ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ: ರಸ್ತೆ ದಾಟುತ್ತಿದ್ದ ಗಿಳಿಯಾರು ನಿವಾಸಿ ಗಣಪ ದೇವಾಡಿಗ (68) ಅವರು ಬಸ್ಸು ಢಿಕ್ಕಿಯಾಗಿ ಸಾವನ್ನಪ್ಪಿದ ಘಟನೆ ಇಲ್ಲಿನ ಪಶು ಆಸ್ಪತ್ರೆ ಎದುರು ಇತ್ತೀಚಿಗೆ ಸಂಭವಿಸಿದೆ.
ಅವರು ಸಂಜೆ ಕೆಲಸ ಮುಗಿಸಿ ಮನೆಗೆ ಹೋಗಲೆಂದು ರಸ್ತೆ ದಾಟುತ್ತಿದ್ದ ವೇಳೆ ಕುಂದಾಪುರದಿಂದ ಉಡುಪಿ ಕಡೆಗೆ ಸಂಚರಿಸುತ್ತಿದ್ದ ಬಸ್ಸು ಢಿಕ್ಕಿಯಾದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಸ್ಥಳೀಯರು ತಕ್ಷಣ ಕೋಟ ಸರಕಾರಿ ಆಸ್ಪತ್ರೆಗೆ ಕೊಂಡೊಯ್ದರು. ಅಲ್ಲಿಗೆ ತಲುಪುವ ಮೊದಲೇ ಅವರು ಮೃತಪಟ್ಟಿದ್ದರು ಎಂದು ಪರೀಕ್ಷಿಸಿದ ವೈದ್ಯರು ತಿಳಿಸಿದರು.
ಮೃತರು ಕೃಷಿಕರಾಗಿದ್ದು, ಪತ್ನಿ, ಇಬ್ಬರು ಪುತ್ರಿಯರು ಹಾಗೂ ಪುತ್ರನನ್ನು ಅಗಲಿದ್ದಾರೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










