ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಅಂತರ್ ತರಗತಿ ಪ್ರತಿಭಾ ಪ್ರದರ್ಶನ

Click Here

Call us

Call us

Call us

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ವಿದ್ಯಾರ್ಥಿಗಳು ದೊರೆಯುವ ಅವಕಾಶಗಳನ್ನು ಸಮರ್ಥವಾಗಿ ಬಳಸಿಕೊಳ್ಳಬೇಕು. ತನ್ಮೂಲಕ  ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಭಂಡಾರ್ಕಾರ್ಸ್ ಕಾಲೇಜಿನ ವಿಶ್ವಸ್ಥ ಮಂಡಳಿಯ ಹಿರಿಯ ಸದಸ್ಯರಾದ ಕೆ. ಶಾಂತಾರಾಮ್ ಪ್ರಭು ಹೇಳಿದರು.

Call us

Click Here

ಅವರು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಮೂರು ದಿನಗಳ ಕಾಲ ನಡೆಯುತ್ತಿರುವ ವಾರ್ಷಿಕೋತ್ಸವ ಸಮಾರಂಭದ ಮೊದಲ ದಿನ ಅಂತರ್ ತರಗತಿ ಪ್ರತಿಭಾ ಪ್ರದರ್ಶನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕಾರ್ಕಳದ ಭುವನೇಂದ್ರ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ. ಬಿ. ಪದ್ಮನಾಭ ಗೌಡ ಅವರು ಮಾತನಾಡಿ, ಸಂಸ್ಥೆ ಕೇವಲ ಭೌತಿಕ ವಸ್ತುವಲ್ಲ. ವಿದ್ಯಾರ್ಥಿಗಳ  ಭವಿಷ್ಯ ನಿರ್ಮಿಸುವುದು. ಅಭೂತಪೂರ್ವ ವೇದಿಕೆಯನ್ನು ವಿದ್ಯಾರ್ಥಿಗಳಿಗೆ ನೀಡಲಾಗಿದೆ. ಪ್ರತಿಭೆ ಎಲ್ಲರಲ್ಲೂ ಇದೆ. ಆದರೆ ನಿಮ್ಮಲ್ಲಿ ಅಡಗಿರುವ ಪ್ರತಿಭೆಯನ್ನು ಪೋಷಕರು, ಶಿಕ್ಷಕರು ಗುರುತಿಸಬೇಕು. ಉತ್ತಮ ಶಿಕ್ಷಣವು ಪ್ರತಿಭೆಯಾಗಿದೆ. ಇಂತಹ ವೇದಿಕೆಗಳು ನಿಮ್ಮ ಪ್ರತಿಭೆಗೆ ಪ್ರೇರಣೆಯಾಗಲಿ. ಅಲ್ಲದೆ ಕರ್ನಾಟಕದ ಜಾನಪದ ಲೋಕ ಶ್ರೀಮಂತವಾಗಿದೆ. ಯುವಕರು ಇಂತಹ ಜನಪದ ಲೋಕವನ್ನು ಉಳಿಸಿ ಬೆಳೆಸಬೇಕು ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಶುಭಕರಾಚಾರಿ ವಹಿಸಿದ್ದರು.

ವೇದಿಕೆಯಲ್ಲಿ ಆಡಳಿತ ಮಂಡಳಿ ಸದಸ್ಯರಾದ ಯು.ಎಸ್. ಶೆಣೈ, ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ. ಜಿ. ಎಂ.ಗೊಂಡ ಉಪಸ್ಥಿತರಿದ್ದರು.‌

Click here

Click here

Click here

Call us

Call us

ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಹರ್ಷಿತಾ ಕಾರ್ಯಕ್ರಮ ನಿರೂಪಿಸಿದರು. ಕಾಲೇಜಿನ ಐಕ್ಯೂಎಸಿ ಸಂಯೋಜಕರಾದ ಸತ್ಯನಾರಾಯಣ ಹತ್ವಾರ್ ಸ್ವಾಗತಿಸಿದರು. ಕನ್ನಡ ಉಪನ್ಯಾಸಕಿ ಅರ್ಚನಾ ಶೆಟ್ಟಿ  ರಾಜ್ಯಶಾಸ್ತ್ರ ಉಪನ್ಯಾಸಕಿ ಅಕ್ಷತಾ ಪರಿಚಯಿಸಿದರು.

ಪ್ರತಿಭಾ ಪ್ರದರ್ಶನದ ಸಮಾರೋಪ ಸಮಾರಂಭದಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ಪ್ರತಿಭಾ ಪ್ರದರ್ಶನದ ತೀರ್ಪುಗಾರರಾಗಿ ಕಲಾವಿದರಾದ ಗಣೇಶ ಗಂಗೊಳ್ಳಿ ,  ಕೆ. ರಾಧಾಕೃಷ್ಣ ಸಾರಂಗ, ಅನುರಾಧ ಮಯ್ಯ ಅವರು ಆಗಮಿಸಿದ್ದರು. ಸ್ಪರ್ಧೆಯಲ್ಲಿ ಪ್ರಥಮ  ಸ್ಥಾನ ಪ್ರಥಮ ಬಿ.ಕಾಮ್, ದ್ವಿತೀಯ ಬಹುಮಾನ ಬಿ.ಎ, ಮತ್ತು ತೃತೀಯ ಬಹುಮಾನ ತೃತೀಯ ಬಿ.ಕಾಮ್ ವಿದ್ಯಾರ್ಥಿಗಳು ಪಡೆದರು.

ಕಂಪ್ಯೂಟರ್ ವಿಭಾಗದ ಉಪನ್ಯಾಸಕ ರಾಮಚಂದ್ರ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು. ಲಲಿತಾ ಕಲಾ ಸಂಘದ ಸಂಚಾಲಕ ಶಶಾಂಕ್ ಪಟೇಲ್ ವಂದಿಸಿದರು.

Leave a Reply