ಶ್ರೀ ಕಾಳಾವರ ವರದರಾಜ ಎಂ. ಸ.ಪ್ರ.ದ ಕಾಲೇಜು ಬ್ಯಾಂಕಿಂಗ್ ಮತ್ತು ಸೈಬರ್ ಕ್ರೈಮ್: ಉಪನ್ಯಾಸ

Click Here

Call us

Call us

Call us

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಇಲ್ಲಿನ ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಕುಂದಾಪುರ, ಕೋಟೇಶ್ವರ ಇಲ್ಲಿನ ಆಂತರಿಕ ಗುಣಮಟ್ಟ ಭರವಸಾ ಕೋಶದ ಮಾರ್ಗದರ್ಶನದಲ್ಲಿ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ಆಶ್ರಯದಲ್ಲಿ ಬ್ಯಾಂಕಿಂಗ್ ಮತ್ತು ಸೈಬರ್ ಕ್ರೈಮ್ ಎಂಬ ವಿಷಯದ ಮೇಲೆ ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರುಗಳಿಗೆ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಕರ್ನಾಟಕ ಬ್ಯಾಂಕ್‌ನ ಸಹಯೋಗದೊಂದಿಗೆ ಆಯೋಜಿಸಲಾಗಿತ್ತು.

Call us

Click Here

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕರ್ನಾಟಕ ಬ್ಯಾಂಕ್‌ನ ಕ್ಲಸ್ಟರ್ ಮುಖ್ಯಸ್ಥರಾದ ವಿಷ್ಣುಮೂರ್ತಿ ಉಪಾಧ್ಯಾಯ ಭಾಗವಹಿಸಿ, ಈ ಡಿಜಿಟಲ್ ಯುಗದಲ್ಲಿ ಬ್ಯಾಂಕಿಂಗ್ ವ್ಯವಹಾರ ಮಾಡುವಾಗ ಅತ್ಯಂತ ಜಾಗೃತರಾಗಬೇಕು. ಇಲ್ಲದಿದ್ದಲ್ಲಿ ಗ್ರಾಹಕರು ಆರ್ಥಿಕ ನಷ್ಟ ಅನುಭವಿಸಬೇಕಾಗುತ್ತದೆ. ಒಂದಿಷ್ಟು ಜಾಗೃತೆ ವಹಿಸಿದಲ್ಲಿ ಆನ್‌ಲೈನ್‌ನಿಂದಾಗುವ ಮೋಸಗಳಿಂದ ತಪ್ಪಿಸಿಕೊಳ್ಳಬಹುದು ಎಂದು ತಿಳಿಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ರಾಮರಾಯ ಆಚಾರ್ಯ ಅವರು ಮಾತಾನಾಡುತ್ತಾ, ಡಿಜಿಟಲ್ ಕ್ರಾಂತಿಗೊಂಡ ಈ ಯುಗದಲ್ಲಿ ಎಚ್ಚರವಿಲ್ಲದ ಒಂದು ಹೆಜ್ಜೆ ಆರ್ಥಿಕ ನಷ್ಟಕ್ಕೆ ದಾರಿಯಾಗುವುದು ಎಂದು ಅಭಿಪ್ರಾಯಪಟ್ಟರು.

ಕರ್ನಾಟಕ ಬ್ಯಾಂಕ್ ಹಂಗಳೂರು ಶಾಖೆಯ ಪ್ರಬಂಧಕರಾದ ಪ್ರಮೋದ ಕುಲಕರ್ಣಿ, ಆಂತರಿಕ ಗುಣಮಟ್ಟ ಭರವಸಾ ಕೋಶದ ಸಂಚಾಲಕರಾದ ನಾಗರಾಜ ಯು., ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿಗಳಾದ ನಾಗರಾಜ ವೈದ್ಯ ಎಂ., ವಿದ್ಯಾರ್ಥಿ ಪ್ರತಿನಿಧಿಯಾಗಿ ನಾಗರಾಜ ಸೋಮಯ್ಯ ನಾಯ್ಕ ಉಪಸ್ಥಿತರಿದ್ದರು.

ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ಶೇಖರ ಬಿ. ಕಾರ್ಯಮವನ್ನು ಸಂಘಟಿಸಿ ಪ್ರಾಸ್ಥಾವಿಕ ನುಡಿಗಳನ್ನಾಡಿದರು. ಅಂಜಲಿ ಮತ್ತು ತಂಡ ಪ್ರಾರ್ಥಿಸಿ, ಅಂತಿಮ ಬಿ.ಕಾಂ. ವಿದ್ಯಾರ್ಥಿನಿ ದಿವ್ಯಶ್ರೀ ನಿರೂಪಿಸಿ, ಅಂತಿಮ ಬಿ.ಕಾಂ. ವಿದ್ಯಾರ್ಥಿನಿ ಅಮೃತ ವಂದಿಸಿದರು.

Click here

Click here

Click here

Call us

Call us

Leave a Reply