ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿಯಾಗಿ ವಕ್ವಾಡಿಯ ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬ್ರಹ್ಮಾವರ:
ಬೇಸಿಗೆ ಶಿಬಿರಕ್ಕಾಗಿ ಶಾಲೆಗೆ ತೆರಳಲು ರಸ್ತೆ ದಾಟುತ್ತಿದ್ದ ಬಾಲಕನಿಗೆ ಕುಂದಾಪುರ ಕಡೆಯಿಂದ ಬರುತ್ತಿದ್ದ ಕಾರು ಡಿಕ್ಕಿಯಾದ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಬ್ರಹ್ಮಾವರದ ಖಾಸಗಿ ಆಸ್ಪತ್ರೆ ಎದುರಿನ ರಾಷ್ಟ್ರೀಯ ಹೆದ್ದಾರಿ 66 ಸಮೀಪ ಮಂಗಳವಾರ ಬೆಳಿಗ್ಗೆ ನಡೆದಿದೆ.

Call us

Click Here

ಮೃತ ಬಾಲಕ ಸ್ಥಳೀಯ ಎಸ್ ಎಮ್ ಎಸ್ ಆಂಗ್ಲ ಮಾಧ್ಯಮ ಶಾಲೆಯ 6ನೇ ತರಗತಿ ವಿದ್ಯಾರ್ಥಿ, ವಕ್ವಾಡಿ ಹೆಬ್ಬಾಗಿಲು ಮನೆ ಸಂತೋಷ್‌ ಶೆಟ್ಟಿ ಎಂಬುವರ ಪುತ್ರ ವಂಶಿ ಜಿ. ಶೆಟ್ಟಿ (14) ಎಂದು ಗುರುತಿಸಲಾಗಿದೆ.

ಬಾಲಕ ವಂಶಿ ಜಿ. ಶೆಟ್ಟಿ ಶಾಲೆಗೆ ತೆರಳಲು ರಸ್ತೆ ದಾಟುತ್ತಿದ್ದ ವೇಳೆಯಲ್ಲಿ ಕುಂದಾಪುರ ಭಾಗದಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕಾರು ಬಾಲಕನಿಗೆ ಡಿಕ್ಕಿ ಹೊಡೆದ ರಭಸಕ್ಕೆ ಬಾಲಕ ಸ್ಥಳದಲ್ಲಿಯೇ ಸಾವನಪ್ಪಿದ್ದಾನೆ. ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply