ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ,ಮಾ30: ಕರ್ತವ್ಯ ಲೋಪದ ಆಧಾರದಲ್ಲಿ ಕುಂದಾಪುರ ಉಪವಿಭಾಗದ ಉಪವಿಭಾಗಾಧಿಕಾರಿಯಾಗಿದ್ದ ಕೆ.ಎ.ಎಸ್. ಕಿರಿಯ ಶ್ರೇಣಿ ಅಧಿಕಾರಿ ಕೆ. ಮಹೇಶ್ ಚಂದ್ರ ಅವರನ್ನು ಕರ್ತವ್ಯದಿಂದ ಅಮಾನತುಗೊಳಿಸಲಾಗಿದೆ.
ಮಹೇಶ್ ಚಂದ್ರ ಅವರನ್ನು ಅಮಾನತುಗೊಳಿಸಿ ಅವರ ವಿರುದ್ಧ ಇಲಾಖಾ ವಿಚಾರಣೆಯನ್ನು ಬಾಕಿ ಇರಿಸಿ, ಕುಂದಾಪುರ ಉಪವಿಭಾಗಾಧಿಕಾರಿ ಹುದ್ದೆಯ ಕರ್ತವ್ಯದಿಂದ ಬಿಡುಗಡೆಗೊಳಿಸಲಾಗಿದೆ. ಮುಂದಿನ ಆದೇಶದ ತನಕ ಬ್ರಹ್ಮಾವರ ತಹಶೀಲ್ದಾರ್ ಶ್ರೀಕಾಂತ್ ಎಸ್. ಹೆಗ್ಡೆ ಅವರನ್ನು ಪ್ರಭಾರ ಉಪವಿಭಾಗಾಧಿಕಾರಿಯಾಗಿ ಉಡುಪಿ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಅವರು ಆದೇಶಿಸಿದ್ದಾರೆ.
ಇದನ್ನೂ ಓದಿ ► ನಿಷೇಧಿತ ಬೆಳಕು ಹಾಗೂ ಬುಲ್ ಟ್ರಾಲ್ ಮೀನುಗಾರಿಕೆ ಮುಂದುವರಿಸಿದರೆ ಕಾನೂನು ಕ್ರಮ – https://kundapraa.com/?p=83765 .
