ಕಾಂಗ್ರೆಸ್‌ ಸರಕಾರ ಓಟ್‌ ಬ್ಯಾಂಕ್‌, ಓಲೈಕೆ ರಾಜಕಾರಣವೇ ಮುಖ್ಯ ಎಂಬುದನ್ನು ಸಾಬೀತುಪಡಿಸಿದೆ: ಶಾಸಕ ಕಿರಣ್ ಕುಮಾರ್ ಕೊಡ್ಗಿ

Click Here

Call us

Call us

Call us

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ರಾಜ್ಯದ ಅಭಿವೃದ್ಧಿಗಿಂತ ವೋಟ್ ಬ್ಯಾಂಕ್ ರಾಜಕಾರಣವೇ ಮೇಲು ಎಂಬುದನ್ನು ಕಾಂಗ್ರೆಸ್ ಸರಕಾರ ಮತ್ತೊಮ್ಮೆ ಸಾಬೀತುಪಡಿಸಿದೆ. ಮುಸಲ್ಮಾನರಿಗೆ ಶೇ.4ರಷ್ಟು ಮೀಸಲಾತಿ ಕೊಡುವ ಮೂಲಕ ಜಾತಿ ಧರ್ಮಗಳ ಮಧ್ಯ ಬಿರುಕು ಮೂಡಿಸುತ್ತಿರುವುದಲ್ಲದೇ ಮುಸ್ಲಿಮರಿಗಾಗಿ ಸಂವಿಧಾನವನ್ನೇ ಬದಲಾಯಿಸಲು ಹೊರಟಿರುವ ಖಂಡನೀಯ ಎಂದು  ಶಾಸಕ ಕಿರಣ್ ಕುಮಾರ್ ಕೊಡ್ಗಿ ಹೇಳಿದರು.

Call us

Click Here

ಭಾರತೀಯ ಜನತಾ ಪಾರ್ಟಿ ಕುಂದಾಪುರ ಮಂಡಲ ನೇತೃತ್ವದಲ್ಲಿ ಕುಂದಾಪುರ ಶಾಸ್ತ್ರಿ ವೃತ್ತದ ಬಳಿ ಸಂವಿಧಾನ ತಿದ್ದುಪಡಿ ಮಾಡುತ್ತಿವೆ ಎಂಬ ಡಿಸಿಎಂ ಡಿ.ಕೆ ಶಿವಕುಮಾರ್‌ ಅವರ ಹೇಳಿಕೆಯ ವಿರುದ್ಧ ಆಯೋಜಿಸಲಾದ ಪ್ರತಿಭಟನೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ಭಾರತೀಯ ಜನತಾ ಪಾರ್ಟಿ ಕುಂದಾಪುರ ಮಂಡಲ ಅಧ್ಯಕ್ಷ ಸುರೇಶ್ ಶೆಟ್ಟಿ ಗೋಪಾಡಿ ಅವರು  ಸಂವಿಧಾನ ಬದಲಾಯಿಸುತ್ತೇನೆ ಎಂದು ಹೇಳಿಕೆ ನೀಡಿರುವ ಸಂವಿಧಾನ ವಿರೋಧಿ ಡಿಕೆ ಶಿವಕುಮಾರ್ ಅವರಿಗೆ ಧಿಕ್ಕಾರದ ಘೋಷಣೆಗಳ ಮೂಲಕ ಆಕ್ರೋಶ ವ್ಯಕ್ತಪಡಿಸಿದರು. ನಿಕಟ ಪೂರ್ವ ಅಧ್ಯಕ್ಷ ಶಂಕರ ಅಂಕದಕಟ್ಟೆಯವರು ಕಾಂಗ್ರೆಸ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿ ಡಿಕೆ ಶಿವಕುಮಾರ್ ಮಾತನ್ನು ಖಂಡಿಸಿದರು.

ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಧಿಕ್ಕಾರದ ಘೋಷಣೆಗಳನ್ನು ಕೂಗಿ ಡಿಕೆ ಶಿವಕುಮಾರ್ ಅವರ ಪ್ರತಿಕೃತಿ ದಹಿಸಿಲಾಯಿತು.

ಬಿಜೆಪಿ ಕುಂದಾಪುರ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಸತೀಶ್ ಪೂಜಾರಿ ವಕ್ವಾಡಿ ಹಾಗೂ ಸುಧೀರ್ ಕೆ. ಎಸ್. ಕುಂದಾಪುರ ಪುರಸಭಾ ಅಧ್ಯಕ್ಷ ಮೋಹನ್ ದಾಸ್ ಶೆಣೈ, ಉಪಾದ್ಯಕ್ಷೆ ವನಿತಾ ಬಿಲ್ಲವ, ಕುಂದಾಪುರ ಮಂಡಲ  ಉಪಾಧ್ಯಕ್ಷರುಗಳು, ಮಂಡಲದ ಪದಾಧಿಕಾರಿಗಳು ವಿವಿಧ ಮೊರ್ಚಾ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು ಬಿಜೆಪಿ  ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

Click here

Click here

Click here

Call us

Call us

Leave a Reply