ಕುಂದಾಪುರ: ಸಮೀಪದ ಹೇರಿಕುದ್ರು ರಾಷ್ಟ್ರೀಯ ಹೆದ್ದಾರಿ ೬೬ರ ಸೇತುವೆಗೆ ಕುಂದಾಪುರ ಅಗ್ನಿ ಶಾಮಕ ದಳದ ಸಿಬ್ಬಂದಿಯೊರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ವರದಿಯಾಗಿದ್ದು, ಮೃತರು ಕುಂದಾಪುರ ಅಗ್ನಿಶಾಮಕ ದಳದ ಸಿಬ್ಬಂದಿ ಮದ್ದುಗುಡ್ಡೆಯ ನಿವಾಸಿ ಭಾಸ್ಕರ(45) ಎಂದು ತಿಳಿದುಬಂದಿದೆ.
ಗುರುವಾರ ರಾತ್ರಿಯ ಪಾಳಿಯಲ್ಲಿದ್ದ ಭಾಸ್ಕರ್ ಶುಕ್ರವಾರ ಬೆಳಿಗ್ಗೆ ಡ್ಯೂಟಿ ಮುಗಿಸಿ ಮನೆಗೆ ಬಂದಿದ್ದರು. ಮನೆಯಲ್ಲಿ ಬೆಳಗ್ಗಿನ ತಿಂಡಿ ತಿಂದು ಅವರ ಟಿವಿಎಸ್ ಬೈಕಿನಲ್ಲಿ ಪೇಟೆಗೆ ತೆರಳಿದ್ದರು. ಸುಮಾರು ಒಂದು ಗಂಟೆಯ ಬಳಿಕ ರಾಷ್ಷ್ರೀಯ ಹೆದ್ದಾರಿ ೬೬ರಲ್ಲಿ ಸಂಗಮ್ ಹೇರಿಕುದ್ರು ಸೇತುವೆಗೆ ಸರಳಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಅಗ್ನಿಶಾಮಕ ದಳದ ನಿಷ್ಠಾವಂತ ಸಿಬ್ಬಂದಿಯಾಗಿದ್ದ ಭಾಸ್ಕರ್ ಉತ್ತಮ ಈಜುಗಾರರಾಗಿದ್ದರು. ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. (ಕುಂದಾಪ್ರ ಡಾಟ್ ಕಾಂ ಸುದ್ದಿ)
ಘಟನಾ ಸ್ಥಳಕ್ಕೆ ಕುಂದಾಪುರ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿಗಳು ಆಗಮಿಸಿ ಶವವನ್ನು ಮೇಲೆತ್ತಿದರು. ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.