ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೊಲ್ಲೂರು: ಟಿಪ್ಪರ್ ಲಾರಿಗೆ ಬೈಕ್ ಢಿಕ್ಕಿ ಹೊಡೆದು ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ವಂಡ್ರೆ ಸಮೀಪದ ನೂಜಾಡಿ ಕ್ರಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ.
ಟಿಪ್ಪರ್ ಲಾರಿಯು ಬೈಕನ್ನು ಓವಟೇಕ್ ಮಾಡಿಕೊಂಡು ಹೋಗಿದ್ದು, ಆಗ ಅದಕ್ಕೆ ನಾಯಿ ಅಡ್ಡಬಂತು. ನಾಯಿಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಟಿಪ್ಪರ್ ಚಾಲಕನು ಏಕಾಏಕಿ ಬ್ರೇಕ್ ಹಾಕಿದ ಕಾರಣ ಹಿಂದಿನಿಂದ ಬರುತ್ತಿದ್ದ ಬೈಕ್ ಟಿಪ್ಪರ್‌ಗೆ ಢಿಕ್ಕಿ ಹೊಡೆಯಿತು. ಪರಿಣಾಮ ಗಂಭೀರವಾಗಿ ಗಾಯಗೊಂಡ ಬೈಕ್ ಸವಾರನಿಗೆ ಕುಂದಾಪುರ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಲಾಯಿತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಆತನನ್ನು ಮಣಿಪಾಲದ ದಾಖಲಿಸಲಾಗಿದೆ.
ಟಿಪ್ಪರ್ ಚಾಲಕನ ಅತಿವೇಗ ಹಾಗೂ ನಿರ್ಲಕ್ಷತನ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ಆರೋಪಿಸಲಾಗಿದೆ.