ ವಿಭಾಗದ ಖೋ-ಖೋ ಚಾಂಪಿಯನ್‌ಶಿಪ್‌ನಲ್ಲಿ ಕಾರ್ಕಳದ ಭುವನೇಂದ್ರ ಕಾಲೇಜಿಗೆ 4ನೇ ಸ್ಥಾನ, ಹಂಪನಕಟ್ಟೆ ವಿ. ವಿ ಕಾಲೇಜಿಗೆ ತೃತೀಯ ಸ್ಥಾನ, ಪುತ್ತೂರಿನ ವಿವೇಕಾನಂದ ಕಾಲೇಜಿಗೆ ರನ್ನರ್ಸ್ ಅಪ್ ಪ್ರಶಸ್ತಿ ಮತ್ತು ಆಳ್ವಾಸ್ ಕಾಲೇಜಿಗೆ ಸತತ 17ನೇ ಬಾರಿ”ಸಮಗ್ರ ಪ್ರಶಸ್ತಿ”ಲಭಿಸಿತು.

ಮಹಿಳೆಯರ ವಿಭಾಗದ ಖೋ-ಖೋ ಚಾಂಪಿಯನ್‌ಶಿಪ್‌ನಲ್ಲಿ ಪುತ್ತೂರಿನ ವಿವೇಕಾನಂದ ಕಾಲೇಜಿಗೆ ತೃತೀಯ ಸ್ಥಾನ ,ಬೆಳ್ತಂಗಡಿಯ ಜಿಎಫ್‌ಜಿಸಿ ಕಾಲೇಜಿಗೆ ರನ್ನರ್ಸ್ ಅಪ್ ಪ್ರಶಸ್ತಿ ಮತ್ತು ಆಳ್ವಾಸ್ ಕಾಲೇಜಿಗೆ ಸತತ 14ನೇ ಬಾರಿ ”ಸಮಗ್ರ ಪ್ರಶಸ್ತಿ”ಲಭಿಸಿತು.

Click here

Click here

Click here

Call us

Call us

ಸಮಾರೋಪ  ಸಮಾರಂಭ: ದೇಸಿ ಕ್ರೀಡೆಯಾದ  ಖೋ- ಖೋ ಆಟವು  ಕ್ರೀಡಾಳುಗಳಲ್ಲಿ ಉತ್ತಮ ಕ್ರೀಡಾ ಮನೋಭಾವವನ್ನು ಹುಟ್ಟು ಹಾಕುವ ಶಕ್ತಿ ಹೊಂದಿದೆ ಎಂದು ಆಳ್ವಾಸ್ ಪ. ಪೂ ಕಾಲೇಜಿನ ಪ್ರಾಂಶುಪಾಲ ಪ್ರೊ ಎಂ. ಸದಾಕತ್ ನುಡಿದರು.

ಕ್ರೀಡೆಯಲ್ಲಿ ಮಾನವೀಯತೆ ಸಾರುವ ಮನೋಭಾವ ಬೆಳೆಸಿಕೊಳ್ಳಿ ಎಂದು ತಿಳಿಸಿದರು. ಖೋ-ಖೋ ಆಟದಲ್ಲಿ ಸ್ಪರ್ಧಾರ್ಥಿಗಳು ಕ್ರೀಡಾ ಸ್ಪೂರ್ತಿ, ಚುರುಕುತನ, ಮತ್ತು ಬದ್ಧತೆಯನ್ನು ಅಳವಡಿಸಿಕೊಂಡು ಗೆಲ್ಲುವುದರ ಕಡೆಗೆ ಶ್ರಮವಿರಲಿ ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಮಂಗಳೂರು ವಿವಿಯ ದೈಹಿಕ ಶಿಕ್ಷಣ ವಿಭಾಗದ ಡಾ. ಪ್ರಸನ್ನ ಕುಮಾರ್ ಬಿ. ಕೆ., ಆಳ್ವಾಸ್ ದೈಹಿಕ ಶಿಕ್ಷಣ ಕಾಲೇಜಿನ ಪ್ರಾಂಶುಪಾಲ ಡಾ. ಮಧು ಜಿ. ಆರ್ , ಆಳ್ವಾಸ್ ಹಣಕಾಸು ಅಧಿಕಾರಿ ಶಾಂತಾರಾಮ್ ಕಾಮತ್, ಆಳ್ವಾಸ್ ಪದವಿ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ತಿಲಕ್ ಶೆಟ್ಟಿ, ವಿವಿಧ ಕಾಲೇಜಿನ ಕ್ರೀಡಾ ನಿರ್ದೇಶಕರು, ಕ್ರೀಡಾಧಿಕಾರಿಗಳು ಪಾಲ್ಗೊಂಡಿದ್ದರು. ಕಾರ್ಯಕ್ರಮವನ್ನು ವಿದ್ಯಾರ್ಥಿನಿ ನಿಯಾ ಸೆಬಾಸ್ಟಿಯನ್ ನಿರೂಪಿಸಿದರು.

Leave a Reply