ಮದರ್ ತೆರೆಸಾಸ್ ಶಿಕ್ಷಣ ಸಂಸ್ಥೆಯ ಪ್ರಾಕ್ತನ ವಿದ್ಯಾರ್ಥಿ ಆಶಿಕ್, ಅಮೇರಿಕಾದ ಓಪನ್ ಏರ್ ಕಮ್ಯೂನಿಟಿ ರಾಯಭಾರಿ

Click Here

Call us

Call us

Call us

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಶಂಕರನಾರಾಯಣ:
ಕುಂದಾಪುರ ತಾಲೂಕಿನ ಪ್ರತಿಷ್ಠಿತ ವಿದ್ಯಾಸಂಸ್ಥೆಗಳಲ್ಲಿ ಒಂದಾದ ಮದರ್ ತೆರೆಸಾಸ್ ಪದವಿ ಪೂರ್ವ ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿ ಆಶಿಕ್ ಎಸ್. ವಿ. ಅಮೇರಿಕಾದ  ‘ಓಪನ್ ಎಕ್ಯೂ ಸಂಸ್ಥೆ’  ಓಪನ್ ಏರ್ ಕ್ವಾಲಿಟಿ ಕಮ್ಯುನಿಟಿ ರಾಯಭಾರಿಯಾಗಿ ಆಯ್ಕೆ ಮಾಡಿದ್ದಾರೆ. 

Call us

Click Here

ಅವರು ಪೂರ್ವ ಪ್ರಾಥಮಿಕದಿಂದ ಪಿಯುಸಿ ವರೆಗೆ ಮದರ್ ತೆರೇಸಾ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಣ ಪೂರೈಸಿರುವ ಪ್ರತಿಭಾನ್ವಿತ ವಿದ್ಯಾರ್ಥಿಯಾದ, ಪ್ರಸ್ತುತ ಬೆಂಗಳೂರಿನ ಪಂಜುರ್ಲಿ ಲ್ಯಾಬ್ನಲ್ಲಿ ಸಿಇಒ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಕೆಳ ಮತ್ತು ಮಧ್ಯಮ ಆದಾಯದ ದೇಶಗಳಲ್ಲಿ ವಾಯುಗುಣಮಟ್ಟ ಸುಧಾರಣೆ ಮಾಡುವ ನಿಟ್ಟಿನಲ್ಲಿ ಯುವಕರಿಗೆ ನಾಯಕತ್ವ ತರಬೇತಿ ನೀಡಲಾಗುತ್ತದೆ. ವಾಯು ಗುಣಮಟ್ಟದ ದತ್ತಾಂಶವನ್ನು ಬಳಸಿಕೊಂಡು ಶುದ್ಧಹವೆ ಮತ್ತು ವಾಯು ಅಸಮತೋಲನದ ವಿರುದ್ದ ಹೋರಾಟ ನಡೆಸಲು ಮತ್ತು ಸಬಲೀಕರಣಗೊಳಿಸಲು ಸಂಶೋಧನೆಗಳಿಗಾಗಿ ಓಪನ್ ಎಕ್ಯೂ ಒಂದು ವರ್ಷದ ತರಬೇತಿ ನೀಡಲಿದೆ. ಆಶಿಕ್ ಎಸ್. ವಿ. ಈ ಹಿಂದೆ ಪ್ರಜಾವಾಣಿ ಸಾಧಕರ ಪ್ರಶಸ್ತಿಗೆ ಭಾಜನರಾಗಿರುವುದನ್ನು ಸ್ಮರಿಸಬಹುದು.

ಅವರಿಗೆ ಪ್ರಾಂಶುಪಾಲರು, ಆಡಳಿತ ಮಂಡಳಿ, ಬೋಧಕ ಮತ್ತು ಬೋಧಕೇತರ ವೃಂದ, ವಿದ್ಯಾರ್ಥಿಗಳು ಹಾಗೂ ಪಾಲಕರು,  ಅಭಿನಂದನೆ ಸಲ್ಲಿಸಿದ್ದಾರೆ.

Leave a Reply