ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ರಕ್ತದಾನ ಮಹಾದಾನ. ರಕ್ತದಾನ ಮಾಡುವುದರಿಂದ ರಕ್ತದೊತ್ತಡ ಹಾಗೂ ದೇಹದಲ್ಲಿರುವ ಕೊಬ್ಬನ್ನು ಕಡಿಮೆ ಮಾಡಿಕೊಳ್ಳಬಹುದು ಮತ್ತು ಇತರ ರಕ್ತದಾನದ ಮಹತ್ವನ್ನು ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಕುಂದಾಪುರ ಘಟಕಾಧ್ಯಕ್ಷರಾದ ಎಸ್. ಜಯಕರ ಶೆಟ್ಟಿ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.
ಅವರು ಇಲ್ಲಿನ ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ, ಯುವ ರೆಡ್ ಕ್ರಾಸ್ ಘಟಕದಿಂದ ಹಮ್ಮಿಕೊಳ್ಳಲಾದ ಬೃಹತ್ ರಕ್ತದಾನ ಶಿಬಿರದಲ್ಲಿ ತಮ್ಮ ಆಶಯ ನುಡಿಯನ್ನು ವ್ಯಕ್ತಪಡಿಸಿದರು.
ಶಿಬಿರದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ರಾಮರಾಯ ಆಚಾರ್ಯ ವಹಿಸಿ ಮಾತನಾಡಿ, ಇಂದಿನ ಯುವ ಜನತೆ ರಕ್ತದಾನಗಳಂತಹ ಶ್ರೇಷ್ಠ ಸಮಾಜಮುಖಿ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಿರುವುದು ತುಂಬಾ ಆಶಾದಾಯಕ ವಿಚಾರ ಹೀಗೆ ಬೇರೆ ಬೇರೆ ಚಟುವಟಿಕೆಗಳಲ್ಲಿ ಯುವಕರು ತಮ್ಮನ್ನು ತೊಡಗಿಸಿಕೊಳ್ಳವುದರಿಂದ ಉತ್ತಮ ಸಮಾಜ ನಿರ್ಮಾಣದಲ್ಲಿ ಖಂಡಿತವಾಗಿಯು ಸಹಕಾರಿಯಾಗುತ್ತದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಕುಂದಾಪುರ ಭಾರತೀಯ ರೆಡ್‌ಕ್ರಾಸ್ ಕಾರ್ಯದರ್ಶಿ ಪುರಾಣಿಕ್, ಕುಂದಾಪುರ ಭಾರತೀಯ ರೆಡ್‌ಕ್ರಾಸ್ ಖಜಾಂಚಿ ಶಿವರಾಮ ಶೆಟ್ಟಿ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿಯಾದ ನಾಗರಾಜ ವೈದ್ಯ ಎಂ., ಐಕ್ಯೂಎಸಿ ಸಂಚಾಲಕರಾದ ನಾಗರಾಜ ಯು., ಯುವ ರೆಡ್ ಕ್ರಾಸ್ ಘಟಕ ಸಹ ಸಂಚಾಲಕರಾದ ಡಾ. ಶೇಖರ ಬಿ. ಹಾಗೂ ವಿದ್ಯಾರ್ಥಿ ಪ್ರತಿನಿಧಿ ಆದರ್ಶ ಹಾಗೂ ಭೂಮಿಕಾ ಉಪಸ್ಥಿತರಿದ್ದರು.
ಸಂಚಾಲಕರಾದ ಚೇತನಾ ಎಂ., ಅವರು ಅತಿಥಿಗಳನ್ನು ಸ್ವಾಗತಿಸಿದರು ಹಾಗೂ ಕಾರ್ಯಕ್ರಮವನ್ನು ಸಂಯೋಜಿಸಿದರು.
ಕಾರ್ಯಕ್ರಮವು ಯುವ ರೆಡ್ ಕ್ರಾಸ್ ಘಟಕ ಹಾಗೂ ಭಾರತೀಯ ರೆಡ್ ಕ್ರಾಸ್ ಘಟಕ, ಕುಂದಾಪುರ ಇವರ ಸಂಯುಕ್ತ ಆಶ್ರಯದಲ್ಲಿ ನಡೆಯಿತು. ಸುಮಾರು 125 ವಿದ್ಯಾರ್ಥಿಗಳ ರಕ್ತ ವರ್ಗೀಕರಣ ಮಾಡಲಾಯಿತು ಮತ್ತು ಶಿಬಿರದಲ್ಲಿ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಪ್ರಾಧ್ಯಾಪಕರು ರಕ್ತದಾನ ಮಾಡಿದರು. ಒಟ್ಟು 70 ಯುನಿಟ್ ರಕ್ತವನ್ನು ಸಂಗ್ರಹಿಸಲಾಯಿತು.