ಸಮರ್ಪಕವಾಗಿ ಇ- ಸಂಪನ್ಮೂಲಗಳನ್ನು ಬಳಸುವುದರಿಂದ ಗುಣಮಟ್ಟದ ಸಂಶೋಧನೆ ಸಾಧ್ಯ: ಪ್ರೇಮ

Click Here

Call us

Call us

Call us

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ವೇಗವಾಗಿ ಬೆಳೆಯುತ್ತಿರುವ ಮಾಹಿತಿ ತಂತ್ರಜ್ಞಾನ ಯುಗದಲ್ಲಿ ಹಲವಾರು ಮಾಧ್ಯಮಗಳ ಮೂಲಕ ಇ-ಸಂಪನ್ಮೂಲ ಲಭ್ಯವಿದ್ದು ಇವುಗಳನ್ನು ಶಿಕ್ಷಕರು ಸೂಕ್ತ ರೀತಿಯಲ್ಲಿ ಬಳಸಿಕೊಂಡಲ್ಲಿ ತಮ್ಮ ಶೈಕ್ಷಣಿಕ ಗುಣಮಟ್ಟವನ್ನು ಹೆಚ್ಚಿಸಿಕೊಳ್ಳುವುದರ ಜೊತೆಗೆ ಉತ್ತಮ ಗುಣಮಟ್ಟದ ಸಂಶೋಧನೆ ಸಾಧ್ಯ ಎಂದು ತೀರ್ಥಹಳ್ಳಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಗ್ರಂಥಪಾಲಕರಾದ ಪ್ರೇಮ ಅಭಿಪ್ರಾಯಪಟ್ಟರು.

Call us

Click Here

ಅವರು ಇಲ್ಲಿನ ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಕುಂದಾಪುರ, ಅಂಚೆ ಕೋಟೇಶ್ವರ ಇಲ್ಲಿನ ಆಂತರಿಕ ಗುಣಮಟ್ಟ ಭರವಸಾ ಕೋಶ ಹಾಗೂ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗದ ವತಿಯಿಂದ ಆಯೋಜಿಸಲಾಗಿದ್ದ ಒಂದು ದೇಶ ಒಂದು ಚಂದಾದಾರತ್ವ ಈ ವಿಚಾರವಾಗಿ ನಡೆದ ಕಾರ್ಯಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.

ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ರಾಮರಾಯ ಆಚಾರ್ಯ ವಹಿಸಿದ್ದರು.

ಕಾಲೇಜಿನ ಆಂತರಿಕ ಗುಣಮಟ್ಟ ಭರವಸಾ ಕೋಶದ ಸಂಚಾಲಕರಾದ ನಾಗರಾಜ ಯು, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿಯಾದ ನಾಗರಾಜ ವೈದ್ಯ ಎಂ. ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾರ್ಯಾಗಾರವನ್ನು ಸಂಘಟಿಸಿದ ಕಾಲೇಜಿನ ಗ್ರಂಥಪಾಲಕರಾದ ವೆಟರನ್ ರವಿಚಂದ್ರ ಹೆಚ್. ಎಸ್. ಸ್ವಾಗತಿಸಿ, ಪ್ರಥಮ ಎಂ.ಕಾಂ. ವಿದ್ಯಾರ್ಥಿ ರಶ್ಮಿ ಉಡುಪ ಪ್ರಾರ್ಥಿಸಿ, ಚೈತನ್ಯ ನಿರೂಪಿಸಿ ಹಾಗೂ ಚೇತನ್ ವಂದಿಸಿದರು

Click here

Click here

Click here

Call us

Call us

Leave a Reply