ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಗ್ರಾಮಾಂತರ ಪ್ರದೇಶದಲ್ಲಿ ಸಮಪರ್ಕಕ ಕೆಎಸ್‌ಆರ್‌ಟಿಸಿ ಬಸ್ ಸೌಲಭ್ಯವಿಲ್ಲದ ಕಾರಣ ರಾಜ್ಯ ಸರ್ಕಾರ ಜಾರಿಗೆ ತಂದ ಶಕ್ತಿ ಯೋಜನೆಯಿಂದ ಮಹಿಳೆಯರು ವಂಚಿತರಾಗುವಂತಾಗಿದೆ. ಕೆಎಸ್‌ಆಟರ್‌ಟಿಸಿ ಫರ್ಮಿಟ್ ಹೊಂದಿರುವ ಎಲ್ಲಾ ಭಾಗಕ್ಕು ಬಸ್ ವ್ಯವಸ್ಥೆ ಕಲ್ಪಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಬೈಂದೂರು ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಮೋಹನ್ ಪೂಜಾರಿ ಹೇಳಿದರು.
ಅವರು ಇಲ್ಲಿನ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಗ್ಯಾರಂಟಿ ಅನುಷ್ಠಾನ ಸಮಿತಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಕೆಎಸ್‌ಆಟ್‌ಟಿಸಿ ಅಧಿಕಾರಿ, ತಾಲೂಕು ವ್ಯಾಪ್ತಿಯಲ್ಲಿರುವ ಪರ್ಮಿಟ್ ಹೊಂದಿರುವ ಎಲ್ಲಾ ಭಾಗಗಳಿಗೂ ಬಸ್ ವ್ಯವಸ್ಥೆ ಕಲ್ಪಿಸಲು ನಮ್ಮಲ್ಲಿ ಅಗತ್ಯ ಬಸ್‌ಗಳಿವೆ, ಆದರೆ ಚಾಲಕ, ನಿರ್ವಾಹಕರು ಸೇರಿದಂತೆ ಸುಮಾರು 35 ಸಿಬ್ಬಂದಿಗಳ ಕೊರತೆಯಿರುವುದರಿಂದ ಪ್ರಸ್ತುತ ಹೆಚ್ಚುವರಿ ಬಸ್ ವ್ಯವಸ್ಥೆ ಕಲ್ಪಿಸಲು ಸಾಧ್ಯವಾಗುತ್ತಿಲ, ಶೀಘ್ರ ಗುತ್ತಿಗೆ ಆಧಾರದ ಮೇಲೆ ಸಿಬ್ಬಂದಿಗಳನ್ನು ನೇಮಕ ಮಾಡಿಕೊಂಡು ಗ್ರಾಮೀಣ ಭಾಗಗಳಿಗೆ ಅಗತ್ಯ ಬಸ್ ವ್ಯವಸ್ಥೆ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು.
ಬೈಂದೂರಿನ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಕಾಮಗಾರಿ ಪೂರ್ಣಗೊಳಿಸಲು ಇನ್ನೂ ಸುಮಾರು 75 ಲಕ್ಷ ಅನುದಾನ ಅಗತ್ಯವಿದೆ ಎಂದ ಅವರು ಬೈಂದೂರಿನಲ್ಲಿ ಕೆಎಸ್‌ಆರ್‌ಟಿಸಿ ಡಿಪೋ ನಿರ್ಮಾಣಗೊಂಡರೆ ಈ ಭಾಗದಲ್ಲಿ ಸಮರ್ಪಕ ಸಾರಿಗೆ ವ್ಯಸ್ಥೆ ಕಲ್ಪಿಸಲು ಅನುಕೂಲವಾಗುತ್ತದೆ ಎಂದರು.
ಬೈಂದೂರು ತಾಲೂಕು ವ್ಯಾಪ್ತಿಯಲ್ಲಿ 603 ಕುಟುಂಬಗಳು ನಾನಾ ಕಾರಣಗಳಿಂದಾಗಿ ಗೃಹಲಕ್ಷ್ಮೀ ಯೋಜನೆಯಿಂದ ವಚಿಚಿತರಾಗಿದ್ದು, 72 ಕುಟುಂಬಗಳು ಹೊಸ ನೊಂದಾವಣೆಯಾಗಿದೆ ಎಂದು ಶಿಶು ಅಭಿವೃದ್ದಿ ಇಲಾಖೆಯ ಅಕಾರಿಗಳು ಮಾಹಿತಿ ನೀಡಿದರು.
ಸರ್ಕಾರದ ಪಂಚ ಗ್ಯಾರಂಟಿ ಯೋಜನೆಯಿಂದ ಬೈಂದೂರು ತಾಲೂಕಿಗೆ ಇದುವರೆಗೆ ಸುಮಾರು 167.59 ಕೋಟಿ ರೂ. ವೆಚ್ಚಮಾಡಲಾಗಿದೆ. ಗೃಹಲಕ್ಷ್ಮೀ ಯೋಜನೆಯಿಂದ 88.12 ಕೋಟಿ ಜಮಾ ಆಗಿದೆ. ತಾಂತ್ರಿಕ ಕಾರಣದಿಂದಾಗಿ 479 ಫಲಾನುಭವಿಗಳಿಗೆ ಬಾಕಿಯಿದೆ. ಗೃಹ ಜ್ಯೋತಿ ಯೋಜನೆಯಿಂದ ಬೈಂದೂರು ಮೆಸ್ಕಾಂ ಉಪಕೇಂದ್ರ ವ್ಯಾಪ್ತಿಯ 27,748 ಕುಟುಂಬಗಳಿಗೆ 29.41 ಕೋಟಿ ರೂ., ತಲ್ಲೂರು ಮೆಸ್ಕಾಂ ಉಪ ಕೇಂದ್ರ ವ್ಯಾಪ್ತಿಯ 1935ಕುಟುಂಬಗಳಿಗೆ 1.87 ಕೋಟಿ ರೂ. ಸೇರಿದಂತೆ ಸುಮಾರು 31.28 ಕೋಟಿ ರೂ. ವೆಚ್ಚವಾಗಿದೆ.
ಅನ್ನಭಾಗ್ಯ ಯೋಜನೆಯಡಿ 25,182 ಪಡಿತರ ಚೀಟಿಗಳಿಗೆ 1,89,610 ರೂ. ನೇರವಾಗಿ ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗಿದೆ. ಯುವ ನಿ ಯೋಜನೆಯಡಿ 340 ಫಲಾನುಭವಿಗಳಿಗೆ 59.34 ಲಕ್ಷ ರೂ. ಜಮಾ ಆಗಿದೆ. ಶಕ್ತಿ ಯೋಜನೆಯಡಿ ಇದುವರೆಗೆ 1.30 ಕೋಟಿ ಮಹಿಳೆಯರು ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸಿದ್ದು 45.69 ಕೋಟಿ ರೂ. ರಿಯಾಯಿತಿ ಪಡೆದಿದ್ದಾರೆ ಎಂದರು.
ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಕಾರಿ ಡಾ. ರವಿಕುಮಾರ್ ಹುಕ್ಕೇರಿ, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಸದಸ್ಯರಾದ ಪ್ರಭಾಕರ ನಾಯ್ಕ, ಮಾಲತಿ ಶಿವಾನಂದ, ರಾಮ ಪೂಜಾರಿ, ಅನೀಶ್ ಪೂಜಾರಿ, ರಾಘವೇಂದ್ರ ಬಿಲ್ಲವ, ದೇವದಾಸ್ ವಿ.ಜೆ., ಬಾಬು ದೇವಾಡಿಗ, ರಾಮಚಂದ್ರ ಖಾರ್ವಿ, ಮುಕ್ರಿ ಮೊಹಮ್ಮದ್ ಅಲ್ತಾಫ್ ಉಪಸ್ಥಿತರಿದ್ದರು.