Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ವಿಶೇಷ ಚೇತನರು ನ್ಯೂನ್ಯತೆಗಳನ್ನು ಮೆಟ್ಟಿನಿಂತು ಉನ್ನತ ಸಾಧನೆ ಮಾಡಬೇಕು: ಜಿಲ್ಲಾಧಿಕಾರಿ
    ಉಡುಪಿ ಜಿಲ್ಲೆ

    ವಿಶೇಷ ಚೇತನರು ನ್ಯೂನ್ಯತೆಗಳನ್ನು ಮೆಟ್ಟಿನಿಂತು ಉನ್ನತ ಸಾಧನೆ ಮಾಡಬೇಕು: ಜಿಲ್ಲಾಧಿಕಾರಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ವಿಶೇಷ ಚೇತನರು ಸಮಾಜದಲ್ಲಿ ಆತ್ಮವಿಶ್ವಾಸದಿಂದ ಜೀವನ ನಡೆಸಲು ಸರಕಾರ ಹಾಗೂ ಸಂಘ-ಸಂಸ್ಥೆಗಳು ಅನೇಕ ರೀತಿಯಲ್ಲಿ ಸಹಾಯ-ಸೌಲಭ್ಯಗಳನ್ನು ನೀಡುತ್ತಿದೆ. ವಿಶೇಷ ಚೇತನರು ತಮ್ಮ ನ್ಯೂನ್ಯತೆಗಳನ್ನು ಬದಿಗೊತ್ತಿ ಈ ಎಲ್ಲಾ ಸೌಲಭ್ಯಗಳನ್ನು ಸಮರ್ಪಕ ರೀತಿಯಲ್ಲಿ ಉಪಯೋಗಿಸಿಕೊಂಡು, ಸಮಾಜದಲ್ಲಿ ಉನ್ನತ ಸಾಧನೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು.

    Click Here

    Call us

    Click Here

    ಅವರು ಅಂದು ನಗರದ ಹೋಟೆಲ್ ಚಿತಾರ ಇಲ್ಲಿ ಮಣಿಪಾಲ್ ಟೆಕ್ನಾಲಜೀಸ್ ಲಿಮಿಟೆಡ್, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ಇವರ ಸಹಯೋಗದಲ್ಲಿ ನವ ಜೀವನ – ವಿಶೇಷಚೇತನರಿಗೆ ಬ್ಯಾಟರಿ ಚಾಲಿತ ಗಾಲಿ ಕುರ್ಚಿಗಳ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ, ಮಾತನಾಡಿದರು.

    ವಿಶೇಷ ಚೇತನರು ದುರ್ಬಲರಲ್ಲ ಎಂಬ ಭಾವನೆ ಅವರಲ್ಲಿ ಮೂಡಿಸಲು ಸರಕಾರ ಹಲವು ಯೋಜನೆ ಹಾಗೂ ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ. ಕೆಲವು ಸಂಸ್ಥೆಗಳು ಅವರಿಗೆ ಅಗತ್ಯವಿರುವ ಸಾಧನ ಸಲಕರಣೆಯನ್ನು ಸಹ ನೀಡುತ್ತಿದೆ. ಇವೆಲ್ಲವುಗಳ ಸದುಪಯೋಗವನ್ನು ವಿಶೇಷಚೇತನರು ಪಡೆದುಕೊಳ್ಳಬೇಕು. ಈ ನಿಟ್ಟಿನಲ್ಲಿ ಮಣಿಪಾಲ್ ಟೆಕ್ನಾಲಜೀಸ್ ಸಂಸ್ಥೆಯವರು ಶಿಕ್ಷಣ, ಆರೋಗ್ಯ ಸೇರಿದಂತೆ ಮತ್ತಿತರ ಅವಶ್ಯಕತೆಗಳನ್ನು ಪೂರೈಸಲು ತಮ್ಮ ಸಿ.ಎಸ್.ಆರ್ ನಿಧಿಯನ್ನು ಬಳಸುತ್ತಿದ್ದು, ಇಂದು ವಿಶೇಷ ಚೇತನರಿಗೆ ಸಹಾಯವಾಗುವ ನಿಟ್ಟಿನಲ್ಲಿ ಬ್ಯಾಟರಿ ಚಾಲಿತ ಗಾಲಿಕುರ್ಚಿಗಳನ್ನು ಹಾಗೂ ಶ್ರವಣ ಯಂತ್ರಗಳನ್ನು ನೀಡಲು ಬಳಸುತ್ತಿದ್ದಾರೆ. ಸಂಸ್ಥೆಯು ಇಂತಹ ಸಮಾಜಮುಖಿ ಕೆಲಸಗಳನ್ನು ಹೆಚ್ಚು ಹೆಚ್ಚು ಮಾಡುವಂತಾಗಲಿ ಹಾಗೂ ಸೌಕರ್ಯಗಳು ಅರ್ಹ ಫಲಾನುಭವಿಗಳಿಗೆ ತಲುಪಲಿ ಎಂದರು.

     ಸೌಲಭ್ಯಗಳನ್ನು ಪಡೆದುಕೊಂಡ ಫಲಾನುಭವಿಗಳು ಆತ್ಮವಿಶ್ವಾಸದಿಂದ ಜೀವನ ನಡೆಸಬೇಕು. ಉಪಕರಣಗಳನ್ನು ಜೋಪಾನವಾಗಿ ಇಟ್ಟುಕೊಂಡು ಸಣ್ಣ-ಪಟ್ಟ ದುರಸ್ಥಿಗಳಿದ್ದಲ್ಲಿ ಮೂಲೆಗುಂಪು ಮಾಡದೇ ಅದನ್ನು ಸರಿಪಡಿಸಿ ಮರು ಬಳಕೆ ಮಾಡಬೇಕು ಎಂದರು.

    ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಮಾತನಾಡಿ, ದೇಶದ ನಾಗರಿಕರಂತೆ ವಿಶೇಷ ಚೇತನರಿಗೂ ಸಮಾನ ಅವಕಾಶ ಸಿಗಬೇಕು ಎನ್ನುವುದು ಸಂವಿಧಾನದ ಆಶಯ. ಅದರಂತೆ ವಿಶೇಷಚೇತನರನ್ನು ಸಬಲೀಕರಣವನ್ನಾಗಿ ಮಾಡುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಆರೋಗ್ಯ ಸೇವೆಯಲ್ಲಿ ಹೊಸ ರೀತಿಯ ಉಪಕ್ರಮಗಳನ್ನು ತೆಗೆದುಕೊಳ್ಳುವ ಮೂಲಕ ಜಿಲ್ಲೆ ಮಹತ್ವದ ಸ್ಥಾನ ಪಡೆಯುವಂತಾಗಲಿ ಎಂದ ಅವರು, ಸಲಕರಣೆಗಳನ್ನು ಪಡೆದ ಫಲಾನುಭವಿಗಳು ಅವುಗಳನ್ನು ಸೂಕ್ತ ರೀತಿಯಲ್ಲಿ ಬಳಕೆ ಮಾಡಬೇಕು ಎಂದರು.

    Click here

    Click here

    Click here

    Call us

    Call us

    ಮಣಿಪಾಲ್ ಟೆಕ್ನಾಲಜೀಸ್ ಲಿಮಿಟೆಡ್‌ನ ಜನರಲ್ ಮ್ಯಾನೆಜರ್ ಹೆಚ್.ಆರ್ & ಸಿ.ಎಸ್.ಆರ್ ರೊನಾಲ್ಡ್ ಡಿ ಸೋಜಾ ಯೋಜನೆಯ ಉದ್ದೇಶ ಕುರಿತು ಮಾತನಾಡಿ, 1941 ರಲ್ಲಿ 15 ಜನ ಉದ್ಯೋಗಿಗಳಿಂದ ಸ್ಥಾಪನೆಯಾದ ಮಣಿಪಾಲ್ ಟೆಕ್ನಾಲಜಿಸ್ ಸಂಸ್ಥೆಯು ಇಂದು ದೇಶದಾದ್ಯಂತ ತನ್ನ ಶಾಖೆಯನ್ನು ವಿಸ್ತರಿಸುವುದರೊಂದಿಗೆ ಹಲವಾರು ಜನರಿಗೆ ಉದ್ಯೋಗಾವಕಾಶ ನೀಡಿದೆ.

    ಸಂಸ್ಥೆಯ ಸಿ.ಎಸ್.ಆರ್ ನಿಧಿಯ ಅನುದಾನವನ್ನು ಜವಾಬ್ದಾರಿಯುತವಾಗಿ ಉತ್ತಮ ಕೆಲಸ ಕಾರ್ಯಗಳಿಗೆ ವಿನಿಯೋಗಿಸಿಕೊಂಡು ಬರಲಾಗುತ್ತಿದೆ. ಅದರಲ್ಲೂ ಪ್ರಮುಖವಾಗಿ ಜಿಲ್ಲೆಯು ಶೈಕ್ಷಣಿಕವಾಗಿ ಅಗ್ರಸ್ಥಾನದಲ್ಲಿರುವ ಹಿನ್ನೆಲೆ, ಬಡ ವಿದ್ಯಾರ್ಥಿಗಳಿಗೆ ಕಲಿಕೆಗೆ ಪೂರಕ ವಾತಾವರಣ ಕಲ್ಪಿಸಲು ಜಿಲ್ಲೆಯ ಕೆಲವು ಸರಕಾರಿ ಶಾಲೆಗಳಿಗೆ ಶುದ್ಧ ಕುಡಿಯುವ ನೀರು ಒದಗಿಸಲು, ಶೌಚಾಲಯ ನಿರ್ಮಾಣ, ಸ್ಮಾರ್ಟ್ಕ್ಲಾಸ್, ವಿದ್ಯಾರ್ಥಿವೇತನ ಸೇರಿದಂತೆ ಮತ್ತಿತರ ಮೂಲಭೂತ ಸೌಕರ್ಯ ಕಲ್ಪಿಸಲು, ಕ್ಯಾನ್ಸರ್ ಪೀಡಿತ, ಕಿಡ್ನಿ ಸಮಸ್ಯೆಯಿಂದ ಬಳಲುತ್ತಿರುವ ರೋಗಿಗಳು ಸೇರಿದಂತೆ ಮತ್ತಿತರ ಸಂಕಷ್ಟದಲ್ಲಿರುವ ರೋಗಿಗಳಿಗೆ ವೈದ್ಯಕೀಯ ನೆರವು ನೀಡಲಾಗಿದೆ ಹಾಗೂ ಜಿಲ್ಲೆಯಾದ್ಯಂತ ಇರುವ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಸೋಲಾರ್ ಘಟಕವನ್ನು ಅಳವಡಿಸಲಾಗಿದೆ ಎಂದರು.

    ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗಭೂಷಣ ಉಡುಪ ಮಾತನಾಡಿ, ವಿಕಲಚೇತನರಿಗೆ ಶಕ್ತಿ ಹಾಗೂ ಚೈತನ್ಯ ತುಂಬುವಂತಹ ಚಟುವಟಿಕೆಗಳು ನಿರಂತರವಾಗಿ ನಡೆಯಲಿ ಎಂದು ಶುಭಹಾರೈಸಿದರು.

    ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಪ್ರಶಾಂತ್ ಭಟ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಇದೇ ಸಂದರ್ಭದಲ್ಲಿ ಮಣಿಪಾಲ್ ಲಿಮಿಟೆಡ್ ವತಿಯಿಂದ ನೀಡಲಾದ ಹಿಯರಿಂಗ್ ಏಡ್ ಕಿಟ್ ಅನ್ನು 14 ಜನ ಫಲಾನುಭವಿಗಳಿಗೆ ವಿತರಿಸಲಾಯಿತು, ಏಳು ಜನ ಫಲಾನುಭವಿಗಳಿಗೆ ಬ್ಯಾಟರಿ ಚಾಲಿತ ಗಾಲಿ ಕುರ್ಚಿಯನ್ನು ಹಸ್ತಾಂತರಿಸಲಾಯಿತು ಹಾಗೂ  ಸಾಧನ ಸಲಕರಣೆಯನ್ನು ನೀಡಿದ ಮಣಿಪಾಲ್ ಟೆಕ್ನಾಲಜೀಸ್ ಲಿಮಿಟೆಡ್‌ಗೆ ಕೃತಜ್ಞತಾ ಪತ್ರವನ್ನು ನೀಡಲಾಯಿತು.

    ಸ್ವಯಂ ಚಾಲಿತ ಬ್ಯಾಟರಿಯನ್ನು ಆಪರೇಟ್ ಮಾಡುವ ಕುರಿತು ವೀಡಿಯೋ ಮೂಲಕ ಪ್ರದರ್ಶಿಸಲಾಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ರತ್ನ, ಜಿಲ್ಲೆಯ ವೈದ್ಯಾಧಿಕಾರಿಗಳು, ತಾಲೂಕು ಆರೋಗ್ಯಾಧಿಕಾರಿಗಳು, ಕಾರ್ಯಕ್ರಮ ಅನುಷ್ಠಾನಾಧಿಕಾರಿಗಳು, ಫಲಾನುಭವಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

    ಆಲಂದೂರು ಮಂಜುನಾಥ ಎಸ್. ಗಾಣಿಗ ನಿರೂಪಿಸಿ, ಸ್ವಾಗತಿಸಿ, ವಂದಿಸಿದರು.

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಪ್ರೋತ್ಸಾಹಧನ – ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ

    06/12/2025

    ಇಎಸ್ಐ ಮತ್ತು ಇಪಿಎಫ್ ಸೌಲಭ್ಯದಿಂದ ಉದ್ಯೋಗಳಿಗೆ ಭವಿಷ್ಯದಲ್ಲಿ ಆರ್ಥಿಕ ಭದ್ರತೆ: ಪ್ರತೀಕ್ ಬಾಯಲ್

    06/12/2025

    ಬೈಂದೂರು ಉತ್ಸವ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಸಕ ಗಂಟಿಹೊಳೆ ನೇತೃತ್ವದಲ್ಲಿ ವಿವಿಧ ಇಲಾಖಾ ಅಧಿಕಾರಿಗಳ ಸಭೆ

    05/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಗಿನ್ನಿಸ್ ವರ್ಲ್ಡ್ ರೆಕಾರ್ಡ್ ಚಾಂಪಿಯನ್‌ಶಿಪ್ ರೆಕಾರ್ಡ್ ಕ್ರಿಯೇಟ್‌ಗೈದ ಮಂಜುನಾಥ ಅವರಿಗೆ ಪ್ರಶಸ್ತಿ ಪ್ರದಾನ
    • ಕುಂದಾಪುರದ ರಚಿತಾಗೆ ಕರ್ನಾಟಕ 19 ವರ್ಷದೊಳಗಿನ ಮಹಿಳಾ ಏಕದಿನ ಕ್ರಿಕೆಟ್ ಟೂರ್ನಿ ನಾಯಕತ್ವ
    • ಕುಂದಾಪುರ: ಡಿ.15ರಿಂದ ಅಣಬೆ ಮತ್ತು ಜೇನು ಕೃಷಿ ತರಬೇತಿ
    • ಡಾ. ಬಿ.ಆರ್. ಅಂಬೇಡ್ಕರ್ ಅವರ 69ನೇ ವರ್ಷದ ಪರಿನಿರ್ವಾಣ ದಿನ
    • ಸ್ವಚ್ಛತೆ ಎಂಬುವುದು ಮನೆಮನಗಳನ್ನು ತಲುಪಲಿ: ಸಂಸದ ಕೋಟ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

    %d