Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಜಿಲ್ಲೆಯಲ್ಲಿ ಕೈಗಾರಿಕಾ ಪ್ರದೇಶ ವಿಸ್ತೀರ್ಣಕ್ಕೆ ಅಗತ್ಯ ಮೂಲ ಸೌಕರ್ಯಗಳನ್ನು ಕಲ್ಪಿಸಿ: ಜಿಲ್ಲಾಧಿಕಾರಿ
    ಉಡುಪಿ ಜಿಲ್ಲೆ

    ಜಿಲ್ಲೆಯಲ್ಲಿ ಕೈಗಾರಿಕಾ ಪ್ರದೇಶ ವಿಸ್ತೀರ್ಣಕ್ಕೆ ಅಗತ್ಯ ಮೂಲ ಸೌಕರ್ಯಗಳನ್ನು ಕಲ್ಪಿಸಿ: ಜಿಲ್ಲಾಧಿಕಾರಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಜಿಲ್ಲೆಯಲ್ಲಿ ಕೈಗಾರಿಕಾ ಪ್ರದೇಶಗಳ ವಿಸ್ತೀರ್ಣಕ್ಕೆ ಗುರುತಿಸಲಾಗಿರುವ ಜಮೀನಿನ ಭೂ ಸ್ವಾಧೀನ ಪ್ರಕ್ರಿಯೆಯನ್ನು ತ್ವರಿತವಾಗಿ ಕೈಗೊಂಡು, ಹೊಸ ಕೈಗಾರಿಕೆಗಳ ಸ್ಥಾಪನೆಗೆ ಅನುವು ಮಾಡಿಕೊಡಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

    Click Here

    Call us

    Click Here

    ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕೈಗಾರಿಕಾ ಸ್ಪಂದನ ಸಮಿತಿ ಸಭೆ, ಜಿಲ್ಲಾ ಮಟ್ಟದ ಏಕಗವಾಕ್ಷಿ ಸಮಿತಿ ಸಭೆ ಹಾಗೂ ರಫ್ತು ಉತ್ತೇಜನ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    ಜಿಲ್ಲೆಯಲ್ಲಿ ಈಗಾಗಲೇ ಹೊಸ ಕೈಗಾರಿಕಾ ಪ್ರದೇಶಗಳ ನಿರ್ಮಾಣಕ್ಕೆ ವಿವಿಧ ತಾಲೂಕುಗಳಲ್ಲಿ ಭೂಮಿಗಳನ್ನುನ್ನು ಗುರುತಿಸಲಾಗಿದೆ. ಕೆ.ಐ.ಎ.ಡಿ.ಬಿ ಅವರು ಈ ಪ್ರದೇಶಗಳನ್ನು ಸ್ವಾಧೀನಪಡಿಸಿಕೊಂಡು ಕೈಗಾರಿಕೆಗಳ ಸ್ಥಾಪನೆಗೆ ಅಗತ್ಯವಿರುವ ಮೂಲಭೂತ ಸೌಕರ್ಯಗಳಾದ ವಿದ್ಯುಚ್ಛಕ್ತಿ ಸೌಕರ್ಯ, ರಸ್ತೆ, ಚರಂಡಿ ವ್ಯವಸ್ಥೆ ಸೇರಿದಂತೆ ಮತ್ತಿತರ ಸೌಲಭ್ಯಗಳನ್ನು ಕಲ್ಪಿಸಿ, ಹೊಸ ಕೈಗಾರಿಕೆಗಳು ಸ್ಥಾಪನೆಗೊಂಡು ಜನರಿಗೆ ಉದ್ಯೋಗ ದೊರಕಿಸಿಸುವಂತಾಗಬೇಕೆಂದರು.

    ಹೊಸ ಕೈಗಾರಿಕಾ ಪ್ರದೇಶ ನಿರ್ಮಾಣಕ್ಕೆ ಈಗಾಗಲೇ ಹೆಬ್ರಿ ತಾಲೂಕಿನ ಕೆರೆಬೆಟ್ಟು ಗ್ರಾಮದಲ್ಲಿ 31.28 ಎಕ್ರೆ ಹಾಗೂ ಶಿವಪುರ ಗ್ರಾಮದಲ್ಲಿ 45.75 ಎಕ್ರೆ ಜಮೀನು ಸೇರಿದಂತೆ ಒಟ್ಟು 77.03 ಎಕ್ರೆ ಖಾಸಗಿ ಜಮೀನ ಭೂ ಮಾಲೀಕರಿಗೆ ಪೂರ್ಣ ಪರಿಹಾರಧನವನ್ನು ಪಾವತಿಸಿ, ನಿಯಮಾನುಸಾರ ಸ್ವಾಧೀನಪಡಿಸಿಕೊಳ್ಳಲಾಗಿದೆ. ಆದರೆ, 36.56 ಎಕ್ರೆ ಸರ್ಕಾರಿ ಜಮೀನು ಮಂಜೂರಾತಿ ಪ್ರಕ್ರಿಯೆಯು ಬಾಕಿ ಇದೆ. ಈ ಭೂಮಿಯು ಇಕೋ ಸೆನ್ಸಿಟೀವ್ ಝೋನ್‌ನಲ್ಲಿ ಬರುವ ಬಗ್ಗೆ ಪರಿಶೀಲನೆಯನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಮಾಡಬೇಕು ಎಂದರು.

    ಜಿಲ್ಲೆಯ ಶಿವಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಅನುಮತಿ ಪಡೆಯದೇ ಹಾಗೂ ಜಾಗಕ್ಕೆ ಸಂಬಂಧಿಸಿದಂತೆ ಅಗತ್ಯ ದಾಖಲಾತಿ ನೀಡದೇ ಆರ್.ಎಂ.ಸಿ ಚಟುವಟಿಕೆಗಳನ್ನು ನಡೆಸುತ್ತಿದ್ದಾರೆ. ಈ ಬಗ್ಗೆ ಸಂಬಂಧ ಪಟ್ಟ ಮಾಲೀಕರುಗಳಿಗೆ ನೋಟಿಸ್ ನೀಡುವಂತೆ ಸೂಚನೆ ನೀಡಿದ ಅವರು, ಡಾ.ಸರೋಜಿನಿ ಮಹಿಷಿ ವರದಿಯಂತೆ ಸ್ಥಳೀಯರಿಗೆ ಉದ್ಯೋಗಾವಕಾಶ ಕಲ್ಪಿಸಬೇಕು ಎಂದರು.

    Click here

    Click here

    Click here

    Call us

    Call us

    ಬೆಳಪು ಕೈಗಾರಿಕಾ ಪ್ರದೇಶದ ಸಂಪರ್ಕ ರಸ್ತೆ ವಿಸ್ತರಣೆಗೆ ಅಗತ್ಯವಿರುವ ಸ್ವಲ್ಪ ಮಟ್ಟದ ಭೂ ಸ್ವಾಧೀನ ಪ್ರಕ್ರಿಯೆಯನ್ನು ಶೀಘ್ರದಲ್ಲಿಯೇ ಪೂರ್ಣಗೊಳಿಸಿ, ಸಂಪರ್ಕ ರಸ್ತೆ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಸೂಚನೆ ನೀಡಿದರು.

    ಮಿಯ್ಯಾರು ಕೈಗಾರಿಕಾ ಪ್ರದೇಶಗಳಲ್ಲಿ ಪ್ರತಿಯೊಂದು ಕೈಗಾರಿಕಾ ಘಟಕಗಳೂ ಮಳೆ ನೀರು ಕೊಯ್ಲು ಅನ್ನು ಅಳವಡಿಸಿಕೊಳ್ಳಬೇಕು. ಇದರಿಂದಾಗಿ ಸ್ಥಳೀಯವಾಗಿ ನೀರಿನ ಸಮಸ್ಯೆ ಬಗೆಹರಿಸಲು ಸಾಧ್ಯವಾಗುತ್ತದೆ ಎಂದರು. 

    ಜಿಲ್ಲೆಯಲ್ಲಿ ಒಟ್ಟು 22 ರಫ್ತು ಆಧಾರಿತ ಘಟಕಗಳು ಕಾರ್ಯನಿರ್ವಹಿಸುತ್ತಿದ್ದು, ವಿದೇಶಿ ರಫ್ತನ್ನು ಉತ್ತೇಜಿಸುವುದರೊಂದಿಗೆ ಇನ್ನಷ್ಟು ಹೆಚ್ಚಿಸಬೇಕೆಂದರು.

    ಸಭೆಯಲ್ಲಿ ಕೈಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ನಾಗರಾಜ್ ವಿ ನಾಯಕ್, ಕೆ.ಐ.ಎ.ಡಿ.ಬಿ ಅಭಿವೃದ್ಧಿ ಅಧಿಕಾರಿ ಶ್ರೀನಿವಾಸಮೂರ್ತಿ, ಸಣ್ಣ ಕೈಗಾರಿಕಾ ಸಂಘದ ಜಿಲ್ಲಾ ಅಧ್ಯಕ್ಷ ಹರೀಶ್ ಕುಂದರ್, ಜಿಲ್ಲಾ ಕೈಗಾರಿಕಾ ಕೇಂದ್ರದ ಉಪನಿರ್ದೇಶಕ ಸೀತಾರಾಮ ಶೆಟ್ಟಿ, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಅರುಣ್ ಬಿ., ಶಿವಮೊಗ್ಗ ಕೆ.ಎಸ್.ಎಸ್.ಐ.ಡಿ.ಸಿ ಅಸಿಸ್ಟೆಂಟ್ ಜನರಲ್ ಮ್ಯಾನೆಜರ್ ನಾಗಾಭರಣ ಕೆ.ಪಿ, ಜಿಲ್ಲೆಯ ಸಣ್ಣ ಕೈಗಾರಿಕಾ ಉದ್ದಿಮೆದಾರರು ಹಾಗೂ ಮತ್ತಿತರ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಉಡುಪಿ: ವಿದ್ಯಾರ್ಥಿವೇತನ ಸೌಲಭ್ಯಕ್ಕೆ ಅರ್ಜಿ ಆಹ್ವಾನ

    04/07/2026

    ಮುಂಗಾರು ಹಂಗಾಮಿನಲ್ಲಿ ರೈತರಿಂದಲೇ ಬೆಳೆ ಸಮೀಕ್ಷೆಗೆ ಅವಕಾಶ

    04/07/2026

    ವಚನ ಸಾಹಿತ್ಯ ಉಳಿವಿಗೆ ಅವಿರತ ಶ್ರಮ ವಹಿಸಿದ ಫ.ಗು ಹಳಕಟ್ಟಿ: ಎಂ.ಎ ಗಫೂರ್

    03/07/2026
    Leave A Reply Cancel Reply

    five × 1 =

    Call us

    Click Here

    Call us

    Call us

    Call us
    Highest Viewed Recently
    • ಮರಳಿ ಸಾಲಿಗ್ರಾಮ ಯಕ್ಷ ರಂಗದಂಗಳಕ್ಕೆ ಸಮಾರಂಭದಲ್ಲಿ ಕೋಟ ಶಿವಾನಂದ ಅವರಿಗೆ ಸನ್ಮಾನ
    • ಗಾಳಿಯಿಂದ ಹಾನಿಗೊಂಡ ಮನೆಗಳಿಗೆ ಮಾಜಿ ಸಂಸದ ಕೆ. ಜಯಪ್ರಕಾಶ್ ಹೆಗ್ಡೆ ಭೇಟಿ
    • ಜೆಸಿಐ ಶಿರೂರು ಘಟಕಕ್ಕೆ ಜೆಎಸಿ ಗೋಲ್ಡನ್ ಪ್ರೆಸಿಡೆಂಟ್ ಪ್ರಶಸ್ತಿ
    • ಕೋಟ ಸಹಕಾರಿ ವ್ಯವಸಾಯಕ ಸಂಘದ ಸಂಯೋಜನೆಯಲ್ಲಿ ಪಂಚವರ್ಣದ ಹಸಿರು ಹೆಜ್ಜೆ ಆಯೋಜನೆ
    • ಅರೆಶಿರೂರು ಪ್ರೌಢಶಾಲೆಯ ವಿದ್ಯಾರ್ಥಿ ಸರಕಾರ ಉದ್ಘಾಟನೆ ಮತ್ತು ಶ್ರೀ ದೇವಳದಿಂದ ನೀಡಿದ ವಿವಿಧ ಸವಲತ್ತುಗಳ ವಿತರಣೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.